Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Accident: ಬೊಲೆರೊಗೆ ಲಾರಿ ಡಿಕ್ಕಿ, ಛತ್ತೀಸ್​ಗಢದಲ್ಲೊಂದು ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಸಾವು

Chhattisgarh Accident: ಛತ್ತೀಸ್​ಗಢದಲ್ಲಿ ಭೀಕರ ಅಪಘಾತ(Accident) ಸಂಭವಿಸಿದೆ, ಬೊಲೆರೊಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ.

Chhattisgarh Accident: ಬೊಲೆರೊಗೆ ಲಾರಿ ಡಿಕ್ಕಿ, ಛತ್ತೀಸ್​ಗಢದಲ್ಲೊಂದು ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಸಾವು
ಛತ್ತೀಸ್​ಗಢ ಅಪಘಾತ
Follow us
ನಯನಾ ರಾಜೀವ್
|

Updated on: May 04, 2023 | 7:10 AM

ಛತ್ತೀಸ್​ಗಢದಲ್ಲಿ ಭೀಕರ ಅಪಘಾತ(Accident) ಸಂಭವಿಸಿದೆ, ಬೊಲೆರೊಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. ಮದುವೆ ಸಮಾರಂಭವೊಂದಕ್ಕೆ ಪಾಲ್ಗೊಳ್ಳಲು ಕಾರಿನಲ್ಲಿ ಹೊರಟಿದ್ದರು, ಛತ್ತೀಸ್​ಗಢದ ಬಲೋದ್ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ , ಅಲ್ಲಿಯ ಪುರೂರ್ ಚೌಕಿ ಪ್ರದೇಶದಲ್ಲಿ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಧಮ್ತರಿ ಜಿಲ್ಲೆಯ ರುದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊರೆಮ್ ಗ್ರಾಮದ ಸಾಹು ಕುಟುಂಬವು ಕಂಕೇರ್‌ನಲ್ಲಿನ ಚರಮಾ ಮರ್ಕಟೋಲಾ ವಿವಾಹ ಕಾರ್ಯಕ್ರಮಕ್ಕೆ ಹೋಗುತ್ತಿತ್ತು.

ಅವರು ಬುಧವಾರ ರಾತ್ರಿ 9.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ-30ರ ಬಲೋಡ್‌ನಲ್ಲಿರುವ ಜಾಗತ್ರಾ ತಲುಪಿದ್ದರು. ಅಷ್ಟರಲ್ಲಿ ಎದುರಿನಿಂದ ಬಂದ ಲಾರಿ ಬೊಲೆರೊಗೆ ಡಿಕ್ಕಿ ಹೊಡೆದಿದೆ. ಅಪಘಾತವು ಎಷ್ಟು ತೀವ್ರವಾಗಿದೆ ಎಂದರೆ ಒಂದು ಹೆಣ್ಣು ಮಗು, 5 ಮಹಿಳೆಯರು ಮತ್ತು 4 ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಹೆಣ್ಣು ಮಗು ಗಾಯಗೊಂಡಿದೆ. ಘಟನೆ ಬಳಿಕ ಹೆದ್ದಾರಿಯಲ್ಲಿ ಸಾಗುತ್ತಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ನಂತರ ಎಲ್ಲರನ್ನೂ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲದೆ, ಗಾಯಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರ ಸ್ಥಿತಿಯ ಹಿನ್ನೆಲೆಯಲ್ಲಿ ಅವರನ್ನು ರಾಯ್‌ಪುರಕ್ಕೆ ಕಳುಹಿಸಲಾಗಿದೆ. ಅವರ ಸ್ಥಿತಿ ತುಂಬಾ ಗಂಭೀರವಾಗಿದೆ.

ಮತ್ತಷ್ಟು ಓದಿ:ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ ಬಸ್ ಪಲ್ಟಿ

ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ತಡರಾತ್ರಿಯಾದ ಕಾರಣ ಮೃತರ ಹೆಸರು ಬಹಿರಂಗಪಡಿಸಲು ಸಾಧ್ಯವಾಗಿಲ್ಲ. ಪೊಲೀಸರು ಸಂಬಂಧಿಕರಿಗೂ ಮಾಹಿತಿ ನೀಡಿದ್ದಾರೆ. ಅದೇ ಸಮಯದಲ್ಲಿ, ಲಾರಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗಿಲ್ಲ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಧೈರ್ಯ ನೀಡಲಿ ಎಂದು ಬರೆದುಕೊಂಡಿದ್ದಾರೆ. ಗಾಯಗೊಂಡಿರುವ ಬಾಲಕಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ