AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra 2021: ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ; ಹೈಕೋರ್ಟ್ ಆದೇಶ ಪಾಲನೆ

ಹೈಕೋರ್ಟ್​ ತಡೆ ನೀಡಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳದೆ, ಮೂರು ಜಿಲ್ಲೆಗಳ ಚಾರ್​ಧಾಮ್​ ಯಾತ್ರಿಕರಿಗಾಗಿ ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಈ ಜಿಲ್ಲೆಗಳಿಂದ ಬರುವ ಯಾತ್ರಿಕರು ಮೊದಲೇ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿತ್ತು.

Char Dham Yatra 2021: ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ; ಹೈಕೋರ್ಟ್ ಆದೇಶ ಪಾಲನೆ
ಬದ್ರಿನಾಥ ದೇಗುಲ
TV9 Web
| Edited By: |

Updated on: Jun 29, 2021 | 4:16 PM

Share

ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಉತ್ತರಾಖಂಡ ಸರ್ಕಾರ ಆದೇಶ ನೀಡಿದೆ. ಮುಂದಿನ ಸೂಚನೆಯವರೂ ಚಾರ್​ ಧಾಮ್​ ಯಾತ್ರೆ ರದ್ದಾಗಿರಲಿದೆ ಎಂದು ಹೇಳಿದೆ. ಕೊವಿಡ್​ 19 ಕಾರಣದಿಂದ ಚಾರ್​ ಧಾಮ್​ ಯಾತ್ರೆಗೆ ಅವಕಾಶ ಕೊಡುವುದಿಲ್ಲ ಎಂದು ಹಿಂದೆಯೇ ಹೇಳಿದ್ದ ಉತ್ತರಾಖಂಡ ಸರ್ಕಾರ ಬಳಿಕ ಸ್ಥಳೀಯ ಮೂರು ಜಿಲ್ಲೆಗಳಾದ ಚಮೋಲಿ, ರುದ್ರಪ್ರಯಾಗ ಮತ್ತು ಉತ್ತರಕಾಶಿ ಜನರಿಗಾಗಿ ಜುಲೈ 1ರಿಂದ ಚಾರ್​ ಧಾಮ್ ಯಾತ್ರೆಗೆ ಅವಕಾಶ ಮಾಡಿಕೊಡಲು, ಜೂನ್​ 25ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿತ್ತು. ಆದರೆ ಸರ್ಕಾರ ಈ ನಿರ್ಧಾರಕ್ಕೆ ಉತ್ತಾರಖಂಡ ಹೈಕೋರ್ಟ್​ ನಾಲ್ಕು ವಾರಗಳ ತಾತ್ಕಾಲಿಕ ತಡೆ ನೀಡಿತ್ತು. ಈ ನಾಲ್ಕೂ ದೇವಸ್ಥಾನಗಳ ಗರ್ಭಗುಡಿಯೊಳಗೆ ನಡೆಯುವ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರಿಗೆ ನೇರಪ್ರಸಾರದ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿತ್ತು.

ಆದರೆ ಹೈಕೋರ್ಟ್​ ತಡೆ ನೀಡಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳದೆ, ಮೂರು ಜಿಲ್ಲೆಗಳ ಚಾರ್​ಧಾಮ್​ ಯಾತ್ರಿಕರಿಗಾಗಿ ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಈ ಜಿಲ್ಲೆಗಳಿಂದ ಬರುವ ಯಾತ್ರಿಕರು ಮೊದಲೇ ನೋಂದಣಿ ಮಾಡಿಕೊಳ್ಳಬೇಕು. ಆರ್​ಟಿಪಿಸಿಆರ್​/ಟ್ರ್ಯೂನ್ಯಾಟ್​/ರ್ಯಾಪಿಡ್​ ಟೆಸ್ಟ್​ ನೆಗೆಟಿವ್​ ರಿಪೋಟ್​​ನ್ನು ಕಡ್ಡಾಯವಾಗಿ ತರಬೇಕು. ಮೊದಲ ಹಂತದ ಯಾತ್ರೆ ಜುಲೈ 1ರಿಂದ ಮತ್ತು 2ನೇ ಹಂತದ ಯಾತ್ರೆ ಜುಲೈ 11ರಿಂದ ಪ್ರಾರಂಭವಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿತ್ತು.

ಅದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್​ ಉನಿಯಲ್​, ಹೈಕೋರ್ಟ್ ಆದೇಶವನ್ನು ಒಮ್ಮೆ ನಾವೂ ಪರಾಮರ್ಶಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದರು. ಕೇದಾರನಾಥ, ಬದ್ರಿನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪವಿತ್ರ ಕ್ಷೇತ್ರಗಳ ಭೇಟಿಗೆ ಚಾರ್​ಧಾಮ್​ ಯಾತ್ರೆ ಎಂದು ಹೆಸರು ಬಂದಿದೆ. ಈ ನಾಲ್ಕೂ ದೇವಸ್ಥಾನಗಳು ಚಮೋಲಿ, ರುದ್ರಪ್ರಯಾಗ, ಉತ್ತರಕಾಶಿ ಜಿಲ್ಲೆಗಳಲ್ಲಿ ಇದ್ದು, ಅಲ್ಲಿನ ನಿವಾಸಿಗಳಿಗೆ ಮಾತ್ರ ಅವಕಾಶ ನೀಡಲೆಂದು ಸರ್ಕಾರ ಪ್ರಯತ್ನ ಮಾಡಿತ್ತು.

ಇದನ್ನೂ ಓದಿ: ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು

(Char Dham Yatra 2021 suspends by Uttarakhand Government)

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ