AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು

ಛತ್ತೀಸ್​ಗಢದಲ್ಲಿ ನಕ್ಸಲರು ಎರಡು ಮೊಬೈಲ್​ ಟವರ್​ಗಳನ್ನು ಸುಟ್ಟು ಭಸ್ಮ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಕಳೆದ ಒಂದು ವಾರದ ಹಿಂದಷ್ಟೇ ಇದೇ ಪ್ರದೇಶದಲ್ಲಿ 30 ಮಂದಿ ನಕ್ಸಲರು ಶರಣಾಗಿದ್ದರು.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು
ನಯನಾ ರಾಜೀವ್
|

Updated on: Jun 02, 2024 | 10:35 AM

Share

ಛತ್ತೀಸ್​ಗಢದಲ್ಲಿ ಮತ್ತೆ ನಕ್ಸಲರ ಹಾವಳಿ ಮುಂದುವರೆದಿದ್ದು, ಇಂದು ಮೊಬೈಲ್​ ಟವರ್​ ಸುಟ್ಟು ಭಸ್ಮ ಮಾಡಿದ್ದಾರೆ. ಬಿಜಾಪುರದ ಎರಡು ಗ್ರಾಮಗಳಲ್ಲಿ ಅಳವಡಿಸಿದ್ದ ಎರಡು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಧೌಡೈ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ, ನಾರಾಯಣಪುರ ಪೊಲೀಸ್​ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಇದಕ್ಕೂ ಮುನ್ನ ಮೇ 27ರಂದು ನಾರಾಯಣಪುರದ ಛೋಟೆಡೊಂಗರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎರಡು ಮಬೈಲ್​ ಟವರ್​ಗಳಿಗೆ ಬೆಂಕಿ ಹಚ್ಚಿದ್ದರು. ಮೇ 25ರಂದು ಬಿಜಾಪುರದ ಜಪ್ಪೆಮಾರ್ಕ್​ ಮತ್ತು ಕಮ್ಕನಾರ್​ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದರು.

ಛತ್ತೀಸ್​ಗಢ: ಭದ್ರತಾ ಪಡೆದ ಮುಂದೆ ಶರಣಾದ 30 ನಕ್ಸಲರು ಛತ್ತೀಸ್​ಗಢದ ಬಿಜಾಪುರದಲ್ಲಿ 30 ನಕ್ಸಲರು(Naxals) ಭದ್ರತಾಪಡೆಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ 9 ನಕ್ಸಲರ ತಲೆ ಮೇಲೆ 39 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಮತ್ತು ಮಾವೋವಾದದ ಪೊಳ್ಳು ಸಿದ್ದಾಂತದಿಂದ ನಿರಾಶಗೊಂಡಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ. ಛತ್ತೀಸ್​ಗಢ ಪೊಲೀಸ್​ ಹಾಗೂ ಸಿಆರ್​ಪಿಎಫ್​ನ ಹಿರಿಯ ಅಧಿಕಾರಿಗಳ ಮುಂದೆ ಶರಣಾದ ನಕ್ಸಲರಲ್ಲಿ ಆರು ಮಹಿಳೆಯರೂ ಇದ್ದಾರೆ.

ಮತ್ತಷ್ಟು ಓದಿ: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಪ್ರಕರಣದ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಶರಣಾದ 30 ನಕ್ಸಲೀಯರ ಪೈಕಿ ಮಿಟ್ಕಿ ಕಾಕೆಂ ಅಲಿಯಾಸ್ ಸರಿತಾ (35), ಮುರಿ ಮುಹಂದ ಅಲಿಯಾಸ್ ಸುಖಮತಿ (32) ಕೂಡ ಸೇರಿದ್ದಾರೆ. ಇಬ್ಬರ ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನವಿದೆ. ಇತರ ನಕ್ಸಲೀಯರಾದ ರಜಿತಾ ವೆಟ್ಟಿ (24), ಕೊವಾಸಿ (24), ಆಯ್ತಾ ಸೋಧಿ (22) ಮತ್ತು ಸೀನು ಪದಂ (27) ಅವರ ತಲೆಯ ಮೇಲೆ ತಲಾ 5 ಲಕ್ಷ ರೂಪಾಯಿ ಬಹುಮಾನವಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ