
ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.
ಕುಟುಂಬದ ಕಾರ್ಯಕ್ರಮದ ನಿಮಿತ್ತ ಹಲವು ಮಂದಿ ಟ್ರಕ್ನಲ್ಲಿ ಹೋಗುತ್ತಿದ್ದರು, ಇದು ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಮೃತರು ಪಥರಾ ಗ್ರಾಮದವರಾಗಿದ್ದು, ತಿರೈಯಾ ಗ್ರಾಮದಲ್ಲಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ಓದಿ: ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ
ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.
ಛತ್ತೀಸ್‌ಗಢದ ಬೆಮೆತಾರಾ ಸಮೀಪದ ಕಥಿಯಾ ಗ್ರಾಮದ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಹಿಂದಿನ ಕಾರಣವನ್ನು ತನಿಖೆ ಮಾಡಲಾಗುತ್ತಿದೆ.
ಅಪಘಾತದ ನಂತರ ಸಾವನ್ನಪ್ಪಿದವರಲ್ಲಿ 5 ಮಹಿಳೆಯರು ಮತ್ತು 3 ಮಕ್ಕಳು ಸೇರಿದ್ದಾರೆ. ಸೋಮವಾರ ಬೆಳಗ್ಗೆಯೇ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿ ಸಾಹು (60), ಖುಷ್ಬೂ ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:02 am, Mon, 29 April 24