ಛತ್ತೀಸ್​ಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರು ಮಂದಿ ಬಂಧನ

ಛತ್ತೀಸ್​ಗಢದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದೆ, ಬುಡಕಟ್ಟು ಮಹಿಳೆ ಮೇಲೆ ಎಂಟು ಮಂದಿ ಅತ್ಯಾಚಾರವೆಸಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ. ಎಂಟು ಮಂದಿ ಮದ್ಯದ ಅಮಲಿನಲ್ಲಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಆಗಸ್ಟ್ 12 ರಂದು ರಾಯಗಢ್‌ನ ಪುಸೌರ್ ಪ್ರದೇಶದ ಗ್ರಾಮದ ಬಳಿ ರಕ್ಷಾಬಂಧನವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಛತ್ತೀಸ್​ಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರು ಮಂದಿ ಬಂಧನ
ಅಪರಾಧImage Credit source: Sky News
Follow us
ನಯನಾ ರಾಜೀವ್
|

Updated on: Aug 23, 2024 | 8:14 AM

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಜನರ ಮನಸ್ಸಿಂದ ಮಾಸುವ ಮುನ್ನವೇ ಹಲವೆಡೆ ಅತ್ಯಾಚಾರ ನಡೆದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಛತ್ತೀಸ್​ಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಂಟು ಮಂದಿ ಮದ್ಯದ ಅಮಲಿನಲ್ಲಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಆಗಸ್ಟ್ 12 ರಂದು ರಾಯಗಢ್‌ನ ಪುಸೌರ್ ಪ್ರದೇಶದ ಗ್ರಾಮದ ಬಳಿ ರಕ್ಷಾಬಂಧನವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರಾಯಗಢಕ್ಕೆ ಹೋಗುತ್ತಿದ್ದಾಗ ಎಂಟು ಮಂದಿ ಆಕೆಯನ್ನು ಅಪಹರಿಸಿ ಬಲವಂತವಾಗಿ ಸಮೀಪದ ಕೊಳದ ಬಳಿ ಕರೆದೊಯ್ದು ಐದು ಗಂಟೆಗಳ ಕಾಲ ಅತ್ಯಾಚಾರವೆಸಗಿದ್ದಾರೆ. ಘಟನೆಯ ನಂತರ, ಮಹಿಳೆ ಹೇಗೋ ತನ್ನ ಮನೆಗೆ ತಲುಪಿ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದಳು, ನಂತರ ಪೊಲೀಸರಿಗೆ ದೂರು ನೀಡಲಾಯಿತು.

ಮತ್ತಷ್ಟು ಓದಿ: Crime News: ಮಗುವಿನ ಎದುರೇ ಹೆಂಡತಿಯನ್ನು ಕೊಂದು, ಸೂಟ್​ಕೇಸ್​ನಲ್ಲಿ ಪ್ಯಾಕ್ ಮಾಡಿದ ಗಂಡ!

ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಮದ್ಯದ ಅಮಲಿನಲ್ಲಿದ್ದರು ಮತ್ತು ಮಹಿಳೆಯನ್ನು ಒಬ್ಬಂಟಿಯಾಗಿ ನೋಡಿದ ಅವರು ಆಕೆಯನ್ನು ಅಪಹರಿಸಿ, ಅತ್ಯಾಚಾರವೆಸಗಿ ನಂತರ ಸ್ಥಳದಿಂದ ಪರಾರಿಯಾಗಿದ್ದರು.

ಏತನ್ಮಧ್ಯೆ, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮಾತನಾಡಿ, ಘಟನೆಯು ಅತ್ಯಂತ ಗಂಭೀರವಾಗಿದೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.

ರಾಯಗಢದ ಪುಸೌರ್ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯು ತುಂಬಾ ಗಂಭೀರವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕು ಎಂದು ಬಘೆಲ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು