Chhattisgarh: ಸಿಡಿಲು ಬಡಿದು ಇಬ್ಬರು ಸಾವು, ಮೂವರಿಗೆ ಗಾಯ
ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರತಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಖಜೂರಿ ಗ್ರಾಮದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಛತ್ತೀಸ್‌ಗಢ: ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪ್ರತಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಖಜೂರಿ ಗ್ರಾಮದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಮೃತರನ್ನು ಟೋನಿ ಗ್ರಾಮದ ನಿವಾಸಿಗಳಾದ ನಂದಲಾಲ್ ಪೈಕ್ರಾ (27) ಮತ್ತು ಸಂಜಯ್ ಯಾದವ್ (25) ಎಂದು ಗುರುತಿಸಲಾಗಿದ್ದು, ಪ್ರತಾಪುರ್ ಮಾರುಕಟ್ಟೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಭಾರೀ ಮಳೆ ಪ್ರಾರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರೂ ಮರದ ಕೆಳಗೆ ಇರುವ ಅಂಗಡಿಯಲ್ಲಿ ಮಳೆಗೆ ನಿಂತಿದ್ದರು, ಅಲ್ಲಿ ಇನ್ನೂ ಕೆಲವರು ನಿಂತಿದ್ದರು. ಇದ್ದಕ್ಕಿದ್ದಂತೆ ಮಿಂಚು ಬಡಿಯಿತು. ಪೈಕ್ರಾ ಮತ್ತು ಯಾದವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಅಂಗಡಿ ಮಾಲೀಕ ಸೇರಿದಂತೆ ಇತರ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದರು. ಸೂರಜ್‌ಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡ ರಾಜ್ಯದ ಸುರ್ಗುಜಾ ಭಾಗದಲ್ಲಿ ಇತ್ತೀಚೆಗೆ ಹಲವು ಬಾರಿ ಸಿಡಿಲು ಬಡಿದ ಘಟನೆಗಳು ನಡೆದಿವೆ.
Published On - 6:45 pm, Tue, 20 September 22