ಚುನಾವಣಾ ಬಾಂಡ್‌ಗಳ ವಿವರಗಳನ್ನು ತಕ್ಕ ಸಮಯದಲ್ಲಿ ಬಹಿರಂಗಪಡಿಸುತ್ತೇವೆ: ಮುಖ್ಯ ಚುನಾವಣಾ ಆಯುಕ್ತ

"ನಾವು 2024 ರ ಲೋಕಸಭೆ ಚುನಾವಣೆಗೆ ಸಿದ್ಧರಿದ್ದೇವೆ. ನಾವು ದೇಶಾದ್ಯಂತ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶಾದ್ಯಂತ ಮತದಾರರು 'ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ನಾವು ವಿನಂತಿಸುತ್ತೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಚುನಾವಣಾ ಬಾಂಡ್‌ಗಳ ವಿವರಗಳನ್ನು ತಕ್ಕ ಸಮಯದಲ್ಲಿ ಬಹಿರಂಗಪಡಿಸುತ್ತೇವೆ: ಮುಖ್ಯ ಚುನಾವಣಾ ಆಯುಕ್ತ
ರಾಜೀವ್ ಕುಮಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 13, 2024 | 7:13 PM

ಜಮ್ಮು ಮಾರ್ಚ್ 13: ಚುನಾವಣಾ ಆಯೋಗವು (Election Commission) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (SBI) ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಸ್ವೀಕರಿಸಿದೆ. ಎಲ್ಲಾ ಸಂಬಂಧಿತ ಮಾಹಿತಿಯನ್ನು ಸರಿಯಾದ ಸಮಯಕ್ಕೆ ಹಂಚಿಕೊಳ್ಳುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಬುಧವಾರ ಹೇಳಿದ್ದಾರೆ. ಏಪ್ರಿಲ್ 12, 2019 ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಬ್ಯಾಂಕ್ ಈ ಮಾಹಿತಿಯನ್ನು ಮಂಗಳವಾರ ಸಂಜೆ ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು. ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಅಧಿಕೃತ ಹಣಕಾಸು ಸಂಸ್ಥೆಯಾಗಿದೆ.

SBI ಮಾರ್ಚ್ 12 ರೊಳಗೆ ಡೇಟಾವನ್ನು ಸಲ್ಲಿಸಬೇಕಿತ್ತು. ಅವರು ನಮಗೆ ವಿವರಗಳನ್ನು ಸಮಯಕ್ಕೆ ನೀಡಿದ್ದಾರೆ. ನಾವು ಡೇಟಾವನ್ನು ನೋಡುತ್ತೇವೆ. ಅದನ್ನು ಸರಿಯಾದ ಸಮಯಕ್ಕೆ ಬಹಿರಂಗಪಡಿಸುತ್ತೇವೆ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಕುಮಾರ್ ಬುಧವಾರ ಜಮ್ಮುಗೆ ಬಂದಿದ್ದರು.

ರಾಜೀವ್ ಕುಮಾರ್ ಸುದ್ದಿಗೋಷ್ಠಿ

“ನಾವು 2024 ರ ಲೋಕಸಭೆ ಚುನಾವಣೆಗೆ ಸಿದ್ಧರಿದ್ದೇವೆ. ನಾವು ದೇಶಾದ್ಯಂತ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶಾದ್ಯಂತ ಮತದಾರರು ‘ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ನಾವು ವಿನಂತಿಸುತ್ತೇವೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 2 ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ

ಅದೇ ವೇಳೆ ಸುಳ್ಳು ಸುದ್ದಿಗಳಿಗೆ ನೈಜ ಸಮಯದಲ್ಲಿ ಪ್ರತಿಕ್ರಿಯಿಸಲು ಎಲ್ಲಾ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮ ಕೋಶಗಳನ್ನು ಸ್ಥಾಪಿಸಲಾಗುವುದು. “ಎಲ್ಲಾ ಅಭ್ಯರ್ಥಿಗಳಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಲಾಗುವುದು ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗುವುದು” ಎಂದು ಅವರು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಲೆಟ್‌ಗಳ ಮೂಲಕ ಆನ್‌ಲೈನ್ ನಗದು ವರ್ಗಾವಣೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುವುದು ಎಂದು ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ