ಸಂಸತ್ ಅಧಿವೇಶನ: ಕಾಂಗ್ರೆಸ್​ ಸಂಸದರ ಸೀಟಿನಡಿ ಕಂತೆ ಕಂತೆ ನೋಟು ಪತ್ತೆ, ಸದನದಲ್ಲಿ ಗದ್ದಲ

|

Updated on: Dec 06, 2024 | 12:24 PM

ಸಂಸತ್​ ಚಳಿಗಾಲದ ಅಧಿವೇಶನ ನಡೆಯುತ್ತಿದೆ, ಇಂದು ಕಾಂಗ್ರೆಸ್​ನ ರಾಜ್ಯಸಭಾ ಸಂಸದರೊಬ್ಬರ ಸೀಟಿನಡಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಯಾಗಿತ್ತು.

ಸಂಸತ್ ಅಧಿವೇಶನ: ಕಾಂಗ್ರೆಸ್​ ಸಂಸದರ ಸೀಟಿನಡಿ ಕಂತೆ ಕಂತೆ ನೋಟು ಪತ್ತೆ, ಸದನದಲ್ಲಿ ಗದ್ದಲ
ರಾಜ್ಯಸಭೆ
Follow us on

ಸಂಸತ್​ ಚಳಿಗಾಲದ ಅಧಿವೇಶನ ನಡೆಯುತ್ತಿದೆ, ಇಂದು ಕಾಂಗ್ರೆಸ್​ನ ರಾಜ್ಯಸಭಾ ಸಂಸದರೊಬ್ಬರ ಸೀಟಿನಡಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಯಾಗಿದೆ. ರಾಜ್ಯಸಭಾ ಸಂಸದರ ಸೀಟಿನ ಸಂಖ್ಯೆ 222 ರ ಅಡಿಯಲ್ಲಿ 500 ರೂ ನೋಟುಗಳ ಬಂಡಲ್ ಪತ್ತೆಯಾಗಿದೆ. ಮೂಲಗಳ ಪ್ರಕಾರ ಅದರಲ್ಲಿ 50 ಸಾವಿರ ರೂ. ಹಣವಿತ್ತು.

ತೆಲಂಗಾಣದಿಂದ ಕಾಂಗ್ರೆಸ್​ ಸಂಸದರಾಗಿ ಆಯ್ಕೆಯಾಗಿರುವ ಅಭಿಷೇಕ್ ಮನುಸಿಂಘ್ವಿ ಅವರು ಕುಳಿತುಕೊಳ್ಳುವ ಸೀಟಿನಲ್ಲಿ ಹಣವಿತ್ತು ಎಂದು ಹೇಳಲಾಗಿದೆ. ಸಭಾಪತಿ ಧಂಖರ್ ಅವರ ಈ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದರು. ತನಿಖೆಗೆ ಮುನ್ನ ಹೆಸರು ಹೇಳಬಾರದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ಅಭಿಷೇಕ್ ಮನು ಸಿಂಘ್ವಿ ಆರೋಪವನ್ನು ಅಲ್ಲಗಳೆದಿದ್ದಾರೆ. ರಾಜ್ಯಸಭೆಗೆ ಹೋದಾಗಲೆಲ್ಲ 500 ರೂಪಾಯಿ ನೋಟು ಹಿಡಿದು ಬರುತ್ತೇನೆ ಎಂದ ಅವರು, ಈ ಬಗ್ಗೆ ಕೇಳಿದ್ದು ಇದೇ ಮೊದಲು. ಮಧ್ಯಾಹ್ನ 12.57ಕ್ಕೆ ಸದನ ತಲುಪಿ 1 ಗಂಟೆಗೆ ಸದನದಿಂದ ಎದ್ದು ಹೋಗಿದ್ದೆ ಎಂದರು.

ಸದನವನ್ನು ಮುಂದೂಡಿದ ಬಳಿಕ ದಿನನಿತ್ಯದ ತಪಾಸಣೆ ಸಮಯದಲ್ಲಿ ಭದ್ರತಾ ಅಧಿಕಾರಿಗಳಿಗೆ ನೋಟುಗಳ ಬಂಡಲ್ ಸಿಕ್ಕಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಜೆ.ಪಿ.ನಡ್ಡಾ, ಈ ಘಟನೆ ಅತ್ಯಂತ ಗಂಭೀರವಾದದ್ದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Parliament Winter Session: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

ಸದನದ ಘನತೆಗೆ ಧಕ್ಕೆಯಾಗಿದೆ.ಯಾವುದೇ ವಿಚಾರದಲ್ಲಿ ಸಿಟ್ಟು ತೋರಿಸುವುದು, ಯಾವುದೇ ವಿಷಯದ ಮೇಲೆ ಕೆಸರೆರಚಾಟ ಸರಿಯಲ್ಲ. ಈ ವಿಷಯವನ್ನು ಇತ್ಯರ್ಥ ಪಡಿಸಲಾಗುವುದು. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜೆಪಿ ನಡ್ಡಾ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರಶ್ನೆಗಳನ್ನು ಎತ್ತಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Fri, 6 December 24