ಛತ್ತೀಸ್ಗಢದ ಬಿಜಾಪುರದಲ್ಲಿ ಐಇಡಿ ಸ್ಫೋಟ ಸಂಭವಿಸಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲೆಯ ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಂಗೇಲೂರು ಸಿಆರ್‌ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿ ನೆಲಬಾಂಬ್ ತೆಗೆಯಲು ಹೊರಟಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಐಇಡಿಗೆ ಸಂಪರ್ಕಗೊಂಡಿರುವ ತಂತಿಯನ್ನು ಭದ್ರತಾ ಸಿಬ್ಬಂದಿ ಪತ್ತೆ ಮಾಡಿದರು, ನಂತರ ಅವರು ಐಇಡಿಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ವಿಲೇವಾರಿ ಮಾಡಲು ಪ್ರಾರಂಭಿಸಿದರು. ಸ್ಫೋಟದ ನಂತರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಐವರು ಅಪಾಯದಿಂದ ಪಾರಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದಿನ ಘಟನೆ
ಗಂಗಲೂರು ಪ್ರದೇಶದಲ್ಲಿ ಗುಂಡಿನ ಚಕಮಕಿ ಕೊನೆಗೊಂಡಿದೆ. ಇಲ್ಲಿಯವರೆಗೆ 12 ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು. ಯಶಸ್ವಿ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಅವರು ಅಭಿನಂದಿಸಿದ್ದಾರೆ.
ಮತ್ತಷ್ಟು ಓದಿ: ಛತ್ತೀಸ್ಗಢ ಚುನಾವಣೆ: ಮತದಾನಕ್ಕೂ ಮುನ್ನ ಐಇಡಿ ಸ್ಫೋಟ, ಯೋಧರು, ಮತಗಟ್ಟೆ ಸಿಬ್ಬಂದಿ ಸೇರಿ ನಾಲ್ವರಿಗೆ ಗಾಯ
ಈ ಹಿಂದೆ ಏಪ್ರಿಲ್ 16 ರಂದು, ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 29 ನಕ್ಸಲೀಯರು ಕೊಲ್ಲಲ್ಪಟ್ಟರು, ಅದೇ ರೀತಿ, ಏಪ್ರಿಲ್ 30 ರಂದು, ಕಂಕೇರ್ ಮತ್ತು ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳೊಂದಿಗಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಹತರಾಗಿದ್ದರು.
ಈ ವರ್ಷದ ಮಾರ್ಚ್‌ನಲ್ಲಿ ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗಿನ ಮತ್ತೊಂದು ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದರು. ಈ ನಕ್ಸಲೀಯರನ್ನು ಎನ್‌ಕೌಂಟರ್ ಮಾಡಿದ ನಂತರ ಪಡೆಗಳು ಭಾರೀ ಶಸ್ತ್ರಾಸ್ತ್ರಗಳನ್ನು ಮತ್ತು ಮದ್ದುಗುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಂಡಿವೆ.
ಮೃತ ನಕ್ಸಲರನ್ನು ವರ್ಗೀಶ್, ಮಗ್ತು, ಕುರ್ಸಾಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಎಂದು ಗುರುತಿಸಲಾಗಿದೆ. ವರ್ಗೀಶ್ ಮತ್ತು ಮಗ್ತು ವಿವಿಧ ನಕ್ಸಲ್ ಸಮಿತಿಗಳ ಕಾರ್ಯದರ್ಶಿಗಳಾಗಿದ್ದರೆ, ಕುರ್ಸಾಂಗ್ ರಾಜು ಮತ್ತು ಕುಡಿಮೆಟ್ಟ ವೆಂಕಟೇಶ್ ಪ್ಲಟೂನ್ ಸದಸ್ಯರಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ವಿವರಗಳನ್ನು ಹಂಚಿಕೊಂಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ