ಛತ್ತೀಸ್ಗಢ: ಭಾರತದಿಂದ ನಕ್ಸಲಿಸಂ ತೊಡೆದು ಹಾಕುವಲ್ಲಿ ಮಹತ್ವದ ಹೆಜ್ಜೆ, 31 ನಕ್ಸಲರ ಹತ್ಯೆ
ಭಾರತದಿಂದ 2026ರೊಳಗೆ ನಕ್ಸಲಿಸಂ ತೊಡೆದು ಹಾಕುತ್ತೇವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದಂತೆ ಇಂದು ಭಾರತೀಯ ಭದ್ರತಾ ಪಡೆ 31 ನಕ್ಸಲರನ್ನು ಹತ್ಯೆ ಮಾಡಿದೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹನ್ನೆರಡು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಆರಂಭಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಟು ಮಾವೋವಾದಿಗಳು ಸಾವನ್ನಪ್ಪಿದ ಒಂದು ವಾರದ ನಂತರ ಈ ಎನ್‌ಕೌಂಟರ್ ನಡೆದಿದೆ.

ಭಾರತದಿಂದ 2026ರೊಳಗೆ ನಕ್ಸಲಿಸಂ ತೊಡೆದು ಹಾಕುತ್ತೇವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದಂತೆ ಇಂದು ಭಾರತೀಯ ಭದ್ರತಾ ಪಡೆ 31 ನಕ್ಸಲರನ್ನು ಹತ್ಯೆ ಮಾಡಿದೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹನ್ನೆರಡು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಆರಂಭಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಟು ಮಾವೋವಾದಿಗಳು ಸಾವನ್ನಪ್ಪಿದ ಒಂದು ವಾರದ ನಂತರ ಈ ಎನ್‌ಕೌಂಟರ್ ನಡೆದಿದೆ. ಜನವರಿ 31 ರಂದು ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದು ಎಂಟು ಮಾವೋವಾದಿಗಳು ಸಾವನ್ನಪ್ಪಿದರು.
ಪಶ್ಚಿಮ ಬಸ್ತಾರ್ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶುಕ್ರವಾರ ಕಾರ್ಯಾಚರಣೆ ಆರಂಭಿಸಲಾಗಿತ್ತು. ಜಿಲ್ಲಾ ಮೀಸಲು ಪಡೆ ಮತ್ತು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಭಾಗಿಯಾಗಿದ್ದವು ಎಂದು ಅವರು ಹೇಳಿದರು.
ಮತ್ತಷ್ಟು ಓದಿ: ಮಾರ್ಚ್ 2026ರೊಳಗೆ ಭಾರತದಿಂದ ನಕ್ಸಲಿಸಂ ನಿರ್ಮೂಲನೆ; ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ ಬಳಿಕ ಅಮಿತ್ ಶಾ ಭರವಸೆ
ಜನವರಿ 6 ರಂದು ಛತ್ತೀಸ್‌ಗಢದಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್‌ನ (ಡಿಆರ್‌ಜಿ) 8 ಯೋಧರು ಮತ್ತು ಓರ್ವ ಚಾಲಕ ಸಾವನ್ನಪ್ಪಿದ್ದರು.
ಮಾಡಿರುವ ಅವರು ಮಾರ್ಚ್ 2026ರೊಳಗೆ ಕೇಂದ್ರ ಸರ್ಕಾರವು ಭಾರತದಿಂದ ನಕ್ಸಲಿಸಂ ಅನ್ನು ತೊಡೆದುಹಾಕುತ್ತದೆ ಎಂದು ಅಮಿತ್ ಶಾ ಭರವಸೆ ನೀಡಿದ್ದರು. ಸೈನಿಕರ ಪ್ರಾಣ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು.ಈ ಸೇನಾ ವಾಹನದಲ್ಲಿ 20 ಡಿಆರ್‌ಜಿ ಯೋಧರು ಪ್ರಯಾಣಿಸುತ್ತಿದ್ದರು. ಜಂಟಿ ಕಾರ್ಯಾಚರಣೆ ಬಳಿಕ ವಾಪಸಾಗುತ್ತಿದ್ದಾಗ ಐಇಡಿ ಸ್ಫೋಟ ಸಂಭವಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:02 pm, Sun, 9 February 25




