Char Dham Yatra 2022: ಚಾರ್​ಧಾಮ್ ಯಾತ್ರೆ ವೇಳೆ ಈ ಬಾರಿ 201 ಭಕ್ತರು ಸಾವು

ಈ ಚಾರ್​ ಧಾಮ ಯಾತ್ರೆಯು ಮೇ 3ರಂದು ಪ್ರಾರಂಭವಾಯಿತು. ಅಕ್ಟೋಬರ್ ಅಂತ್ಯದಲ್ಲಿ ಈ ಯಾತ್ರೆ ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೆ, ಚಾರ್​ ಧಾಮ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳ ಸಂಖ್ಯೆ 2,50,000 ದಾಟಿದೆ.

Char Dham Yatra 2022: ಚಾರ್​ಧಾಮ್ ಯಾತ್ರೆ ವೇಳೆ ಈ ಬಾರಿ 201 ಭಕ್ತರು ಸಾವು
ಚಾರ್​​ ಧಾಮ್ ಯಾತ್ರೆಯ ಭಕ್ತರುImage Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 27, 2022 | 8:01 AM

ಉತ್ತರಾಖಂಡ: ಉತ್ತರಾಖಂಡದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ (Char Dham Yatra) ಇದುವರೆಗೆ 200ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ ಸರ್ಕಾರ (Uttarakhand Government) ಬಿಡುಗಡೆ ಮಾಡಿದ ಅಂಕಿ-ಅಂಶಗಳು ತಿಳಿಸಿವೆ. ಅನಾರೋಗ್ಯವೇ ಈ ಯಾತ್ರೆಯ ವಯಸ್ಸಾದ ಭಕ್ತರ ಸಾವಿಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ಭಾರೀ ಮಳೆಯಿಂದ ಭೂಕುಸಿತಗಳು ಸಂಭವಿಸುತ್ತಿರುವುದರಿಂದ ಚಾರ್​ ಧಾಮ ಯಾತ್ರೆಯನ್ನು ಸುಗಮವಾಗಿ ನಡೆಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಚಾರ್​ ಧಾಮ ಯಾತ್ರೆಯು ಮೇ 3ರಂದು ಪ್ರಾರಂಭವಾಯಿತು. ಅಕ್ಟೋಬರ್ ಅಂತ್ಯದಲ್ಲಿ ಈ ಯಾತ್ರೆ ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೆ, ಚಾರ್​ ಧಾಮ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳ ಸಂಖ್ಯೆ 2,50,000 ದಾಟಿದೆ. ಆದರೆ ಕಳೆದ ಒಂದು ವಾರದಿಂದ ಭಕ್ತರ ಸಂಖ್ಯೆ ಇಳಿಮುಖವಾಗಿದೆ.

ಡೆಹ್ರಾಡೂನ್‌ನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ 95, ಬದರಿನಾಥ ಧಾಮದಲ್ಲಿ 51, ಗಂಗೋತ್ರಿಯಲ್ಲಿ 13 ಮತ್ತು ಯಮುನೋತ್ರಿಯಲ್ಲಿ 42 ಭಕ್ತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

ಉತ್ತರಾಖಂಡದ ಮಹಾನಿರ್ದೇಶಕಿ (ಆರೋಗ್ಯ) ಶೈಲಜಾ ಭಟ್ ಈ ಬಗ್ಗೆ ಮಾತನಾಡಿ, ಇಲಾಖೆಯು ಮೊದಲ ಬಾರಿಗೆ 9 ಸ್ಥಳಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದೆ. ಕರಪತ್ರಗಳು ಮತ್ತು ಇತರ ವಿಧಾನಗಳ ಮೂಲಕ ನಿಯಮಿತವಾಗಿ ಆರೋಗ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಯಾತ್ರಾರ್ಥಿಗಳಿಗೆ, ವಿಶೇಷವಾಗಿ ವೃದ್ಧರಿಗೆ ಯಾತ್ರೆಯಲ್ಲಿನ ಅಪಾಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಚಾರ್ ಧಾಮ್ ಮಾರ್ಗಗಳಲ್ಲಿ 12 ವೈದ್ಯರನ್ನು ನಿಯೋಜಿಸಲಾಗಿದೆ. ಅಸ್ವಸ್ಥ ಯಾತ್ರಾರ್ಥಿಗಳನ್ನು ತುರ್ತು ಸಂದರ್ಭದಲ್ಲಿ ಸಕಾಲಿಕ ಚಿಕಿತ್ಸೆಗಾಗಿ ಹೆಲಿ- ಆ್ಯಂಬುಲೆನ್ಸ್ ಮೂಲಕ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಧಾವಿಸಲಾಗುತ್ತಿದೆ. ಇಲ್ಲಿಯವರೆಗೆ ಸಾವಿಗೆ ಪ್ರಮುಖವಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಾರಣ. ವೈದ್ಯಕೀಯ ಇತಿಹಾಸ ಹೊಂದಿರುವ ಯಾತ್ರಾರ್ಥಿಗಳಿಗೆ ಮುಂದಿನ ಪ್ರಯಾಣವನ್ನು ಕೈಗೊಳ್ಳದಂತೆ ಮನವೊಲಿಸಲಾಗುತ್ತಿದೆ. ಅವರು ತಮ್ಮ ಪ್ರಯಾಣವನ್ನು ಮುಂದುವರಿಸಲು ಅಚಲವಾಗಿದ್ದರೆ ಅವರಿಂದ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಶೈಲಜಾ ಭಟ್ ಅವರ ಪ್ರಕಾರ, ಚಾರ್​ ಧಾಮ ಯಾತ್ರೆಯ ಮಾರ್ಗಗಳಲ್ಲಿ 20 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ 178 ಹೆಚ್ಚಿನ ವೈದ್ಯರನ್ನು ನಿಯೋಜಿಸಲಾಗಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ