ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ನುಗ್ಗಿದ್ದಾರೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Lakshmi Hegde

Updated on:Jan 19, 2021 | 2:18 PM

ನವದೆಹಲಿ: ಗಡಿಯಲ್ಲಿ ಸದಾ ಒಂದಿಲ್ಲೊಂದು ತಕರಾರು ತೆಗೆಯುತ್ತಾ ಭಾರತದ ವಿರುದ್ಧ ಕಾಲ್ಕೆರೆದು ಜಗಳ ಮಾಡುತ್ತಿರುವ ಚೀನಾ ಈಗ ಸದ್ದಿಲ್ಲದೆ ನಮ್ಮ ಗಡಿ ಒಳಗೆ ನುಗ್ಗಿ ಒಂದು ಹಳ್ಳಿಯನ್ನೇ ನಿರ್ಮಾಣ ಮಾಡಿದೆ. ಈ ಹಳ್ಳಿಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 101 ಮನೆಗಳಿವೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ಅರುಣಾಚಲ ಪ್ರದೇಶದ ತ್ಸಾರಿ ಚು ನದಿ ಸಮೀಪ ಇರುವ ವಿವಾದಿತ ಪ್ರದೇಶದಲ್ಲೇ ಈ ಗ್ರಾಮ ನಿರ್ಮಾಣ ಮಾಡಲಾಗಿದೆ. ಚೀನಾದವರು ನಮ್ಮ ಗಡಿ ಒಳಗೆ ಸುಮಾರು 4.5 ಕಿಮೀ ಒಳ ಬಂದಿದ್ದಾರೆ. ಸುತ್ತಮುತ್ತಲೂ ಕಾಡು ಬೆಳೆದಿದ್ದು, ಮಧ್ಯದಲ್ಲಿ ಈ ಮನೆ ನಿರ್ಮಾಣಗೊಂಡಿದೆ.

ಸ್ಯಾಟಲೈಟ್​ ಚಿತ್ರದ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. 2019 ಆಗಸ್ಟ್​ ತಿಂಗಳಲ್ಲಿ ಆ ಭಾಗದಲ್ಲಿ ಎಲ್ಲವೂ ಖಾಲಿ ಖಾಲಿ ಇತ್ತು. ಆದರೆ, ನವೆಂಬರ್​ 2020ರಂದು ನೋಡಿದಾಗ ಈ ಭಾಗದಲ್ಲಿ ಶೆಡ್​ಗಳು ನಿರ್ಮಾಣಗೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿ, ಸುಮಾರು 101 ಮನೆಗಳು ತಲೆ ಎತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಚೀನಾ ಈ ರೀತಿ ಮಾಡುತ್ತಿರುವುದು ಇದೇ ಮೊದಲನೇಲ್ಲ. ಈ ಮೊದಲು ಕೂಡ ಗಡಿ ಭಾಗದಲ್ಲಿ ಚೀನಾ ಮೂಲ ಸೌಕರ್ಯ ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದೆ. ನಾವು ಕೂಡ ಗಡಿ ಭಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ಭಾರತಕ್ಕೆ ಕಂಟಕ? ಗಡಿ ಭಾಗದಲ್ಲಿ ಈ ರೀತಿ ಹಳ್ಳಿ ನಿರ್ಮಾಣ ಮಾಡಿರುವುದು ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಒಂದೊಮ್ಮೆ, ಭಾರತ-ಚೀನಾ ನಡುವೆ ಯುದ್ಧ ಉಂಟಾದರೆ ಈ ಮನೆಗಳನ್ನು ಚೀನಾ ಶಸ್ತ್ರಾಗಾರವನ್ನಾಗಿ ಬಳಕೆ ಮಾಡಿಕೊಳ್ಳಬಹುದು.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 3:52 pm, Mon, 18 January 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ