AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದ ಬಿಜಾಪುರದಲ್ಲಿ 12 ನಕ್ಸಲರ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಎನ್‌ಕೌಂಟರ್‌ನಲ್ಲಿ 12 ನಕ್ಸಲರನ್ನು ತಟಸ್ಥಗೊಳಿಸುವ ಮೂಲಕ ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಮಧ್ಯಂತರ ಎನ್​ಕೌಂಟರ್​​​​ಗಳು ನಡೆಯುತ್ತಿವೆ.

ಛತ್ತೀಸ್‌ಗಢದ ಬಿಜಾಪುರದಲ್ಲಿ 12 ನಕ್ಸಲರ ಎನ್‌ಕೌಂಟರ್‌
Naxalite Encounter
ಸುಷ್ಮಾ ಚಕ್ರೆ
|

Updated on: Jan 16, 2025 | 8:19 PM

Share

ನವದೆಹಲಿ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶದ ದಟ್ಟ ಅರಣ್ಯ ಪ್ರದೇಶಗಳಲ್ಲಿ ನಡೆಸಲಾದ ಈ ಕಾರ್ಯಾಚರಣೆಯು ಎಡಪಂಥೀಯ ಉಗ್ರವಾದದ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಪ್ರಮುಖ ಪ್ರಗತಿಯಾಗಿದೆ. ಬಿಜಾಪುರ ಮತ್ತು ತೆಲಂಗಾಣದ ಗಡಿಯಲ್ಲಿರುವ ಮೂರು ಜಿಲ್ಲೆಗಳ ನಕ್ಸಲರ ವಿರುದ್ಧ ಸೈನಿಕರು ಪ್ರಮುಖ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಛತ್ತೀಸ್​ಗಢದ ಬಿಜಾಪುರದ ಕಾಡಿನಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಪಿಲಿಭಿತ್​ನಲ್ಲಿ ಮೂವರು ಖಲಿಸ್ತಾನಿ ಉಗ್ರರ ಎನ್​ಕೌಂಟರ್

ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆದಿದೆ. ಇಂದು ಬೆಳಿಗ್ಗೆ 9 ಗಂಟೆಯಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಮಧ್ಯಂತರ ಎನ್​ಕೌಂಟರ್​​​​ಗಳು ನಡೆಯುತ್ತಿವೆ. ಎನ್​ಕೌಂಟರ್ ಸ್ಥಳದಿಂದ 1 ಎಸ್ಎಲ್ಆರ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿಂದೆ ಜನವರಿ 12ರಂದು ಬಿಜಾಪುರದ ಮಾಡೆಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್​ಕೌಂಟರ್​​ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 5 ನಕ್ಸಲರು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ