AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಂಗಲ್ಪಟ್ಟು: ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ತಮಿಳುನಾಡಿನಲ್ಲಿ ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ನವ ವಧು ಮತ್ತು ಆಕೆಯ ಪೋಷಕರ ವಿಚಾರಣೆ ನಡೆಸುತ್ತಿದ್ದಾರೆ.

ಚೆಂಗಲ್ಪಟ್ಟು: ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Sep 21, 2023 | 4:19 PM

Share

ಚೆಂಗಲ್ಪಟ್ಟು: ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ 27 ವರ್ಷದ ನವವಿವಾಹಿತರೊಬ್ಬರು ಮದುವೆಯಾದ (wedding) ಕೇವಲ ಎರಡು ದಿನಗಳಲ್ಲಿ ತನ್ನ ಪತ್ನಿಯ ಮದುವೆಯ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ರಾಣಿಪೇಟೆ ಮೂಲದ ಸರವಣನ್ ಎಂದು ಗುರುತಿಸಲಾಗಿದ್ದು, ಸುಂಗುವಚತಿರಂನಲ್ಲಿರುವ (Sunguvachatiram) ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಚೆಂಗಲ್ಪಟ್ಟು ( Chengalpattu) ಸಮೀಪದ ದಿಮ್ಮಾವರಂನ ಶ್ವೇತಾ ಅಲಿಯಾಸ್ ರಾಜೇಶ್ವರಿ (21) ಅವರನ್ನು ವಿವಾಹವಾಗಿದ್ದರು.

ಪೊಲೀಸರ ಪ್ರಕಾರ ನವ ದಂಪತಿ ಸಂಬಂಧಿಕರಾಗಿದ್ದು, ಬಾಲ್ಯದಿಂದಲೂ ಸ್ನೇಹಿತರಾಗಿದ್ದವರು. ಕೆಲವು ವರ್ಷಗಳಿಂದ ಅವರು ಸಂಬಂಧ ಹೊಂದಿದ್ದರು. ಇಬ್ಬರೂ ಪೋಷಕರ ಒಪ್ಪಿಗೆ ಮೇರೆಗೆ ಮದುವೆಯೂ ನಡೆದಿದೆ. ನವ ವಧುವಿನ ಪೋಷಕರು ಮಂಗಳವಾರ ಮೊದಲ ರಾತ್ರಿ ಕಾರ್ಯಕ್ರಮವನ್ನು ಏರ್ಪಡಿಸಿ ಚೆಂಗಲ್ಪಟ್ಟು ಬಳಿಯ ದಿಮ್ಮಾವರಂಗೆ (Dimmavaram) ಕರೆದಿಕೊಂಡು ಹೋಗಿದ್ದರು. ಮದುವೆಯ ನಂತರ ನವ ವರ (bridegroom) ಮೊದಲ ಬಾರಿಗೆ ಮಾವನ ಮನೆಗೆ ಬಂದಿದ್ದರು. ಮಂಗಳವಾರ ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದು, ಮರುದಿನ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾ ಕೊಠಡಿಯಿಂದ ಹೊರಗೆ ಓಡಿ ಬಂದಿದ್ದಾಳೆ. ಬಂದವಳೆ ಗಂಡ ಆಕೆಯ ಗಂಡ ಮೃತಪಟ್ಟಿದ್ದಾನೆ ಎಂದು ಹೇಳುತ್ತಾ, ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾರೆ.

ಆಕೆಯ ಪೋಷಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳ ಮುಹೂರ್ತದ ಸೀರೆಯಲ್ಲಿ ಸರವಣನ್ ನೇಣು ಬಿಗಿದಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ. ಮಾಹಿತಿ ಮೇರೆಗೆ ಕೆಂಗಲಪಟ್ಟು ತಾಲೂಕು ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಂಗಳವಾರ ರಾತ್ರಿ ಮೃತ ಹೊಸ ಗಂಡ ತನ್ನ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಾವು ಹನಿಮೂನ್‌ಗೆ ಭೇಟಿ ನೀಡಲು ಯೋಜಿಸಿರುವ ಸ್ಥಳಗಳ ಬಗ್ಗೆ ತಿಳಿಸಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಅವರು ಬುಧವಾರ ತಮ್ಮ ಪ್ರವಾಸವನ್ನು ಪ್ರಾರಂಭಿಸುವುದಾಗಿ ಹೇಳಿಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!