AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ

ISRO Chandrayaan-3 | ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ
ಚಂದ್ರಯಾನ
TV9 Web
| Edited By: |

Updated on:Jul 28, 2021 | 5:09 PM

Share

ನವದೆಹಲಿ: ಕೋವಿಡ್ ಅಟ್ಟಹಾಸದಿಂದ ಮುಂದೂಡಲ್ಪಟ್ಟಿದ್ದ ಚಂದ್ರಯಾನ-3 ಮಿಷನ್​ಗೆ 2022ರ ಅಂತ್ಯದ ವೇಳೆಗೆ ಇಸ್ರೋ (ISRO) ಚಾಲನೆ ನೀಡುವ ಸಾಧ್ಯತೆಯಿದೆ. ಎಲ್ಲ ಸರಿಯಾಗಿದ್ದರೆ 2021ರ ಡಿಸೆಂಬರ್​ನಲ್ಲಿ ಇಸ್ರೋದ ಬಹುನಿರೀಕ್ಷಿತ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಉಡಾವಣೆಗೊಳ್ಳಬೇಕಿತ್ತು. ಆದರೆ, ಕೊರೋನಾದಿಂದಾಗಿ ಆ ಯೋಜನೆ ಮುಂದೂಡಲ್ಪಟ್ಟಿದ್ದು, 2022ರ ಜುಲೈ-ಆಗಸ್ಟ್​ ಒಳಗೆ ಚಂದ್ರಯಾನ-3 ಚಾಲನೆಗೊಳ್ಳಲಿದೆ.

ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ. ಇಂದು ಲೋಕಸಭಾ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಿತೇಂದ್ರ ಸಿಂಗ್, ಕೊರೋನಾದಿಂದಾಗಿ ಚಂದ್ರಯಾನ-3ರ ಯೋಜನೆ ಮುಂದೂಡಲ್ಪಟ್ಟಿದೆ. ಅದಕ್ಕಾಗಿ ಇಸ್ರೋದ ವಿಜ್ಞಾನಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಮುಂದಿನ ವರ್ಷ ಆಗಸ್ಟ್​ ವೇಳೆಗೆ ಚಂದ್ರಯಾನ-3 ಉಡಾವಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಚಂದ್ರನ ಮೇಲ್ಭಾಗದಲ್ಲಿ ಲ್ಯಾಂಡರ್ ಅನ್ನು ಇಳಿಸುವ ಇಸ್ರೋದ ಚಂದ್ರಯಾನ-2ಗೆ 2019ರ ಜುಲೈ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಆದರೂ ಆಗಸ್ಟ್ ತಿಂಗಳಲ್ಲಿ ಆರ್ಬಿಟರ್ ಅನ್ನು ಚಂದ್ರನ ಕಕ್ಷೆಯಲ್ಲಿ ಇಳಿಸುವಲ್ಲಿ ಇಸ್ರೋ ಯಶಸ್ವಿಯಾಗಿತ್ತು.

ಚಂದ್ರಯಾನ-3 ಗಗನಯಾನಕ್ಕೆ ಈ ವರ್ಷದ ಡಿಸೆಂಬರ್​ನಲ್ಲಿ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ, ಕೊರೋನಾದಿಂದಾಗಿ ಅದು ಮುಂದೂಡಿಕೆಯಾಗಿತ್ತು. ಈ ಗಗನಯಾನಕ್ಕೆ 10,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2022ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತವೆ. ಈ ನೆನಪಿನಲ್ಲಿ ಭಾರತದ ಬಹು ನಿರೀಕ್ಷಿತ ಚಂದ್ರಯಾನವೂ ಉಡಾವಣೆಯಾಗಲಿದೆ.

ಇದನ್ನೂ ಓದಿ: Chandrayaan 2 ಜುಲೈ 22 ಇಸ್ರೊಗೆ ಐತಿಹಾಸಿಕ ದಿನ; ಚಂದ್ರಯಾನ-2 ಬಗ್ಗೆ ಇಲ್ಲಿದೆ ಆಸಕ್ತಿಕರ ಸಂಗತಿ

(Chandrayaan 3 to be launched by ISRO in third quarter of 2022 Union Minister Jitendra Singh Announces)

Published On - 5:06 pm, Wed, 28 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ