AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಸೆರೆ

ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್​ಗಢದ ದುರ್ಗ್​ನಲ್ಲಿ ನಡೆದಿದೆ. ಆರೋಪಿ ಪದೇ ಪದೇ ಊರು ಬದಲಾಯಿಸುತ್ತಿದ್ದ, ಜತೆಗೆ ತನ್ನ ಗುರುತು ಕೂಡ ಬದಲಾಯಿಸಿಕೊಂಡಿದ್ದ.

ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ  12 ವರ್ಷಗಳ ಬಳಿಕ ಸೆರೆ
ಆರೋಪಿImage Credit source: India Today
ನಯನಾ ರಾಜೀವ್
|

Updated on: Nov 24, 2024 | 2:49 PM

Share

ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್​ಗಢದ ದುರ್ಗ್​ನಲ್ಲಿ ನಡೆದಿದೆ. ಆರೋಪಿ ಪದೇ ಪದೇ ಊರು ಬದಲಾಯಿಸುತ್ತಿದ್ದ, ಜತೆಗೆ ತನ್ನ ಗುರುತು ಕೂಡ ಬದಲಾಯಿಸಿಕೊಂಡಿದ್ದ.

ಪತಿ-ಪತ್ನಿ ಇಬ್ಬರೂ ಜಗಳವಾಡಿದ್ದರು ಅದು ವಿಕೋಪಕ್ಕೆ ಹೋಗಿ ವ್ಯಕ್ತಿ ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ, ನಂತರ ಅಪರಾಧ ಸ್ಥಳದಿಂದ ಪರಾರಿಯಾಗಿದ್ದ. ಪತಿ-ಪತ್ನಿ ಇಬ್ಬರೂ ನಿತ್ಯ ಮದ್ಯಪಾನ ಮಾಡುತ್ತಿದ್ದು, ಮದ್ಯದ ಅಮಲಿನಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಬಳಿಕ ಆರೋಪಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಹಳೆ ಪ್ರಕರಣಗಳ ನಿತ್ಯ ಪರಿಶೀಲನೆ ನಡೆಸುತ್ತಿದ್ದಾಗ, ಮಾಹಿತಿದಾರರೊಬ್ಬರು ನೀಡಿದ ಸುಳಿವು ರಾಜನಂದಗಾಂವ್‌ನಲ್ಲಿ ಆರೋಪಿಗಳ ಉಪಸ್ಥಿತಿಯನ್ನು ಬಹಿರಂಗಪಡಿಸಿತು. ಮಾಹಿತಿಗಳನ್ನು ಪರಿಶೀಲಿಸಿದ ನಂತರ, ನೆವಾಯಿ ಪೊಲೀಸರು ಪತ್ತೆ ತಪ್ಪಿಸಲು ವಿವಿಧ ವೇಷಗಳಲ್ಲಿ ವಿವಿಧ ಕೆಲಸಗಳನ್ನು ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಕೆಲವೊಮ್ಮೆ ಮಗಳ ಮನೆಯಲ್ಲಿ ತಲೆಮರೆಸಿಕೊಂಡು ಬೇರೆ ಬೇರೆ ಜಿಲ್ಲೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಅವರ ನಿರಂತರ ಚಲನವಲನಗಳನ್ನು ಗಮನಿಸಿ ಪೊಲೀಸರು ಬಂಧಿಸಿದ್ದಾರೆ. ಆತ ಚಾಣಾಕ್ಷನಾಗಿದ್ದು, ಪೊಲೀಸರ ದಾರಿ ತಪ್ಪಿಸಲು ಪದೇ ಪದೇ ತನ್ನ ಗುರುತು ಹಾಗೂ ವಿಳಾಸವನ್ನು ಬದಲಾಯುಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು