Chhattisgarh: ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ, ಏಳು ಮಂದಿ ಸ್ಥಳದಲ್ಲೇ ಸಾವು, ಮೂರು ಜನರಿಗೆ ಗಾಯ

ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Chhattisgarh: ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ, ಏಳು ಮಂದಿ ಸ್ಥಳದಲ್ಲೇ ಸಾವು, ಮೂರು ಜನರಿಗೆ ಗಾಯ
Bus collides with a truck parked on the road
Edited By:

Updated on: Sep 12, 2022 | 10:27 AM

ಛತ್ತೀಸ್‌ಗಢ: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಕೊರ್ಬಾ ಪೊಲೀಸರು ತಿಳಿಸಿದ್ದಾರೆ. ಬಾಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್‌ನಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ ಕೊರ್ಬಾದಿಂದ ರಾಯಪುರಕ್ಕೆ ಹೋಗುತ್ತಿತ್ತು ಎಂದು ಕೊರ್ಬಾದ ಪೊಲೀಸ್ ಅಧೀಕ್ಷಕ ಸಂತೋಷ್ ಸಿಂಗ್ ಹೇಳಿದ್ದಾರೆ.

ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಚಾಲಕನನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಘಟನೆಯಲ್ಲಿ ಏಳು ಮಂದಿ ಬಸ್‌ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ. ಘಟನೆಯ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 10:25 am, Mon, 12 September 22