Bihar: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ಆಹಾರ ಸೇವಿಸಿದ 36 ವಿದ್ಯಾರ್ಥಿಗಳು ಅಸ್ವಸ್ಥ

|

Updated on: May 19, 2023 | 11:57 AM

ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿದ್ದ ಅನ್ನದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು.

Bihar: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ಆಹಾರ ಸೇವಿಸಿದ 36 ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರ
Image Credit source: Newsclick
Follow us on

ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿದ್ದ ಅನ್ನದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸ್ವೀಕರಿಸುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಯಿತು.

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ಡಾ.ಸಂತೋಷ್ ತಿಳಿಸಿದ್ದಾರೆ.
ಇದೇ ವೇಳೆ ಘಟನೆ ಕುರಿತು ಸರಕಾರಿ ಶಾಲೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಜಯ್ ಕುಮಾರ್ ರೈ ಅವರು ವಿದ್ಯಾರ್ಥಿಗಳ ಸ್ಥಿತಿಯನ್ನು ತಿಳಿಯಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮತ್ತಷ್ಟು ಓದಿ: ಶಾಲಾ ಆವರಣದೊಳಗೆ ಬಂದಿದ್ದ ಮಂಗನಿಗೆ ಬಿಸಿಯೂಟ: ಶಿಕ್ಷಕನ ಕೈ ತುತ್ತು ವಿಡಿಯೋ ವೈರಲ್

40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಡಿಎಂ ಹೇಳಿದರು.

ಜುಲೈ 16, 2013 ರಂದು, ಸರನ್ ಜಿಲ್ಲೆಯ ಮಶ್ರಖ್‌ನ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕದಿಂದ ಕಲುಷಿತಗೊಂಡ ಮಧ್ಯಾಹ್ನದ ಊಟವನ್ನು ಸೇವಿಸಿದ 23 ವಿದ್ಯಾರ್ಥಿಗಳು ಸಾವನ್ನಪ್ಪಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 11:57 am, Fri, 19 May 23