Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ

ನಕ್ಸಲ್ ಪೀಡಿತ ಪ್ರದೇಶವೆಂದೇ ಗುರುತಿಸಿಕೊಂಡಿರುವ ಛತ್ತೀಸ್​ಗಢದಲ್ಲಿ ಮಂಗಳವಾರ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು 29 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು.

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ನಕ್ಸಲ್Image Credit source: Mint
Follow us
ನಯನಾ ರಾಜೀವ್
|

Updated on:Apr 17, 2024 | 8:30 AM

ಛತ್ತೀಸ್​ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್​ಕೌಂಟರ್​ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್​ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್​ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್​ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.

ಮಾವೋವಾದಿಗಳ ಭದ್ರಕೋಟೆಯಾಗಿರುವ ಬಸ್ತಾರ್​ ಪ್ರದೇಶದಲ್ಲಿ ಇದುವರೆಗೆ ನಡೆದ ಎನ್​ಕೌಂಟರ್​ನಲ್ಲಿ ಈ ವರ್ಷ 79 ನಕ್ಸಲರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್​ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್​ಕೌಂಟರ್​ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

ಮತ್ತಷ್ಟು ಓದಿ: Chhattisgarh: ಕಂಕೇರ್​ನಲ್ಲಿ ಎನ್​ಕೌಂಟರ್​, ಮೂವರು ನಕ್ಸಲರ ಕೊಂದ ಯೋಧರು

ನಿಷೇಧಿತ ಸಿಪಿಐಯ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥ ಶಂಕರ್, ಲಲಿತಾ, ರಾಜು ಮತ್ತು ಇತರರು ಇರುವ ಬಗ್ಗೆ ಮಾಹಿತಿ ಆಧರಿಸಿ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.

ಸ್ಥಳದಿಂದ 29 ನಕ್ಸಲೀಯರ ಮೃತದೇಹಗಳು , ಎಕೆ-47, ಎಸ್​ಎಲ್​ಆರ್​, ಐಎನ್​ಎಸ್​ಎಎಸ್​, 303 ರೈಫಲ್​ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ, ಕಂಕೇರ್ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Wed, 17 April 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ