ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್​ಗಢದ ಅಬುಜ್ಮಾರ್​ನಲ್ಲಿ ನಕ್ಸಲರ ಎನ್​ಕೌಂಟರ್ ಕಾರ್ಯಾಚರಣೆ ನಡೆದಿದೆ. ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಂತೇವಾಡ ಜಿಲ್ಲೆಗಳಲ್ಲಿ ಕಂಡುಬರುವ ಗುಡ್ಡಗಾಡು ಅರಣ್ಯ ಪ್ರದೇಶವಾಗಿದೆ.

ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು
ಸಾಂದರ್ಭಿಕ ಚಿತ್ರ

Updated on: Jun 15, 2024 | 1:43 PM

ನವದೆಹಲಿ: ಅಬುಜ್ಮಾರ್​ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Naxals Encounter) 8 ನಕ್ಸಲರು ಹತರಾಗಿದ್ದಾರೆ. ಒಬ್ಬ ಯೋಧ (Indian Jawan) ಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ. ಛತ್ತೀಸ್‌ಗಢದ (Chhattisgarh) ನಾರಾಯಣಪುರ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುದೀರ್ಘ ಗುಂಡಿನ ಚಕಮಕಿ ನಡೆಯುತ್ತಿದೆ.

ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಾಂತೇವಾಡ ಜಿಲ್ಲೆಗಳಲ್ಲಿ ಬರುವ ಗುಡ್ಡಗಾಡು, ಅರಣ್ಯ ಪ್ರದೇಶವಾಗಿದೆ. ಭೌಗೋಳಿಕವಾಗಿ ಪ್ರತ್ಯೇಕವಾದ ಮತ್ತು ಹೆಚ್ಚಾಗಿ ಪ್ರವೇಶಿಸಲಾಗದ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ 4 ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ; 9 ನಕ್ಸಲರ ಬಂಧನ

4 ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ, ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53 ನೇ ಬೆಟಾಲಿಯನ್ ಅನ್ನು ಒಳಗೊಂಡ ಕಾರ್ಯಾಚರಣೆಯನ್ನು ಜೂನ್ 12ರಂದು ಪ್ರಾರಂಭಿಸಲಾಯಿತು.

ಈ ತಿಂಗಳ ಆರಂಭದಲ್ಲಿ ನಾರಾಯಣಪುರದಲ್ಲಿ 6 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿತ್ತು. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 6 ಮಾವೋವಾದಿಗಳನ್ನು ಹತ್ಯೆ ಮಾಡಿದ ಕೆಲವು ದಿನಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us