AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು, 11 ಜನರಿಗೆ ಗಾಯ

ಛತ್ತೀಸ್​ಗಢದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 11 ಜನರಿಗೆ ಗಂಭೀರ ಗಾಯಗಳಾಗಿವೆ. ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ಲಾರಿಯಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಲಾರಿಗೆ ಟ್ರೇಲರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು, 11 ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: May 12, 2025 | 7:11 AM

Share

ರಾಯ್​ಪುರ, ಮೇ 12: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.

ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾತನಾಡಿ, ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು.

ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಲಾರಿ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ
Image
ಬಾಗಲಕೋಟೆ: ಓವರ್ ಟೇಕ್​ ಮಾಡಲು ಹೋಗಿ ಕುತ್ತು ತಂದುಕೊಂಡ ಬಾಲಕರು
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ
Image
ಶಿವಮೊಗ್ಗ: ಕ್ರಿಕೆಟ್​ ಆಡುವಾಗ ಸ್ನೇಹಿತರ ನಡುವೆ ಜಗಳ, ಓರ್ವನ ಕೊಲೆ
Image
ಮಗಳ ಸಾವಿಗೆ ಪ್ರತೀಕಾರ: ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಕೊಂದ!

ಮತ್ತಷ್ಟು ಓದಿ: ಹಾವೇರಿಯಲ್ಲಿ ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 6 ಜನರು ಸ್ಥಳದಲ್ಲೇ ಸಾವು

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಜಿಲ್ಲಾಡಳಿತದ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದ್ದಾರೆ.

ಅಪಘಾತದಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ