AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ

ಫರೀದ್‌ಕೋಟ್‌ನಲ್ಲಿ ಪೊಲೀಸ್ ಎಎಸ್‌ಐ ಸರಬ್ಜಿತ್ ಕೌರ್ ತಮ್ಮ 5 ವರ್ಷದ ಮೊಮ್ಮಗಳ ಕೈಕಾಲುಗಳನ್ನು ಮನೆಯ ಗೇಟ್‌ಗೆ ಕಟ್ಟಿ ಬಿಸಿಲಿನಲ್ಲಿ ಮಲಗಿಸಿದ್ದಾರೆ. ಅಕ್ಕಪಕ್ಕದವರು ವಿಡಿಯೋ ಮಾಡಿ ಹಂಚಿಕೊಂಡ ನಂತರ ಘಟನೆ ವೈರಲ್ ಆಗಿದ್ದು, ಎಎಸ್‌ಐ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ.

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ
ಬಾಲಕಿImage Credit source: India Today
ನಯನಾ ರಾಜೀವ್
|

Updated on: Apr 16, 2026 | 10:32 AM

Share

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ ಮೊಮ್ಮಗಳ ಕೈ ಮತ್ತು ಕಾಲುಗಳನ್ನು ಬಟ್ಟೆಯಿಂದ ಮನೆಯ ಗೇಟ್‌ಗೆ ಕಟ್ಟಿಹಾಕಿದ್ದರು. ಸುಡುವ ಬಿಸಿಲಿನಲ್ಲಿ ಮಗು ಅಳುತ್ತಾ ಮಲಗಿದ್ದರೂ ಕರುಣೆ ತೋರದ ಅಜ್ಜಿ, ಹಾಗೆಯೇ ಬಿಟ್ಟು ಹೋಗಿದ್ದಾರೆ.

ಮಗುವಿನ ಎದೆ ಸೀಳುವಂತಹ ಅಳುವಿನ ಧ್ವನಿ ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದಿದ್ದಾರೆ. ಅಲ್ಲಿ ಕಂಡ ದೃಶ್ಯ ಅವರನ್ನು ಕಂಗಾಲು ಮಾಡಿದೆ. ಮಗು ಬಿಸಿಲಿನಲ್ಲಿ ನರಳುತ್ತಿರುವುದನ್ನು ಕಂಡ ಸಾರ್ವಜನಿಕರು ತಕ್ಷಣ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಮತ್ತು ಮಗುವಿನ ಕಟ್ಟುಗಳನ್ನು ಬಿಚ್ಚಿ ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪಂಜಾಬ್ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಮತ್ತಷ್ಟು ಓದಿ: Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಪೋಷಕರು ವಿದೇಶದಲ್ಲಿದ್ದಾರೆ ಬಾಲಕಿಯ ತಂದೆ-ತಾಯಿ ಕೆಲಸದ ನಿಮಿತ್ತ ಪೋರ್ಚುಗಲ್‌ನಲ್ಲಿ ವಾಸಿಸುತ್ತಿದ್ದಾರೆ. ಮಗುವನ್ನು ಉತ್ತಮವಾಗಿ ನೋಡಿಕೊಳ್ಳುತ್ತಾರೆಂಬ ಭರವಸೆಯ ಮೇಲೆ ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಆದರೆ ಅಜ್ಜಿಯೇ ಮಗುವಿನ ಮೇಲೆ ಈ ರೀತಿ ದರ್ಪ ತೋರಿರುವುದು ಪೋಷಕರಿಗೂ ಆಘಾತ ತಂದಿದೆ.

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ ಘಟನೆ ಬೆಳಕಿಗೆ ಬಂದ ತಕ್ಷಣ ಫರೀದ್‌ಕೋಟ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಪ್ರಜ್ಞಾ ಜೈನ್ ಅವರು ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಪೊಲೀಸ್ ಪಡೆಯಲ್ಲಿ ಶಿಸ್ತು ಮತ್ತು ಮಾನವೀಯತೆ ಮುಖ್ಯ. ಅಧಿಕಾರಿಯೊಬ್ಬರು ಮಗುವಿನ ಮೇಲೆ ಇಂತಹ ಕ್ರೌರ್ಯ ತೋರುವುದು ಸ್ವೀಕಾರಾರ್ಹವಲ್ಲ ಎಂದು ಡಿಎಸ್ಪಿ ತರ್ಲೋಚನ್ ಸಿಂಗ್ ತಿಳಿಸಿದ್ದಾರೆ.

ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ಒಪ್ಪಿಸಲಾಗಿದೆ ಮತ್ತು ಸಂರಕ್ಷಣೆ ನೀಡಲಾಗುತ್ತಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆ ಅಜ್ಜಿಯ ವಿಕೃತ ವರ್ತನೆಯ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ