ರಾಯ್‌ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು ನಕ್ಸಲರು ಅಳವಡಿಸಿದ್ದ ಐಇಡಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಐಟಿಬಿಪಿಯ (ITBP) 53ನೇ ಬೆಟಾಲಿಯನ್‌ನ ತಂಡವೊಂದು ರಸ್ತೆ ನಿರ್ಮಾಣ ಕಾಮಗಾರಿಯ ಭದ್ರತೆಗಾಗಿ ಗಸ್ತು ಕರ್ತವ್ಯಕ್ಕೆ ತೆರಳುತ್ತಿದ್ದಾಗ ದೊಂಡ್ರಿಬೀಡ ಮತ್ತು ಸೋನ್‌ಪುರ ಗ್ರಾಮಗಳ ನಡುವೆ ಇಂದು ಬೆಳಗ್ಗೆ 8.30ರ ಸುಮಾರಿಗೆ ಐಇಡಿ ಸ್ಫೋಟಿಸಲಾಗಿದೆ (IED Blast) ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಪಿ. ಸುಂದರರಾಜ್ ತಿಳಿಸಿದ್ದಾರೆ.
ಐಟಿಬಿಪಿ ಗಸ್ತು ತಂಡವು ಅರಣ್ಯ ಪ್ರದೇಶವನ್ನು ಸುತ್ತುವರೆದಾಗ ಈ ಘಟನೆ ನಡೆದಿದೆ. ಐಇಡಿ ಸ್ಫೋಟದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ಸಿಂಗ್ ಮೃತಪಟ್ಟಿದ್ದಾರೆ. ಹೆಡ್ ಕಾನ್‌ಸ್ಟೆಬಲ್ ಮಹೇಶ್ ಲಕ್ಷ್ಮಣ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
वीर का नमन… #भावभीनी_श्रद्धांजलि
DG ITBP & all ranks pay tribute to ASI/GD Rajendra Singh of 53rd Battalion ITBP who attained Veergati in an IED blast near Sonpur, Narayanpur, Chhattisgarh on 14/3/2022. #भारत_के_वीर #Bharat_Ke_Veer pic.twitter.com/wUaOcGT7iS
— ITBP (@ITBP_official) March 14, 2022
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲಾ ಆಸ್ಪತ್ರೆಯ ಸೋನ್‌ಪುರ್ ಬಳಿಯ ರಸ್ತೆ ನಿರ್ಮಾಣ ಸ್ಥಳದಲ್ಲಿ ಇಂದು ಬೆಳಗ್ಗೆ ಮಾವೋವಾದಿಗಳು ಸಿಡಿಸಿದ ಐಇಡಿ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಪೊಲೀಸ್ ಪಡೆಯ ಯೋಧ ಹುತಾತ್ಮರಾಗಿದ್ದಾರೆ. ಉತ್ತರಾಖಂಡದ ರಾಜೇಂದ್ರ ಸಿಂಗ್ ಅವರನ್ನು ಐಟಿಬಿಪಿ 53ನೇ ಬೆಟಾಲಿಯನ್‌ಗೆ ನಿಯೋಜಿಸಲಾಗಿತ್ತು. ರಾಜೇಂದ್ರ ಸಿಂಗ್ 1989ರಲ್ಲಿ ಸೇನಾಪಡೆಗೆ ಸೇರ್ಪಡೆಯಾಗಿದ್ದರು. ಐಇಡಿ ದಾಳಿಯಲ್ಲಿ ಅವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಐಇಡಿ ಸ್ಫೋಟದಲ್ಲಿ ಹೆಡ್ ಕಾನ್‌ಸ್ಟೆಬಲ್ ಮಹೇಶ್ ಲಕ್ಷ್ಮಣ್ ಕೂಡ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ನಾರಾಯಣಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಐಟಿಬಿಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮೂರು ಪ್ರತ್ಯೇಕ ಎನ್ಕೌಂಟರ್: ನಾಲ್ವರು ಉಗ್ರರ ಸಾವು
Kulgam Blast: ಕಾಶ್ಮೀರದ ಕುಲ್ಗಾಮ್ನಲ್ಲಿ ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ