AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗದ ಸ್ವಾತಂತ್ರ್ಯವೆಂದರೆ ಯಾವಾಗಲೂ ಸರ್ಕಾರದ ವಿರುದ್ಧ ತೀರ್ಪು ನೀಡುವುದಲ್ಲ: ಡಿವೈ ಚಂದ್ರಚೂಡ್

ನ್ಯಾಯಾಂಗದ ಸ್ವಾತಂತ್ರ್ಯ ಎಂದರೆ ಯಾವಾಗಲೂ ಸರ್ಕಾರದ ವಿರುದ್ಧ ತೀರ್ಪು ನೀಡುವುದು ಎಂದಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಕೆಲವು ಗುಂಪುಗಳು ತಮ್ಮ ಪರವಾಗಿ ತೀರ್ಪು ನೀಡುವಂತೆ ನ್ಯಾಯಾಲಯಗಳ ಮೇಲೆ ಒತ್ತಡ ಹೇರಲು ಮಾಧ್ಯಮವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ.

ನ್ಯಾಯಾಂಗದ ಸ್ವಾತಂತ್ರ್ಯವೆಂದರೆ ಯಾವಾಗಲೂ ಸರ್ಕಾರದ ವಿರುದ್ಧ ತೀರ್ಪು ನೀಡುವುದಲ್ಲ: ಡಿವೈ ಚಂದ್ರಚೂಡ್
ಡಿವೈ ಚಂದ್ರಚೂಡ್ Image Credit source: The fina
ನಯನಾ ರಾಜೀವ್
|

Updated on: Nov 05, 2024 | 9:29 AM

Share

ನ್ಯಾಯಾಂಗದ ಸ್ವಾತಂತ್ರ್ಯ ಎಂದರೆ ಯಾವಾಗಲೂ ಸರ್ಕಾರದ ವಿರುದ್ಧ ತೀರ್ಪು ನೀಡುವುದು ಎಂದಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಕೆಲವು ಗುಂಪುಗಳು ತಮ್ಮ ಪರವಾಗಿ ತೀರ್ಪು ನೀಡುವಂತೆ ನ್ಯಾಯಾಲಯಗಳ ಮೇಲೆ ಒತ್ತಡ ಹೇರಲು ಮಾಧ್ಯಮವನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದರು.

ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಜೆಐ, ಪ್ರಕರಣಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನ್ಯಾಯಮೂರ್ತಿಗಳನ್ನು ನಂಬುವಂತೆ ಜನರಲ್ಲಿ ಕೇಳಿಕೊಂಡರು. ನ್ಯಾಯಮೂರ್ತಿಗಳು ತಮ್ಮ ಆತ್ಮಸಾಕ್ಷಿಯು ಅವರಿಗೆ ಏನು ಹೇಳುತ್ತದೆ ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ಹೊಂದಿರಬೇಕು.

ತೀರ್ಪು ಯಾರ ಪರವಾಗಿ ಬಂದರೂ ನ್ಯಾಯದ ಕಡೆಯೇ ಇರುತ್ತದೆ ಎಂಬುದನ್ನು ನಂಬಬೇಕಿದೆ. ಸರ್ಕಾರ ವಿರುದ್ಧ ತೀರ್ಪು ನೀಡಿದಾಗ ಅದು ಸರಿ ಸರ್ಕಾರದ ಪರ ತೀರ್ಪು ನೀಡಿದಾಗ ಅದು ತಪ್ಪು ಎನ್ನುವಂತಿಲ್ಲ ಏಕೆಂದರೆ ಸರ್ಕಾರದ ವಿರುದ್ಧ ಹೋಗಬೇಕಾದ ಪ್ರಕರಣಗಳಲ್ಲಿ ಅವರ ವಿರುದ್ಧವೂ ತೀರ್ಪು ನೀಡಿದ್ದೇವೆ. ಏನೇ ನಿರ್ಣಯಿಸಬೇಕಿದ್ದರೂ ಕಾನೂನಿನ ಪ್ರಕಾರವೇ ಹೋಗಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ:ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ಗಣೇಶ ಪೂಜೆಯಂದು ನನ್ನ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಅದು ಸಾರ್ವಜನಿಕ ಭೇಟಿಯೇ ಹೊರತು ಖಾಸಗಿ ಭೇಟಿಯಾಗಿರಲಿಲ್ಲ. ನ್ಯಾಯಾಂಗ ಮತ್ತು ಕಾರ್ಯಾಂಗದ ಪ್ರತಿನಿಧಿಗಳ ಭೇಟಿಯಲ್ಲಿ ತಪ್ಪೇನಿಲ್ಲ ಎಂದು ಚಂದ್ರಚೂಡ್ ಹೇಳಿದ್ದಾರೆ. ಚಂದ್ರಚೂಡ್ ಅವರು ಈ ನವೆಂಬರ್ 10 ರಂದು ನಿವೃತ್ತರಾಗುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!