ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು

ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ.

ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು
Follow us
ಅಕ್ಷಯ್​ ಪಲ್ಲಮಜಲು​​
|

Updated on:May 20, 2024 | 4:11 PM

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ. ಬೈಗಾ ಸಮುದಾಯದವರು ಬೀಡಿ ತಯಾರಿಸುವ ವೃತ್ತಿಯನ್ನು ಮಾಡುತ್ತಿದ್ದರು. ಇದಕ್ಕೆ ತೆಂಡು ಎಲೆಗಳು ಬೇಕಿತ್ತು. ಇದನ್ನು ತರಲು ಪಿಕಪ್​​​ನಲ್ಲಿ ಹೋಗಿದ್ದಾರೆ. ಈ ವೇಳೆ ಪಿಕಪ್​​​​ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.

ಇದನ್ನೂ ಓದಿ: ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಈ ಘಟನೆಯಿಂದ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯಿಂದ ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:40 pm, Mon, 20 May 24