AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheetah: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 16 ಚೀತಾ, ಭವಿಷ್ಯದ ಪೀಳಿಗೆಗೆ ಇದು ಸಾಕ್ಷಿ

ಮುಂಬರುವ ತಿಂಗಳುಗಳಲ್ಲಿ ದಕ್ಷಿಣ ಆಫ್ರಿಕಾದಿಂದ 14 ರಿಂದ 16 ಚೀತಾಗಳನ್ನು ಭಾರತಕ್ಕೆ ತರುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುರುವಾರ ಹೇಳಿದ್ದಾರೆ ಮತ್ತು ವನ್ಯಜೀವಿ ರಕ್ಷಣೆ ಮತ್ತು ಸುಸ್ಥಿರತೆಗಾಗಿ ಸರ್ಕಾರವು ಸಮಗ್ರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದರು.

Cheetah: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 16 ಚೀತಾ, ಭವಿಷ್ಯದ ಪೀಳಿಗೆಗೆ ಇದು ಸಾಕ್ಷಿ
CheetahImage Credit source: Wikipedia
ಅಕ್ಷಯ್​ ಪಲ್ಲಮಜಲು​​
|

Updated on:Feb 10, 2023 | 12:06 PM

Share

ದೆಹಲಿ: ಮುಂಬರುವ ತಿಂಗಳುಗಳಲ್ಲಿ ದಕ್ಷಿಣ ಆಫ್ರಿಕಾದಿಂದ 14 ರಿಂದ 16 ಚೀತಾಗಳನ್ನು (Cheetah) ಭಾರತಕ್ಕೆ ತರುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುರುವಾರ ಹೇಳಿದ್ದಾರೆ ಮತ್ತು ವನ್ಯಜೀವಿ ರಕ್ಷಣೆ ಮತ್ತು ಸುಸ್ಥಿರತೆಗಾಗಿ ಸರ್ಕಾರವು ಸಮಗ್ರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದರು. ಭವಿಷ್ಯದ ಪೀಳಿಗೆಗೆ ಪ್ರಕೃತಿಯನ್ನು ರಕ್ಷಿಸುವ ಪ್ರಾಮುಖ್ಯತೆಗೆ ಹೆಚ್ಚು ಒತ್ತು ನೀಡುವ ಕಾರಣಕ್ಕೆ ಈ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ವನ್ಯಜೀವಿಗಳನ್ನು ಸಂರಕ್ಷಿಸುವುದು ಮತ್ತು ಅದು ಅಭಿವೃದ್ಧಿ ಹೊಂದುವುದನ್ನು ಮಾಡುವುದು ನಮ್ಮ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಮುಂದಿನ ಪೀಳಿಗೆಗೆ ಈ ಎಲ್ಲ ವಿಚಾರಗಳನ್ನು ತಿಳಿಸುವುದು ಇದು ನಮ್ಮ ಮುಖ್ಯ ಕಾರ್ಯವಾಗಿದೆ ಎಂದು ಸಿಂಧಿಯಾ ಹೇಳಿದರು.

ಕಳೆದ ಒಂಬತ್ತು ವರ್ಷಗಳಿಂದ ವನ್ಯಜೀವಿ ಸಂರಕ್ಷಣೆಗಾಗಿ ಸರ್ಕಾರದ ಅನೇಕ ಕ್ರಮಗಳ ಬಗ್ಗೆ ಕುರಿತು ಸುದ್ದಿಗಾರರಿಗೆ ವಿವರಿಸಿದ ಜ್ಯೋತಿರಾದಿತ್ಯ ಸಿಂಧಿಯಾ, ಮುಂಬರುವ ತಿಂಗಳುಗಳಲ್ಲಿ ಇನ್ನೂ 14-16 ಚಿರತೆಗಳನ್ನು ಭಾರತಕ್ಕೆ ತರುವ ನಿರೀಕ್ಷೆಯಿದೆ ಎಂದು ಹೇಳಿದರು. ಪ್ರಸ್ತುತ, ಚೀತಾ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಚಿರತೆಗಳನ್ನು ದಕ್ಷಿಣ ಆಫ್ರಿಕಾದಿಂದ ತರಲಾಗುವುದು.

ಇದನ್ನೂ ಓದಿ:Cheetah: ಸೌತ್ ಆಫ್ರಿಕಾದಿಂದ 100 ಚೀತಾಗಳು ಭಾರತಕ್ಕೆ

ಪ್ರಾಜೆಕ್ಟ್ ಚೀತಾ ಅಡಿಯಲ್ಲಿ, ಎಂಟು ಚಿರತೆಗಳನ್ನು ನಮೀಬಿಯಾದಿಂದ ವಿಮಾನದ ಮೂಲಕ ಭಾರತಕ್ಕೆ ತರಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೋ ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್‌ಪಿ) ಮೊದಲ ಹಂತದ ಚಿರತೆಗಳನ್ನು ಬಿಡುಗಡೆ ಮಾಡಿದರು.

ನಾಗರಿಕ ವಿಮಾನಯಾನ ಮತ್ತು ಉಕ್ಕಿನ ಸಚಿವಾಲಯಗಳ ಉಸ್ತುವಾರಿ ವಹಿಸಿರುವ ಸಿಂಧಿಯಾ ಅವರ ಪ್ರಕಾರ, ವನ್ಯಜೀವಿ ಸಂರಕ್ಷಣೆಗಾಗಿ ಸರ್ಕಾರದ ಕಾರ್ಯತಂತ್ರವು ಜನಸಂಖ್ಯೆ, ನೀತಿ, ಜನರು ಮತ್ತು ಮೂಲಸೌಕರ್ಯ ನಾಲ್ಕು ಪ್ರಮುಖ ಸ್ತಂಭಗಳ ಮೇಲೆ ಕೇಂದ್ರೀಕೃತವಾಗಿದೆ.

ನನ್ನ ತಂದೆ ವನ್ಯಜೀವಿ ಸಂರಕ್ಷಣೆಯಲ್ಲಿ ಬಹಳ ನಿಕಟವಾಗಿ ತೊಡಗಿಸಿಕೊಂಡಿದ್ದರು ಮತ್ತು ನಾನು ಚಿಕ್ಕ ವಯಸ್ಸಿನಿಂದಲೂ ವನ್ಯಜೀವಿ ಉತ್ಸಾಹಿಯಾಗಿದ್ದೇನೆ. ನನಗೆ ಇದು ವೈಯಕ್ತಿಕ ಆಸಕ್ತಿ ಮತ್ತು ಉತ್ಸಾಹದ ಕ್ಷೇತ್ರವಾಗಿದೆ ಎಂದು ಸಿಂಧಿಯಾ ಹೇಳಿದರು.

Published On - 12:06 pm, Fri, 10 February 23