Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

Covid Vaccine for Children: ಸೆಪ್ಟೆಂಬರ್ ಅಂತ್ಯದ ವೇಳೆಗೆ ಮಕ್ಕಳಿಗೂ ಕೊರೊನಾ ಲಸಿಕೆ ಲಭ್ಯವಾಗಲಿದ್ದು, ಇತರೆ ಆರೋಗ್ಯ ಸಮಸ್ಯೆಗಳಿರುವ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮೊದಲು ಕೊವಿಡ್ ಲಸಿಕೆ ನೀಡಲಾಗುವುದು.

Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 24, 2021 | 12:31 PM

ನವದೆಹಲಿ: ಭಾರತದಲ್ಲಿ ಅಕ್ಟೋಬರ್​ನಿಂದ ಕೊರೊನಾ ಮೂರನೇ ಅಲೆ (Covid-19 3rd Wave) ಶುರುವಾಗುವ ಸಾಧ್ಯತೆಯಿದೆ ಎಂದು ಈಗಾಗಲೇ ತಜ್ಞರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ಮೂರನೇ ಅಲೆ ವಯಸ್ಕರಿಗಿಂತ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಹೀಗಾಗಿ, ಮುಂದಾಗುವ ಅಪಾಯವನ್ನು ನಿಯಂತ್ರಿಸುವ ಸಲುವಾಗಿ ಈಗಾಗಲೇ ಮಕ್ಕಳಿಗೂ ಕೊರೊನಾ ಲಸಿಕೆಗಳನ್ನು(Covid Vaccine for Children)  ಕಂಡುಹಿಡಿಯಲಾಗಿದೆ. ಈ ನಡುವೆ ಇತರೆ ಆರೋಗ್ಯ ಸಮಸ್ಯೆಗಳಿರುವ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಆದ್ಯತೆಯ ಮೇರೆಗೆ ಮೊದಲು ಕೊವಿಡ್ ಲಸಿಕೆ ನೀಡಲಾಗುವುದು ಎಂದು ರಾಷ್ಟ್ರೀಯ ರೋಗನಿರೋಧಕ ತಾಂತ್ರಿಕ ಸಲಹಾ ತಂಡದ (NTAGI) ಸರ್ಕಾರಿ ಸಲಹಾ ಸಮಿತಿ ತಿಳಿಸಿದೆ.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ. ಅದು ಯಶಸ್ವಿಯಾದರೆ ಸೆಪ್ಟೆಂಬರ್ ವೇಳೆಗೆ ಪ್ರತಿ ತಿಂಗಳಿಗೆ 10 ಕೋಟಿ ಕೊವ್ಯಾಕ್ಸಿನ್ ಡೋಸ್​ಗಳನ್ನು ಉತ್ಪಾದಿಸಲಾಗುವುದು ಎಂದು ಎನ್​ಟಿಎಜಿಐ ಮುಖ್ಯಸ್ಥ ಎನ್​ಕೆ ಅರೋರ ಹೇಳಿದ್ದಾರೆ.

ಈಗಾಗಲೇ ಭಾರತ ಮೂಲದ ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್-ಡಿ ಎಂಬ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಜೈಕೋವ್-ಡಿ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ನೀಡಬಹುದು. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್​ನಲ್ಲಿ ಈ ಲಸಿಕೆ ಲಭ್ಯವಾಗಲಿದೆ. ಸೆಪ್ಟೆಂಬರ್​ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ. ಇದು ಭಾರತದಲ್ಲಿ ಲಭ್ಯವಾಗುತ್ತಿರುವ 6ನೇ ಕೊವಿಡ್ ಲಸಿಕೆಯಾಗಿದೆ.

ಅಕ್ಟೋಬರ್ ತಿಂಗಳ ವೇಳೆಗೆ ಡಿಎನ್​ಎ ಆಧಾರಿತ ಏಕೈಕ ಕೊವಿಡ್ ಲಸಿಕೆಯಾಗಿರುವ ಜೈಕೋವ್-ಡಿ ಲಸಿಕೆಯನ್ನು ತಿಂಗಳಿಗೆ 1 ಕೋಟಿ ಡೋಸ್ ಉತ್ಪಾದನೆ ಮಾಡುವುದಾಗಿ ಜೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ. ಹಾಗೇ, 2022ರ ಜನವರಿ ಅಂತ್ಯದ ವೇಳೆಗೆ ಪ್ರತಿ ತಿಂಗಳಿಗೆ 4ರಿಂದ 5 ಕೋಟಿ ಕೊವಿಡ್ ಲಸಿಕೆಗಳನ್ನು ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಜೈಡಸ್ ಕ್ಯಾಡಿಲಾ ಕಂಪನಿ ತಿಳಿಸಿದೆ.

ಜೈಕೋವ್-ಡಿ ಕೊರೊನಾ ಲಸಿಕೆಗೆ ಎಷ್ಟು ಹಣ ನಿಗದಿ ಪಡಿಸಲಾಗುವುದು ಎಂಬ ಬಗ್ಗೆ ಮುಂದಿನ ತಿಂಗಳು ಕಂಪನಿ ಮಾಹಿತಿ ನೀಡಲಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ. ಸೆಪ್ಟೆಂಬರ್ ಅಂತ್ಯದೊಳಗೆ ಈ ಲಸಿಕೆಗಳನ್ನು ಮಾರುಕಟ್ಟೆಗೆ ಬಿಡಲಾಗುವುದು. ಮುಂದಿನ ವರ್ಷ ಆಗಸ್ಟ್ ವೇಳೆಗೆ ಪ್ರತಿ ತಿಂಗಳು 5 ಕೋಟಿ ಜೈಕೋವ್-ಡಿ ಲಸಿಕೆಗಳನ್ನು ಉತ್ಪಾದನೆ ಮಾಡಲಾಗುವುದು. ಭಾರತ ಮೂಲಕ ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ಗೆ ಈಗಾಗಲೇ ಅನುಮತಿ ಸಿಕ್ಕು, ಎಲ್ಲೆಡೆ ವಿತರಣೆ ಮಾಡಲಾಗುತ್ತಿದೆ. ಅದರ ಬಳಿಕ ಭಾರತ ಮೂಲದ ಎರಡನೇ ಕೊವಿಡ್ ಲಸಿಕೆಯೆಂಬ ಹೆಗ್ಗಳಿಕೆಗೆ ಜೈಕೋವ್-ಡಿ ಲಸಿಕೆ ಪಾತ್ರವಾಗಿದೆ. 3 ಡೋಸ್​ಗಳ ಈ ಜೈಕೊವ್-ಡಿ ಲಸಿಕೆಯ ಕುರಿತು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಸಮಿತಿಯು ಸೂಚಿಸಿದೆ. ಈ ಲಸಿಕೆ 12ರಿಂದ 18 ವರ್ಷದೊಳಗಿನ ಮಕ್ಕಳಿಗೂ ಅತ್ಯಂತ ಸುರಕ್ಷಿತವಾಗಿದೆ ಎಂದು ಸಂಸ್ಥೆ ಹೇಳಿದೆ.

12 ವರ್ಷ ಮೇಲ್ಪಟ್ಟವರಿಗೆ ಮಾತ್ರವಲ್ಲದೆ 2ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಪ್ರಯೋಗಗಳು ಕೂಡ ನಡೆಯುತ್ತಿವೆ. 2ರಿಂದ 18 ವರ್ಷ ವಯಸ್ಸಿನವರಿಗೆ 2ರಿಂದ 3 ಹಂತದ ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ. ಈ ಲಸಿಕಾ ಪ್ರಯೋಗದ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗುತ್ತವೆ. ಬಹುಶಃ ಸೆಪ್ಟೆಂಬರ್ ಅಥವಾ ಸೆಪ್ಟೆಂಬರ್ ನಂತರ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಬಹುದು.

ಇದನ್ನೂ ಓದಿ: ZyCov-D Vaccine: ಅಕ್ಟೋಬರ್ ಬಳಿಕ ಭಾರತದಲ್ಲಿ ಪ್ರತಿ ತಿಂಗಳಿಗೆ 1 ಕೋಟಿ ಡೋಸ್ ಜೈಕೋವ್-ಡಿ ಲಸಿಕೆ ಲಭ್ಯ

Corona Vaccine For Children: ಬೆಂಗಳೂರಿನಲ್ಲಿ ಮಕ್ಕಳಿಗೂ ಸಿಗಲಿದೆ ಲಸಿಕೆ; ಎಲ್ಲಿ, ಯಾವಾಗ?

(Children Above 12 With Comorbidities Will Be Covid Vaccination First in India Government Announces)

Published On - 12:29 pm, Tue, 24 August 21

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ