ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಓಲೈಕೆ ರಾಜಕಾರಣ ಅಬಾಧಿತವಾಗಿ ನಡೆದಿದೆ. ತಾಜಾ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಹಾಲಿ 65 ವರ್ಷದಿಂದ ಏಕ್ದಂ 5 ವರ್ಷ ಏರಿಸಿ, 70 ವರ್ಷಕ್ಕೆ ನಿವೃತ್ತಿ ವಯಸ್ಸನ್ನು ನಿಗದಿಪಡಿಸಲು ಮುಂದಾಗಿದೆ.

ಚುನಾವಣೆ ಸಂದರ್ಭ ವೈದ್ಯರ ನಿವೃತ್ತಿ ವಯಸ್ಸನ್ನು ಏಕ್ದಂ 5 ವರ್ಷ ಏರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 20, 2021 | 8:34 AM

ಲಖ್ನೋ: ಉತ್ತರ ಪ್ರದೇಶದಲ್ಲಿ ವೈದ್ಯರುಗಳ ಕೊರತೆ ಇದೆ ಎಂಬುದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಮನವರಿಕೆಯಾಗಿದ್ದು, ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಹಾಕಿ ಇರುವ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಸಲು ನಿರ್ಧರಿಸಿದ್ದಾರೆ. ಗಮನಾರ್ಹವೆಂದರೆ ಇನ್ನಾರು ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಸಾರ್ವತ್ರಿಕ ಅಸೆಂಬ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಓಲೈಕೆ ರಾಜಕಾರಣ ಅಬಾಧಿತವಾಗಿ ನಡೆದಿದೆ. ತಾಜಾ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಹಾಲಿ 65 ವರ್ಷದಿಂದ ಏಕ್ದಂ 5 ವರ್ಷ ಏರಿಸಿ, 70 ವರ್ಷಕ್ಕೆ ನಿವೃತ್ತಿ ವಯಸ್ಸನ್ನು ನಿಗದಿಪಡಿಸಲು ಮುಂದಾಗಿದೆ.

ಕೊರೊನಾ ಕಾಟದಿಂದ (COVID-19 pandemic) ಪರಿಣತ ವೈದ್ಯರ ಕೊರತೆ ಎದುರಾಗಿದೆ. ಹಾಗಾಗಿ ಈ ಕ್ರಮ ಅನಿವಾರ್ಯವಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಮುದ್ರೆ ಬೀಳಲಿದೆ ಎಂದು ಉತ್ತರ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ಸುರೇಶ್​ ಖನ್ನಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇತ್ತೀಚೆಗೆ 65 ವರ್ಷಕ್ಕೆ ನಿವೃತ್ತಿ ಹೊಂದುತ್ತಿದ್ದಂತೆ ಬಹುತೇಕ ವೈದ್ಯರು ಖಾಸಿ ಆಸ್ಪತ್ರೆಗಳಲ್ಲಿ ತಮ್ಮ ವೈದ್ಯ ಸೇವೆ ಮುಂದುವರಿಸುವ ವಿದ್ಯಮಾನ ಬೆಳಕಿಗೆ ಬಂದಿತ್ತು. ಅದನ್ನು ಮನಗಂಡು ನಿವೃತ್ತಿ ವಯಸ್ಸನ್ನು ಏರಿಸುವ ಮೂಲಕ ಅಂತಹ ವೈದ್ಯರು ಇನ್ನೂ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ತಮ್ಮ ಸೇವೆ ಮುಂದುವರಿಸುವಂತಾಗಲಿ ಎಂದು ಆರೋಗ್ಯ ಸಚಿವ ಸುರೇಶ್​ ಖನ್ನಾ ಆಶಿಸಿದ್ದಾರೆ.

2018ರ ಅಂಕಿ ಅಂಶ ಪ್ರಕಾರ ಉತ್ತರ ಪ್ರದೇಶದಲ್ಲಿ ಪ್ರತಿ ವೈದ್ಯರು 19,962 ಮಂದಿ ರೋಗಿಗಳನ್ನು ನೋಡಿಕೊಳ್ಳುವಂತಾಗಿದೆ. ಅದೇ ರಾಜಧಾನಿ ದೆಹಲಿಯಲ್ಲಿ 2203 ರೋಗಿಗಳಿಗೆ ಒಬ್ಬ ಡಾಕ್ಟರ್ ಇದ್ದಾರೆ.

Also Read: ಉತ್ತರ ಪ್ರದೇಶದಲ್ಲಿ ನಾಲ್ಕೂವರೆ ವರ್ಷದ ಬಿಜೆಪಿ ಸರ್ಕಾರ ಉತ್ತಮ ಆಡಳಿತದ ಮೈಲಿಗಲ್ಲು: ಯೋಗಿ ಆದಿತ್ಯನಾಥ

(Chief Minister Yogi Adityanath gives consent to proposal of increasing retirement age of doctors in Uttar Pradesh to 70 years)

Published On - 8:19 am, Mon, 20 September 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ