Moscow-Goa flight: ಬಾಂಬ್ ಬೆದರಿಕೆ ಕರೆ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದ ಮಾಸ್ಕೋ-ಗೋವಾ ಅಂತಾರಾಷ್ಟ್ರೀಯ ವಿಮಾನ
ಗೋವಾ ಎಟಿಸಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಸೋಮವಾರ ಜಾಮ್‌ನಗರದಲ್ಲಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ.
ಪಣಜಿ: ದುಷ್ಕರ್ಮಿಗಳು ಗೋವಾ ಎಟಿಸಿಗೆ ಬಾಂಬ್ ಬೆದರಿಕೆ ಕರೆ (bomb threat call) ಬಂದ ಹಿನ್ನೆಲೆ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಸೋಮವಾರ ಜಾಮ್‌ನಗರದಲ್ಲಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ. 268 ಪ್ರಯಾಣಿಕರೊಂದಿಗೆ ಅಂತಾರಾಷ್ಟ್ರೀಯ ವಿಮಾನ ತೆರಳುತ್ತಿತ್ತು. ಸದ್ಯ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯಿಂದ ವಿಮಾನದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ವಿಮಾನದ ಮಾರ್ಗ ಬದಲಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.
Gujarat | Outside visuals from Jamnagar Aiport where Moscow-Goa chartered flight was diverted after Goa ATC received a bomb threat.
Aircraft is under isolation bay & further investigation is underway. pic.twitter.com/rjge2VLnxe
— ANI (@ANI) January 9, 2023
ಜಾಮ್‌ನಗರದಲ್ಲಿ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದರು. “ಮಾಸ್ಕೋದಿಂದ ಗೋವಾಕ್ಕೆ ಹೋಗುತ್ತಿದ್ದ ವಿಮಾನವನ್ನು ಬಾಂಬ್ ಬೆದರಿಕೆ ಹಿನ್ನಲೆ ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಲ್ಯಾಂಡಿಂಗ್ ನಂತರ, ಎಲ್ಲಾ 236 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪೊಲೀಸರು, ಬಿಡಿಡಿಎಸ್ ಮತ್ತು ಸ್ಥಳೀಯ ಅಧಿಕಾರಿಗಳು ಇಡೀ ವಿಮಾನವನ್ನು ಶೋಧಿಸುತ್ತಿದ್ದಾರೆ” ಎಂದು ಪೊಲೀಸ್ ಮಹಾನಿರೀಕ್ಷಕ (ರಾಜ್‌ಕೋಟ್ ಮತ್ತು ಜಾಮ್‌ನಗರ ರೇಂಜ್) ಅಶೋಕ್ ಕುಮಾರ್ ಯಾದವ್ ಹೇಳಿದರು.
ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ಅಜುರ್ ಏರ್ ವಿಮಾನದಲ್ಲಿ ಬಾಂಬ್ ಭೀತಿಯ ಬಗ್ಗೆ ಭಾರತೀಯ ಅಧಿಕಾರಿಗಳು ರಾಯಭಾರ ಕಚೇರಿಯನ್ನು ಎಚ್ಚರಿಸಿದ್ದಾರೆ ಎಂದು ದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ವಿಮಾನವು ಜಾಮ್‌ನಗರ ಭಾರತೀಯ ವಾಯುಪಡೆ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ವಿಮಾನದ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ.
ಏತನ್ಮಧ್ಯೆ, ಮಾಸ್ಕೋದಿಂದ ಹೊರಟು ಕರಾವಳಿ ರಾಜ್ಯದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನವನ್ನು ಬಾಂಬ್ ಭೀತಿಯಿಂದಾಗಿ ಜಾಮ್‌ನಗರಕ್ಕೆ ತಿರುಗಿಸಲಾಗಿದೆ ಎಂದು ಗೋವಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋವಾ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ದಾಬೋಲಿಮ್ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅವರು ಹೇಳಿದರು. ವಿಮಾನ ನಿಲ್ದಾಣದಲ್ಲಿ ಎಲ್ಲಾ ತುರ್ತು ಸೇವೆಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:56 pm, Mon, 9 January 23