ದೆಹಲಿ: ತೃಣಮೂಲ ಕಾಂಗ್ರೆಸ್ ( Trinamool Congress) ನಾಯಕ ಸಾಕೇತ್ ಗೋಖಲೆ (Saket Gokhale) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದೀಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಜೈಲಿನಲ್ಲಿದ್ದಾರೆ. ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲದ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಗೋಖಲೆ ಅವರು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 30, 2022 ರಂದು ದೆಹಲಿಯಿಂದ ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಅವರನ್ನು ಬಂಧಿಸಿತು. ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದು ಇದು ಮೂರನೇ ಬಾರಿ.
Published On - 3:22 pm, Wed, 25 January 23