ಮೋದಿ ಕಾರ್ಯಕ್ರಮ ವರದಿ ಮಾಡುವ ಪತ್ರಕರ್ತರು ಕ್ಯಾರೆಕ್ಟರ್ ಸರ್ಟಿಫಿಕೇಟ್ ತರಬೇಕು ಎಂಬ ನೋಟಿಸ್ ಹಿಂಪಡೆದ ಅಧಿಕಾರಿಗಳು

ಬಿಜೆಪಿ ಸರ್ಕಾರವು ಪತ್ರಕರ್ತರಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಕೇಳುತ್ತಿದೆ. ಈ ಆದೇಶದ ಕುರಿತು ನಿಮ್ಮ ಅಭಿಪ್ರಾಯವೇನು? ಉತ್ತರಿಸಿ,” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೋದಿ ಕಾರ್ಯಕ್ರಮ ವರದಿ ಮಾಡುವ ಪತ್ರಕರ್ತರು ಕ್ಯಾರೆಕ್ಟರ್ ಸರ್ಟಿಫಿಕೇಟ್ ತರಬೇಕು ಎಂಬ ನೋಟಿಸ್ ಹಿಂಪಡೆದ ಅಧಿಕಾರಿಗಳು
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 04, 2022 | 8:48 PM

ಹಿಮಾಚಲ ಪ್ರದೇಶದಲ್ಲಿ (Himachal Pradesh) ಪ್ರಧಾನಮಂತ್ರಿ ನರೇಂದ್ರ ಮೋದಿಯವರ (Narendra Modi) ಕಾರ್ಯಕ್ರಮ ವರದಿ ಮಾಡುವ ಪತ್ರಕರ್ತರು “ಕ್ಯಾರೆಕ್ಟರ್ ಸರ್ಟಿಫಿಕೇಟ್” (Character certificate) ತರಬೇಕು ಎಂದು ಹೇಳಿರುವ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ವಿವಾದಾತ್ಮಕ ನೋಟೀಸ್ ಅನ್ನು ಅಧಿಕಾರಿಗಳು ಮಂಗಳವಾರ ಹಿಂಪಡೆದಿದ್ದಾರೆ. ಪ್ರಧಾನ ಮಂತ್ರಿ ಅವರ ಕಾರ್ಯಕ್ರಮಕ್ಕೆ ಪ್ರವೇಶ ಮತ್ತು ಭದ್ರತಾ ಪಾಸ್‌ಗಳಿಗೆ ಪ್ರಮಾಣಪತ್ರದ ಅಗತ್ಯವಿದೆ ಎಂದು ಹೇಳಲಾಗಿತ್ತು. ರ್ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶವನ್ನು ಈ ಕಚೇರಿ ನಿರ್ಧರಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ ಇಂದು (ಅಕ್ಟೋಬರ್ 4) ನೋಟಿಸ್ ಹಿಂಪಡೆಯಲಾಗಿದೆ. “ಬಿಜೆಪಿ ಸರ್ಕಾರವು ಪತ್ರಕರ್ತರಿಂದ ‘ಕ್ಯಾರೆಕ್ಟರ್ ಸರ್ಟಿಫಿಕೇಟ್’ ಕೇಳುತ್ತಿದೆ. ಈ ಆದೇಶದ ಕುರಿತು ನಿಮ್ಮ ಅಭಿಪ್ರಾಯವೇನು? ಉತ್ತರಿಸಿ,” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.  ಇದಾದ ನಂತರ ಹಿಮಾಚಲ ಪ್ರದೇಶ ಪೊಲೀಸರು ಮಂಗಳವಾರ ಮತ್ತೊಂದು ಹೇಳಿಕೆಯನ್ನು ನೀಡಿದ್ದು, ಪತ್ರವನ್ನು ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

ಈ ಪತ್ರವನ್ನು ಅಜಾಗರೂಕತೆಯಿಂದ ಆಗಿದ್ದು ಪತ್ರವನ್ನು ಹಿಂತೆಗೆದುಕೊಳ್ಳಲಾಗಿದೆ. ಕಾರ್ಯಕ್ರಮವನ್ನು  ವರದಿ ಮಾಡಲು ಎಲ್ಲಾ ಮಾಧ್ಯಮಗಳಿಗೆ “ಸ್ವಾಗತ” ಎಂದು ಹಿಮಾಚಲ ಪೊಲೀಸರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಡಿಜಿಪಿ ಸಂಜಯ್ ಕುಂದು ಅವರು ಪತ್ರದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಎಸ್ಪಿ ಬಿಲಾಸ್ಪುರ್ ಬರೆದ ಪತ್ರವನ್ನು ಹಿಂಪಡೆಯಲಾಗಿದೆ. ಇದರಿಂದ  ಉಂಟಾದ ಯಾವುದೇ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ. ಗೌರವಾನ್ವಿತ ಪ್ರಧಾನಿಯವರ ಹಿಮಾಚಲ ಪ್ರದೇಶ ಭೇಟಿಯನ್ನು ವರದಿ ಮಾಡಲು ಪತ್ರಕರ್ತರನ್ನು ಆತ್ಮೀಯವಾಗಿ ಆಹ್ವಾನಿಸಲಾಗಿದೆ. ನಿಮ್ಮ ಸಹಕಾರ ಬೇಕಿದೆ ಎಂದು ಅವರು ಹೇಳಿದ್ದಾರೆ.

ಏಮ್ಸ್ ಬಿಲಾಸ್‌ಪುರ ಉದ್ಘಾಟನೆ ಹಾಗೂ ₹ 3,650 ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಸೇರಿದಂತೆ ಬುಧವಾರ ಹಿಮಾಚಲ ಪ್ರದೇಶದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಕುಲುವಿನಲ್ಲಿ ದಸರಾ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲ ಪ್ರಧಾನಿ ಮೋದಿ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಹಿಮಾಚಲ ಪ್ರದೇಶದ ಧಾಲ್ಪುರ್ ಗ್ರೌಂಡ್ ಕುಲುಗೆ ಭೇಟಿ ನೀಡಲಿದ್ದಾರೆ.ಅಲ್ಲಿ ಅವರು 300 ಕ್ಕೂ ಹೆಚ್ಚು ದೇವತೆಗಳ ಈ ವಿಶಿಷ್ಟ ರಥಯಾತ್ರೆಯನ್ನು ವೀಕ್ಷಿಸಲಿದ್ದಾರೆ.

Published On - 8:44 pm, Tue, 4 October 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್