ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ

ಛತ್ತೀಸ್‌ಗಢದ ಕೊರ್ಬಾದಲ್ಲಿ ಮನುಕುಲ ತಲೆತಗ್ಗಿಸುವ ಘಟನೆ ನಡೆದಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲಿನಲ್ಲಿ ಪತಿ ಸಲಿಕ್ ರಾಮ್ ಯಾದವ್, ಪತ್ನಿ ಸುಮತಿ ಅವರ ತಲೆಯನ್ನು ಹರಿತವಾದ ಆಯುಧದಿಂದ ಕಡಿದು, ಆ ರುಂಡವನ್ನು ಹಿಡಿದುಕೊಂಡು ಊರಿನ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾನೆ. ನಂತರ ಆತ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಘಟನೆಯು ನಾಲ್ಕು ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ.

ಪತ್ನಿಯ ತಲೆ ಕಡಿದು ಕೈಯಲ್ಲಿ ರುಂಡ ಹಿಡಿದು ಊರಿನ ತುಂಬಾ ಮೆರವಣಿಗೆ ಮಾಡಿದ ಪತಿ
ಆರೋಪಿ

Updated on: Apr 24, 2026 | 10:48 AM

ಕೊರ್ಬಾ, ಏಪ್ರಿಲ್ 24: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ಜರುಗಿದೆ. ಕ್ಷುಲ್ಲಕ ಕೌಟುಂಬಿಕ ಕಲಹ ಮತ್ತು ಮದ್ಯದ ಅಮಲು ಒಬ್ಬ ವ್ಯಕ್ತಿಯನ್ನು ಎಷ್ಟು ಕ್ರೂರನನ್ನಾಗಿ ಮಾಡಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಜಿಲ್ಲೆಯ ರಾಜ್‌ಗಮರ್ ಪೊಲೀಸ್ ಔಟ್‌ಪೋಸ್ಟ್ ವ್ಯಾಪ್ತಿಯ ಬುಂದೇಲಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 58 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಹರಿತವಾದ ಆಯುಧದಿಂದ ಶಿರಚ್ಛೇದ(Behead) ಮಾಡಿ, ಬಳಿಕ ಕತ್ತರಿಸಿದ ತಲೆಯನ್ನು ಹಿಡಿದು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ.

ಆರೋಪಿ ಸಲಿಕ್ ರಾಮ್ ಯಾದವ್ ಸ್ಥಳೀಯ ಕೋಳಿ ಸಾಕಣೆ ಕೇಂದ್ರದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಸಂಜೆ ಪತ್ನಿ ಸುಮತಿ (50) ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದ ಸಲಿಕ್, ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ, ಕೋಳಿ ಕತ್ತರಿಸಲು ಬಳಸುವ ಹರಿತವಾದ ಮಾಂಸ ಕತ್ತರಿಸುವ ಆಯುಧದಿಂದ ಪತ್ನಿಯ ಕುತ್ತಿಗೆಗೆ ಬಲವಾಗಿ ಏಟು ಹಾಕಿ ಶಿರಚ್ಛೇದ ಮಾಡಿದ್ದಾನೆ.

ಹತ್ಯೆಯ ನಂತರದ ದೃಶ್ಯಗಳು ಗ್ರಾಮಸ್ಥರನ್ನು ಸ್ತಬ್ಧಗೊಳಿಸಿದ್ದವು. ಸಲಿಕ್ ಒಂದು ಕೈಯಲ್ಲಿ ಪತ್ನಿಯ ಕತ್ತರಿಸಿದ ತಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ರಕ್ತಸಿಕ್ತ ಆಯುಧವನ್ನು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಓಡಾಡಿದ್ದಾನೆ. ಬಳಿಕ ತಲೆ ಮತ್ತು ಆಯುಧವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಮತ್ತಷ್ಟು ಓದಿ: ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು?

ಪೊಲೀಸ್ ವಿಚಾರಣೆಯ ವೇಳೆ ಸಲಿಕ್ ನೀಡಿದ ಹೇಳಿಕೆಗಳು ಆಘಾತಕಾರಿಯಾಗಿವೆ. ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಮೂಲತಃ ಅಜ್ಗರ್‌ಬಹಾರ್ ಹಲ್ದಿಮಾಡ ಗ್ರಾಮದ ಈ ದಂಪತಿ ಕಳೆದ ಮೂರು ವರ್ಷಗಳಿಂದ ಈ ಕೋಳಿ ಸಾಕಣೆ ಕೇಂದ್ರದಲ್ಲಿ ನೆಲೆಸಿದ್ದರು. ಅವರಿಗೆ ನಾಲ್ಕು ಮಕ್ಕಳಿದ್ದು, ತಂದೆ ಜೈಲು ಪಾಲಾಗಿ ತಾಯಿ ಹೆಣವಾಗಿ ಬಿದ್ದಿರುವುದನ್ನು ಕಂಡು ಮಕ್ಕಳು ದಿಕ್ಕೆಟ್ಟಿದ್ದಾರೆ.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us