Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ: ವಾಮಾಚಾರದ ಶಂಕೆ ಒಂದೇ ಕುಟುಂಬದ ಐವರ ಕೊಲೆ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಶಂಕೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರನ್ನು ಹೊಡೆದು ಕೊಂದಿದ್ದಾರೆ. ಕೊಂಟಾ ಪೊಲೀಸ್ ಠಾಣಾ ವ್ಯಾಪ್ತಿಯ ಏಕತಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಛತ್ತೀಸ್​ಗಢ: ವಾಮಾಚಾರದ ಶಂಕೆ ಒಂದೇ ಕುಟುಂಬದ ಐವರ ಕೊಲೆ
ಪೊಲೀಸ್​Image Credit source: Thelallanntop.com
Follow us
ನಯನಾ ರಾಜೀವ್
|

Updated on: Sep 16, 2024 | 8:31 AM

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್ ಕಾನ್‌ಸ್ಟೆಬಲ್ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ, ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ

ಹಾನಿಯನ್ನುಂಟುಮಾಡುತ್ತಿದೆ, ಇದರಿಂದಾಗಿ ಐವರನ್ನೂ ಹೊಡೆದು ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15 ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

ಮೃತರಲ್ಲಿ ಛತ್ತೀಸ್‌ಗಢ ಪೊಲೀಸರೊಂದಿಗೆ ಕೆಲಸ ಮಾಡುವ ಹೆಡ್ ಕಾನ್‌ಸ್ಟೆಬಲ್ ಕೂಡ ಸೇರಿದ್ದಾರೆ. ಪೊಲೀಸರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದಾಗ ಮನೆಯವರು ವಾಮಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದರಿಂದ ಹಳ್ಳಿಯ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು ಮತ್ತು ಜನರಿಗೆ ವೈಯಕ್ತಿಕ ಹಾನಿ ಉಂಟಾಗುತ್ತದೆ ಎಂದು ಅವರು ನಂಬಿದ್ದರು. ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಿರಣ್ ಜಿ ಚವಾಣ್  ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರೆಲ್ಲರೂ ಒಂದೇ ಗ್ರಾಮದವರು. ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಮಾಟಮಂತ್ರ ಅಥವಾ ವಾಮಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕುಟುಂಬದ ವಿರುದ್ಧ ಈ ಹಿಂದೆ ಯಾವುದಾದರೂ ವಿವಾದವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಂಕಿತರನ್ನು ಸವ್ಲಾಮ್ ರಾಜೇಶ್ (21), ಸವ್ಲಾಮ್ ಹಿದ್ಮಾ, ಕರಮ್ ಸತ್ಯಂ (35), ಕುಂಜಮ್ ಮುಖೇಶ್ (28) ಮತ್ತು ಪೊಡಿಯಮ್ ಎಂಕಾ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಾಟಮಂತ್ರದ ಶಂಕೆಯಲ್ಲಿ ಹತ್ಯೆಗೈದ ಮತ್ತೊಂದು ಘಟನೆ ಸೆಪ್ಟೆಂಬರ್ 13 ರಂದು ಛತ್ತೀಸ್‌ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಅಂಬೆಗಾಲಿಡುವ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಕುಟುಂಬದ ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿದ್ದಾನೆ ಎಂಬ ಶಂಕೆಯಿಂದ ಆರೋಪಿಗಳನ್ನು ಕೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ