ಚೀನಾ ನಮ್ಮ ಶತ್ರುವಲ್ಲ; ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ
ಚೀನಾ ದೇಶ ನಮ್ಮ ಶತ್ರುವಲ್ಲ ಎಂಬ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾದಿಂದ ಬರುವ ಬೆದರಿಕೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆಯೇ? ಎಂಬ ಪ್ರಶ್ನೆಗೆ ಸ್ಯಾಮ್ ಪಿತ್ರೋಡಾ ಈ ಉತ್ತರ ನೀಡಿದ್ದಾರೆ. ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ನಾವು ಈ ಮನಸ್ಥಿತಿಯನ್ನು ಬದಲಾಯಿಸಬೇಕು ಮತ್ತು ಮೊದಲ ದಿನದಿಂದಲೇ ಚೀನಾ ಶತ್ರು ಎಂದು ಪರಿಗಣಿಸುವುದನ್ನು ನಿಲ್ಲಿಸಬೇಕು. ಇದು ಚೀನಾಕ್ಕೆ ಮಾತ್ರವಲ್ಲ, ಎಲ್ಲರಿಗೂ ಅನ್ಯಾಯವಾಗಿದೆ ಎಂದು

ನವದೆಹಲಿ: ಕಾಂಗ್ರೆಸ್ ಪಕ್ಷದ ವಿದೇಶಿ ಘಟಕದ ಮುಖ್ಯಸ್ಥರಾಗಿರುವ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ, ಚೀನಾದಿಂದ ಬರುವ ಬೆದರಿಕೆಯನ್ನು ಬೇಕೆಂದೇ ಅತಿರೇಕವಾಗಿ ಬಿಂಬಿಸಲಾಗುತ್ತಿದೆ. ಭಾರತವು ಚೀನಾವನ್ನು ಶತ್ರು ಎಂದು ಪರಿಗಣಿಸುವುದನ್ನು ನಿಲ್ಲಿಸಬೇಕು ಎಂದು ಹೇಳುವ ಮೂಲಕ ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಇಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಭಾರತ-ಚೀನಾ ವಿವಾದವು ಯಾವಾಗಲೂ ಹೆಚ್ಚಾಗಿ ಅತಿರೇಕಕ್ಕೆ ಹೋಗುತ್ತದೆ. ಆದರೆ, ಅದರ ಅವಶ್ಯಕತೆಯಿಲ್ಲ ಎಂದಿದ್ದಾರೆ.
“ಚೀನಾದಿಂದ ಬರುವ ಬೆದರಿಕೆ ನನಗೆ ಅರ್ಥವಾಗುತ್ತಿಲ್ಲ. ಅಮೆರಿಕವು ಶತ್ರುವನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಹೊಂದಿರುವುದರಿಂದ ಈ ವಿಷಯವು ಹೆಚ್ಚಾಗಿ ಅತಿರೇಕಕ್ಕೆ ಹೋಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಿಂದ ಬರುವ ಬೆದರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಸ್ಯಾಮ್ ಪಿತ್ರೋಡಾ ಉತ್ತರಿಸಿದ್ದಾರೆ.
ಇದನ್ನೂ ಓದಿ: ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತಕ್ಕೆ ಬರಲಿ; ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ
“ನಾವು ಈ ಮನಸ್ಥಿತಿಯನ್ನು ಬದಲಾಯಿಸಬೇಕು ಮತ್ತು ಯಾವಾಗಲೂ ಚೀನಾ ಶತ್ರು ದೇಶ ಎಂದು ಪರಿಗಣಿಸುವುದನ್ನು ನಿಲ್ಲಿಸಬೇಕು. ಇದು ಚೀನಾಕ್ಕೆ ಮಾತ್ರವಲ್ಲ, ಎಲ್ಲರಿಗೂ ಅನ್ಯಾಯವಾಗಿದೆ” ಎಂದು ಪಿತ್ರೋಡಾ ಹೇಳಿದ್ದಾರೆ.
Watch: On whether US President Donald Trump and PM Modi will be able to control the threat from China, Indian Overseas Congress Chief Sam Pitroda says, “I don’t understand the threat from China. I think this issue is often blown out of proportion because the U.S. has a tendency… pic.twitter.com/UaBvPVqdsr
— IANS (@ians_india) February 17, 2025
ಕಾಂಗ್ರೆಸ್ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ನಮ್ಮ ಭೂಮಿಯಲ್ಲಿ 40,000 ಚದರ ಕಿ.ಮೀ. ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟವರಿಗೆ ಇನ್ನೂ ಚೀನಾದಿಂದ ಯಾವುದೇ ಬೆದರಿಕೆ ಕಾಣುತ್ತಿಲ್ಲ. ರಾಹುಲ್ ಗಾಂಧಿ ಪೀಪಲ್ಸ್ ಲಿಬರೇಶನ್ ಪಾರ್ಟಿ ಆಫ್ ಚೀನಾದೊಂದಿಗೆ ರಹಸ್ಯ ಒಪ್ಪಂದಕ್ಕೂ ಸಹಿ ಹಾಕಿದ್ದಾರೆ. ರಾಜೀವ್ ಗಾಂಧಿ ಚೀನಾದಿಂದ ಹಣವನ್ನು ಪಡೆದಿದ್ದರು. ಜವಾಹರಲಾಲ್ ನೆಹರು ಅಕ್ಸಾಯ್ ಚಿನ್ ಮತ್ತು UNSCಯಲ್ಲಿ ಭಾರತದ ಸ್ಥಾನವನ್ನು ಚೀನಾಕ್ಕೆ ನೀಡಿದರು. ಕಾಂಗ್ರೆಸ್ ಮತ್ತು ಚೀನಾ ನಡುವಿನ ಸ್ನೇಹವು ತುಂಬಾ ಹಳೆಯದು ಎಂದು ಟೀಕಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ