ನಿತೀಶ್ ಕುಮಾರ್ ಬೆಂಗಾವಲು ಪಡೆಗಾಗಿ ಸಂಚಾರ ನಿರ್ಬಂಧ; ಮಗು ಜೀವನ್ಮರಣ ಹೋರಾಟದಲ್ಲಿದೆ ಎಂದರೂ ಆ್ಯಂಬುಲೆನ್ಸ್​​ನ್ನು ಬಿಡಲಿಲ್ಲ

ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮಹಿಳೆ  ಕಣ್ಣೀರಾಗಿದ್ದಾರೆ. ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಹಾದುಹೋಗುವವರೆಗೆ ಆಂಬ್ಯುಲೆನ್ಸ್ ಒಂದು ಗಂಟೆ ಆ ಪ್ರದೇಶದಲ್ಲಿಯೇ ಇರಬೇಕಾಯಿತು. ನಳಂದದಲ್ಲಿ ಎಥೆನಾಲ್ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ನಿತೀಶ್ ಕುಮಾರ್ ಇಂದು ಪಾಟ್ನಾಗೆ ಹಿಂತಿರುಗುತ್ತಿದ್ದರು.

ನಿತೀಶ್ ಕುಮಾರ್ ಬೆಂಗಾವಲು ಪಡೆಗಾಗಿ ಸಂಚಾರ ನಿರ್ಬಂಧ; ಮಗು ಜೀವನ್ಮರಣ ಹೋರಾಟದಲ್ಲಿದೆ ಎಂದರೂ ಆ್ಯಂಬುಲೆನ್ಸ್​​ನ್ನು ಬಿಡಲಿಲ್ಲ
ಟ್ರಾಫಿಕ್​​ನಲ್ಲಿ ಸಿಕ್ಕಿಹಾಕಿಕೊಂಡ ಆ್ಯಂಬುಲೆನ್ಸ್​​​ನಲ್ಲಿದ್ದ ಮಹಿಳೆ
Follow us
ರಶ್ಮಿ ಕಲ್ಲಕಟ್ಟ
|

Updated on: Sep 30, 2023 | 7:17 PM

ಪಾಟ್ನಾ  ಸೆಪ್ಟೆಂಬರ್30: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರ ಬೆಂಗಾವಲು ಪಡೆ ಆ ದಾರಿಯಾಗಿ ಹಾದು ಹೋಗುತ್ತಿದ್ದುದರಿಂದ ಇತರ ವಾಹನಗಳಿಗೆ ಸಂಚಾರ ನಿರ್ಬಂಧ ಹೇರಲಾಗಿತ್ತು. ಭಾರೀ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್‌ನೊಳಗೆ ಮಗುವನ್ನು ಹಿಡಿದಿದ್ದ ಮಹಿಳೆ , ತಾಳ್ಮೆ ಕಳೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಪಾಟ್ನಾ ಸಮೀಪದ ಫತುಹಾದಲ್ಲಿ ನಡೆದಿದೆ. ಮಗು ಜೀವನ್ಮರಣ ಹೋರಾಟ ನಡೆಸುತ್ತಿರುವುದರಿಂದ ತಮ್ಮನ್ನು ಬಿಡುವಂತೆ ಆಕೆ ಪೊಲೀಸರಲ್ಲಿ ಪರಿಪರಿಯಾಗಿ ಬೇಡಿಕೊಂಡಿದ್ದಾಳೆ. ಆದರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಈ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಪೊಲೀಸರು ಆಂಬ್ಯುಲೆನ್ಸ್‌ಗೆ ತೆರಳಲು ಅವಕಾಶ ನೀಡಲಿಲ್ಲ.

ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮಹಿಳೆ  ಕಣ್ಣೀರಾಗಿದ್ದಾರೆ. ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆ ಹಾದುಹೋಗುವವರೆಗೆ ಆಂಬ್ಯುಲೆನ್ಸ್ ಒಂದು ಗಂಟೆ ಆ ಪ್ರದೇಶದಲ್ಲಿಯೇ ಇರಬೇಕಾಯಿತು. ನಳಂದದಲ್ಲಿ ಎಥೆನಾಲ್ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ನಿತೀಶ್ ಕುಮಾರ್ ಇಂದು ಪಾಟ್ನಾಗೆ ಹಿಂತಿರುಗುತ್ತಿದ್ದರು.

ಮುಖ್ಯಮಂತ್ರಿ ಬೆಂಗಾವಲು ಪಡೆ ಸಾಗಲು ಪಾಟ್ನಾ ಪೊಲೀಸರು ಎಲ್ಲಾ ವಾಹನಗಳನ್ನು ತಡೆದಿದ್ದರು. ದುರದೃಷ್ಟವಶಾತ್, ಜನನಿಬಿಡ ರಸ್ತೆಯಲ್ಲಿ ಪೊಲೀಸರು ಎಲ್ಲಾ ಸಂಚಾರವನ್ನು ನಿಲ್ಲಿಸುತ್ತಿದ್ದಂತೆಯೇ ಆಂಬ್ಯುಲೆನ್ಸ್ ಆ ಪ್ರದೇಶವನ್ನು ತಲುಪಿತು.

ಫತುಹಾದಿಂದ ಪಾಟ್ನಾಗೆ ಹೋಗುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಆಂಬ್ಯುಲೆನ್ಸ್ ಚಾಲಕ ಹೇಳಿದ್ದರು. ಆದರೆ ಆಂಬ್ಯುಲೆನ್ಸ್‌ನಲ್ಲಿದ್ದ ಮಗು ಮತ್ತು ಆತಂಕಗೊಂಡ ತಾಯಿಯ ಸ್ಥಿತಿಯನ್ನು ಕಂಡರೂ ಪೊಲೀಸರು ಅವರನ್ನು ಹೋಗಲು ಬಿಡಲಿಲ್ಲ ಎಂದು ಚಾಲಕ ಹೇಳಿದ್ದಾರೆ.

ಇದನ್ನೂ ಓದಿ: ಒಂದು ವಾರದ ಸಂಕಲ್ಪ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ

ಒಂದು ತಿಂಗಳ ಹಿಂದೆ ಪಾಟ್ನಾದಲ್ಲಿ ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಹಾದುಹೋಗಲು ಆಂಬ್ಯುಲೆನ್ಸ್ ಅನ್ನು ನಿಲ್ಲಿಸಿದಾಗ ಇದೇ ರೀತಿಯ ಘಟನೆ ವರದಿಯಾಗಿದೆ. ನಂತರ ಆಂಬ್ಯುಲೆನ್ಸ್ ನಿಲ್ಲಿಸಿದ ಪೊಲೀಸರನ್ನು ಗುರುತಿಸಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್