AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಡದಲ್ಲಿ ರಾಜಕೀಯ ಬಿಕ್ಕಟ್ಟು: ದೆಹಲಿ ನಾಯಕರನ್ನು ಭೇಟಿಯಾಗಲಿದ್ದಾರೆ ಭೂಪೇಶ್ ಬಘೇಲ್

Bhupesh Baghel: ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಘೇಲ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆಸಿ ವೇಣುಗೋಪಾಲ್ ನಮ್ಮನ್ನು ಕರೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ ಎಐಸಿಸಿಯ ಛತ್ತೀಸ್‌ಗಡದ ಉಸ್ತುವಾರಿ ಪಿಎಲ್ ಪುನಿಯಾ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಹೇಳಿದರು.

ಛತ್ತೀಸ್​ಗಡದಲ್ಲಿ ರಾಜಕೀಯ ಬಿಕ್ಕಟ್ಟು: ದೆಹಲಿ ನಾಯಕರನ್ನು ಭೇಟಿಯಾಗಲಿದ್ದಾರೆ ಭೂಪೇಶ್ ಬಘೇಲ್
ಭೂಪೇಶ್​ ಬಘೇಲ್​
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 27, 2021 | 4:42 PM

Share

ರಾಯ್ಪುರ್: ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel)  ಮತ್ತು ಟಿಎಸ್ ಸಿಂಗ್ ದಿಯೊ (TS Singh Deo) ನಡುವಿನ ರಾಜಕೀಯ ಜಟಾಪಟಿ ಮುಂದುವರಿದಿದ್ದು ಬಘೇಲ್ ಶುಕ್ರವಾರ ಬೆಳಗ್ಗೆ 9 ಶಾಸಕರು ಮತ್ತು ಅಖಿಲ ಭಾರತ ಫ್ರೊಫೆಷನಲ್ ಕಾಂಗ್ರೆಸ್ ಸದಸ್ಯರೊಂದಿಗೆ ದೆಹಲಿಗೆ ತೆರಳಿದ್ದಾರೆ. ಬೆಳಗ್ಗೆ ಶಾಸಕರು ಹೊರಟಿದ್ದು, ಮುಖ್ಯಮಂತ್ರಿಯವರು ಬೆಳಿಗ್ಗೆ 11 ಗಂಟೆಗೆ ಇಬ್ಬರು ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಹೊರಟಿದ್ದಾರೆ ಎಂದು ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಘೇಲ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆಸಿ ವೇಣುಗೋಪಾಲ್ ನಮ್ಮನ್ನು ಕರೆದಿದ್ದಾರೆ ಎಂದು ಹೇಳಿದ್ದಾರೆ. ಆದರೆ ಎಐಸಿಸಿಯ ಛತ್ತೀಸ್‌ಗಡದ ಉಸ್ತುವಾರಿ ಪಿಎಲ್ ಪುನಿಯಾ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ದೆಹಲಿಗೆ ಪ್ರಯಾಣಿಸಿದ್ದಾರೆ ಎಂದು ಹೇಳಿದರು.

ಗುರುವಾರ ಮತ್ತು ಶುಕ್ರವಾರದ ನಡುವೆ, ಸುಮಾರು 35 ಶಾಸಕರು ದೆಹಲಿಗೆ ಪ್ರಯಾಣಿಸಿದ್ದು, ಪುನಿಯಾ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಮಾರ್ಕಮ್ ಅವರು ಶಿಸ್ತು ಅನುಸರಿಸಿ ಹೈಕಮಾಂಡ್​​ನ್ನು ಗೌರವಿಸುವಂತೆ ಶಾಸಕರಿಗೆ ಹೇಳಿದ್ದಾರೆ. ಛತ್ತೀಸ್​ಗಡದಲ್ಲಿ ಕಾಂಗ್ರೆಸ್ 70 ಶಾಸಕರನ್ನು ಹೊಂದಿದೆ.  ಐದು ಕ್ಯಾಬಿನೆಟ್ ಮಂತ್ರಿಗಳು ಮತ್ತು ಒಬ್ಬ ಸಂಸದರೂ ಸಹ ಬಘೇಲ್‌ ಪರವಾಗಿ ನಿಂತಿದ್ದಾರೆ.

ಸಿಎಂ ಸ್ಥಾನಕ್ಕೆ ಪರ್ಯಾಯ ಹೊಣೆಗಾರಿಕೆ ವ್ಯವಸ್ಥೆ ಇನ್ನೂ ಮುಕ್ತವಾಗಿದೆ ಮತ್ತು ಹೈಕಮಾಂಡ್ ಸೌಹಾರ್ದಯುತ ಪರಿಹಾರವನ್ನು ಬಯಸುತ್ತದೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಅನೇಕ ಶಾಸಕರ ಆಗಮನವು ಬಘೇಲ್ ಕೇಂದ್ರ ನಾಯಕತ್ವದ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಸೂಚಿಸುತ್ತದೆ. ಶಾಸಕಾಂಗ ಪಕ್ಷದಲ್ಲಿ ಅವರಿಗೆ ಸ್ಪಷ್ಟ ಬಹುಮತವಿದೆ ಎಂಬ ಸಂದೇಶವನ್ನು ಕಳುಹಿಸುವ ಪ್ರಯತ್ನವೂ ಇದಾಗಿದೆ.

“ನಾನು ಯಾರ ಹೇಳಿಕೆಯ ಬಗ್ಗೆಯೂ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಬಘೇಲ್ ಹೇಳಿದರು. ಏಕೆ ಅನೇಕ ಶಾಸಕರು ಇದ್ದಕ್ಕಿದ್ದಂತೆ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಕೇಳಿದಾಗ “ಅವರು ತಮ್ಮ ನಾಯಕರನ್ನು ಭೇಟಿಯಾಗಲಿದ್ದಾರೆ. ಕೊವಿಡ್ -19 ನಿರ್ಬಂಧದಿಂದಾಗಿ ಯಾರೂ ಪ್ರಯಾಣಿಸಲು ಸಾಧ್ಯವಾಗಲಿಲ್ಲ ಮತ್ತು ಆದ್ದರಿಂದ, ಅವರು ಈಗ ಹೋಗುತ್ತಿದ್ದಾರೆ. ನನಗೂ ಕರೆ ಮಾಡಲಾಗಿದೆ, ಹಾಗಾಗಿ ನಾನು ಹೋಗುತ್ತಿದ್ದೇನೆ ಎಂದಿದ್ದಾರೆ ಬಘೇಲ್.

ಬಘೇಲ್ ಅವರು ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ ಮತ್ತು ರಾಹುಲ್ ಗಾಂಧಿಯನ್ನು ಭೇಟಿಯಾಗುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಈಗಾಗಲೇ ದೆಹಲಿಯಲ್ಲಿರುವ ಶಾಸಕರು ನಾಯಕರಿಂದ ಅಪಾಯಿಂಟ್ಮೆಂಟ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ.

ಏತನ್ಮಧ್ಯೆ, ಪ್ರತಿಪಕ್ಷ ಬಿಜೆಪಿ ಸರ್ಕಾರದ ಸ್ಥಿರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ., “ಎಲ್ಲಾ ಶಾಸಕರು ಒಟ್ಟುಗೂಡಿದ್ದಾರೆ ಎಂದರೆ ಸರ್ಕಾರದಲ್ಲಿ ದೊಡ್ಡ ಬಿಕ್ಕಟ್ಟು ಇದೆ ಎಂದರ್ಥ ಎಂದು ಮಾಜಿ ಸಿಎಂ ರಮಣ್ ಸಿಂಗ್ ಹೇಳಿದರು.

ಇದನ್ನೂ ಓದಿ: ಛತ್ತೀಸ್​​ಗಡ ಕಾಂಗ್ರೆಸ್​​ನಲ್ಲಿ ಬಿಕ್ಕಟ್ಟು: ನಾಯಕತ್ವ ಬದಲಾವಣೆಯ ಮಾತುಕತೆ ಇಲ್ಲ ಎಂದ ಪಿಎಲ್ ಪುನಿಯಾ

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆಗಳಿಂದ ಟೀಕೆಗೀಡಾಗಿದ್ದ ನವಜೋತ್ ಸಿಂಗ್ ಸಲಹೆಗಾರ ಮಲ್ವಿಂದರ್ ಸಿಂಗ್ ರಾಜೀನಾಮೆ

(Chhattisgarh Chief Minister Bhupesh Baghel to meet Congress leadership headed to Delhi along with 9 MLAs)

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್