Chhattisgarh Accident: ಛತ್ತೀಸ್​ಗಢದಲ್ಲಿ ಟ್ರಕ್​ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ, 6 ಮಂದಿ ಸಾವು, 25 ಜನರಿಗೆ ಗಾಯ

ಟ್ರಕ್ ಹಾಗೂ ಪಿಕಪ್​ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

Chhattisgarh Accident: ಛತ್ತೀಸ್​ಗಢದಲ್ಲಿ ಟ್ರಕ್​ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ, 6 ಮಂದಿ ಸಾವು, 25 ಜನರಿಗೆ ಗಾಯ
ಅಪಘಾತ

Updated on: May 15, 2023 | 9:53 AM

ಟ್ರಕ್ ಹಾಗೂ ಪಿಕಪ್​ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ, ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ.

ಮತ್ತಷ್ಟು ಓದಿ: Andhra Pradesh Accident: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ದುರ್ಮರಣ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳು ಸದ್ಯ ಬಲೋದಬಜಾರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಲಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ವಿಷಯ ಈ ವಿಷಯ ತಿಳಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us