Video: ಮದುವೆಯಾಗಲು ಒಪ್ಪದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ನಡೆಸಿ, ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ವ್ಯಕ್ತಿ

ಮದುವೆಯಾಗಲು ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ಅಮಾನವೀಯ ಘಟನೆಯೊಂದು ಛತ್ತೀಸ್​ಗಢದಲ್ಲಿ ನಡೆದಿದೆ.

Video: ಮದುವೆಯಾಗಲು ಒಪ್ಪದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ನಡೆಸಿ, ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ವ್ಯಕ್ತಿ
ಬಾಲಕಿ ಮೇಲೆ ಹಲ್ಲೆ
Follow us
ನಯನಾ ರಾಜೀವ್
|

Updated on: Feb 20, 2023 | 10:14 AM

ಮದುವೆಯಾಗಲು ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿ ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ಅಮಾನವೀಯ ಘಟನೆಯೊಂದು ಛತ್ತೀಸ್​ಗಢದಲ್ಲಿ ನಡೆದಿದೆ. ಛತ್ತೀಸ್​ಗಢದ ಗುಧಿಯಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಮಧ್ಯಮ ವಯಸ್ಸಿನ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾನೆ. ತನ್ನ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ವ್ಯಕ್ತಿ, ಆಕೆಯನ್ನು ಮದುವೆಯಾಗುವಂತೆ ಪೀಡಿಸಿದ್ದಾನೆ, ಆದರೆ ಮದುವೆಗೆ ನಿರಾಕರಿಸಿದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಬಳಿಕ ಆಕೆಯ ಜುಟ್ಟು ಹಿಡಿದು ರಸ್ತೆಯ ತುಂಬೆಲ್ಲಾ ಎಳೆದಾಡಿದ್ದಾನೆ, ಜನರು ನೋಡುತ್ತಾ ನಿಂತು ವಿಡಿಯೋ ಮಾಡುತ್ತಿದ್ದರೇ ವಿನಃ ಬಾಲಕಿಯ ಸಹಾಯಕ್ಕೆ ಯಾರು ಮುಂದಾಗದೇ ಇರುವುದು ವಿಪರ್ಯಾಸ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಪ್ರಾಥಮಿಕ ತನಿಖೆಯಲ್ಲಿ, ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯನ್ನು ಗುರುತಿಸಿದ್ದಾರೆ, ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಗುಧಿಯಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ಪ್ರಕಾರ, ಸಂತ್ರಸ್ತೆ ಆರೋಪಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಓಂಕಾರ್ ತಿವಾರಿ ಅಲಿಯಾಸ್ ಮನೋಜ್ (47) ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದರು.

ಘಟನೆಯ ಬಗ್ಗೆ ವಿವರಗಳನ್ನು ಹಂಚಿಕೊಂಡ ಎಸ್‌ಎಸ್‌ಪಿ, ಸಂತ್ರಸ್ತೆಯು ಕೆಲಸ ಬಿಡಲು ಮುಂದಾಗಿದ್ದಳು, ಈ ಕಾರಣದಿಂದ ವ್ಯಕ್ತಿಯು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಏತನ್ಮಧ್ಯೆ,ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದರು ಮತ್ತು ಸಂತ್ರಸ್ತೆಯ ತಾಯಿ ಅದನ್ನು ನಿರಾಕರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ನಿರಾಕರಣೆಯಿಂದ ನೊಂದ ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಆಕೆಯ ಕೂದಲನ್ನು ಹಿಡಿದು ಎಳೆದೊಯ್ದಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ