AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ, ಇಬ್ಬರು ಯೋಧರು ಹುತಾತ್ಮ

ಛತ್ತೀಸ್​ಗಢದಲ್ಲಿ ನಕ್ಸಲರು ಐಇಡಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಇ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬಿಜಾಪುರದಲ್ಲಿ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಛತ್ತೀಸ್​ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ, ಇಬ್ಬರು ಯೋಧರು ಹುತಾತ್ಮ
ಭಾರತೀಯ ಸೇನೆ
ನಯನಾ ರಾಜೀವ್
|

Updated on:Jul 18, 2024 | 9:02 AM

Share

ಛತ್ತೀಸ್​ಗಢದ ಬಿಜಾಪುರದಲ್ಲಿ ನಡೆಸಿದ ಐಇಡಿ(ಸುಧಾರಿತ ಸ್ಫೋಟಕ) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್‌ಸ್ಟೆಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೆಬಲ್ ಸತೇರ್ ಸಿಂಗ್ ಅವರು ದೇಶಕ್ಕೆ ಪ್ರಣ ಅರ್ಪಿಸಿದ್ದಾರೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.

ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದ್ದು, ಗಾಯಗೊಂಡ ಎಸ್‌ಟಿಎಫ್ ಯೋಧರಿಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಕಳೆದ ತಿಂಗಳ ಆರಂಭದಲ್ಲಿ, ಇದೇ ರೀತಿಯ ಘಟನೆಯಲ್ಲಿ, ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದರು.

ಮತ್ತಷ್ಟು ಓದಿ: ಛತ್ತೀಸ್​ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ

ಸಿಆರ್‌ಪಿಎಫ್‌ನ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) 201 ಬೆಟಾಲಿಯನ್‌ನ ಸಿಬ್ಬಂದಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಸ್ತು ತಿರುಗುತ್ತಿದ್ದಾಗ ಐಇಡಿ ಸ್ಫೋಟಗೊಂಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:02 am, Thu, 18 July 24