Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಲ್ಲಿ ಬಿಜೆಪಿ ಮುಖ್ಯಮಂತ್ರಿಗಳ ಒಗ್ಗಟ್ಟು ಪ್ರದರ್ಶನ; ಇಂದು ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆಯಲಿರುವ 12 ಸಿಎಂಗಳು

ಬಿಜೆಪಿಯ ಮುಖ್ಯಮಂತ್ರಿಗಳು ಉತ್ತರಪ್ರದೇಶದಲ್ಲಿಯೇ ಇದ್ದಾರೆ. ಅವರಿಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಇದು ತುಂಬ ಮಹತ್ವ ಪಡೆದುಕೊಂಡಿದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಮುಖ್ಯಮಂತ್ರಿಗಳ ಒಗ್ಗಟ್ಟು ಪ್ರದರ್ಶನ; ಇಂದು ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆಯಲಿರುವ 12 ಸಿಎಂಗಳು
ಅಯೋಧ್ಯೆಯ ಚಿತ್ರಣ
Follow us
TV9 Web
| Updated By: Lakshmi Hegde

Updated on:Dec 15, 2021 | 10:35 AM

ಅಯೋಧ್ಯಾ: ಬಿಜೆಪಿ ಸರ್ಕಾರ ಇರುವ 12 ರಾಜ್ಯಗಳ ಮುಖ್ಯಮಂತ್ರಿಗಳು ಸದ್ಯ ಕಾಶಿಯಲ್ಲಿದ್ದಾರೆ. ಡಿಸೆಂಬರ್​ 13ರಂದು ಕಾಶಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಕೊಟ್ಟು ಅಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ್ದಾರೆ. ಅದರ ಮರುದಿನ ಅಂದರೆ ಡಿ.14ರಂದು ಬಿಜೆಪಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಮಂಡಲ ಮತ್ತು ಜಿಲ್ಲಾಧ್ಯಕ್ಷರ ಜತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಅದೇ ದಿನ ಮಧ್ಯಾಹ್ನ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನರೇಂದ್ರ ಮೋದಿಯವರು ದೆಹಲಿಗೆ ವಾಪಸ್ ಆಗಿದ್ದರೂ ಕೂಡ, ಬಿಜೆಪಿಯ ಮುಖ್ಯಮಂತ್ರಿಗಳು ಉತ್ತರಪ್ರದೇಶದಲ್ಲಿಯೇ ಇದ್ದಾರೆ. ಅವರಿಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಇದು ತುಂಬ ಮಹತ್ವ ಪಡೆದುಕೊಂಡಿದೆ.

ಅಂದಹಾಗೆ ಇಂದು ಹಿಮಾಚಲಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಅಸ್ಸಾಂ, ಮಣಿಪುರ, ತ್ರಿಪುರ, ಗುಜರಾತ್​, ಹರ್ಯಾಣ, ಗೋವಾ, ಬಿಹಾರ, ನಾಗಾಲ್ಯಾಂಡ್​ ಮತ್ತು ಅರುಣಾಚಲಪ್ರದೇಶಗಳ ಮುಖ್ಯಮಂತ್ರಿಗಳು ಅಯೋಧ್ಯೆಗೆ ಭೇಟಿ ನೀಡಲಿದ್ದು, ಇಂದು ಸಂಜೆ ಅಲ್ಲಿಯೇ ಉಳಿಯಲಿದ್ದಾರೆ. ಹಾಗೇ, ಅವರೊಂದಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಉಪಮುಖ್ಯಮಂತ್ರಿ ಕೇಶವ ಪ್ರಸಾದ್​ ಮೌರ್ಯ ಕೂಡ ಇರಲಿದ್ದಾರೆ. ಈ ಮುಖ್ಯಮಂತ್ರಿಗಳು ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸುವ ಜತೆ, ವಿವಿಧ ದೇವಸ್ಥಾನಗಳಿಗೆ ಭೇಟಿ ಕೊಡಲಿದ್ದಾರೆ.

ಜೆ.ಪಿ.ನಡ್ಡಾ ಮೊದಲ ಭೇಟಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಾಗೇ, ಅಲ್ಲಿ ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಸೇರಿ ಶ್ರೀರಾಮಮಂದಿರ ನಿರ್ಮಾಣದ ಕಾಮಗಾರಿ ವೀಕ್ಷಿಸಲಿದ್ದಾರೆ. ಅಂದಹಾಗೆ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಜೆ.ಪಿ.ನಡ್ಡಾ ಇದೇ ಮೊದಲ ಬಾರಿಗೆ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: 3 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ 6 ತಿಂಗಳಲ್ಲಿ ಕೊವಿಡ್ ಲಸಿಕೆ ಸಿದ್ಧವಾಗಲಿದೆ: ಅದಾರ್ ಪೂನಾವಲಾ

Published On - 9:55 am, Wed, 15 December 21

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್
ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್