AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್​ಕ್ಲಿಕ್​ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ
ಪೊಲೀಸ್
Follow us
ನಯನಾ ರಾಜೀವ್
|

Updated on: Oct 03, 2023 | 9:25 AM

ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನ್ಯೂಸ್​ಕ್ಲಿಕ್ ಸುದ್ದಿ ಸಂಸ್ಥೆಯ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಚೀನಾ ಪರವಾದ ವಿಷಯವನ್ನು ತನ್ನ ವೇದಿಕೆಯಲ್ಲಿ ಪ್ರಕಟಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್‌ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.

ಮಾಧ್ಯಮವೊಂದರ ವರದಿ ಪ್ರಕಾರ ಪೊಲೀಸರು ತನಿಖೆ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನೂ ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಲ್ಯಾಪ್​ಟಾಪ್​, ಮೊಬೈಲ್ ಫೋನ್​ಗಳು, ಹಾರ್ಡ್​ ಡಿಸ್ಕ್​ಗಳು ಕೂಡ ಸೇರಿವೆ.

ಚೀನಾ ಸಂಪರ್ಕ ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ ಹಣವನ್ನು ಪಡೆಯುವ ಜಾಗತಿಕ ನೆಟ್​ವರ್ಕ್​ನಲ್ಲಿ ನ್ಯೂಸ್​ ಕ್ಲಿಕ್ ಒಂದು ಭಾಗವಾಗಿದೆ ಎಂದು ಅಮೆರಿಕದ ಪತ್ರಿಕೆ ನ್ಯೂಯಾರ್ಕ್​ ಟೈಮ್ಸ್​ ಹೇಳಿತ್ತು.

ನ್ಯೂಸ್​ ಕ್ಲಿಕ್​ನಿಂದ ಪಡೆದ ವಿದೇಶಿ ಹಣವು ಎಫ್​ಸಿಆರ್​ಎ ಅಂದೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಇಡಿ ಆರೋಪಿಸಿದೆ.ಈ ನಿಧಿಯನ್ನು ದೇಶವಿರೋಧಿ ಚಟುವಟಿಕೆಗಳಿಗೂ ಬಳಸಲಾಗುತ್ತದೆ ಎಂದು ಆರೋಪಿಸಲಾಗಿತ್ತು. ಚೀನಾದಲ್ಲಿ ನೆಲೆಸಿರುವ ಸಿಂಘಮ್ ಭಾರತದಲ್ಲಿ ಚೀನಾ ಬೆಂಬಲಿತ ಮಾಹಿತಿಯನ್ನು ಪ್ರಸಾರ ಮಾಡಲು ನ್ಯೂಸ್​ಕ್ಲಿಕ್​ಗೆ 38 ಕೋಟಿ ರೂ. ಅಕ್ರಮವಾಗಿ ನೀಡಿದ್ದಾರೆ ಎಂದು ಇಡಿ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?