ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ

| Updated By: ರಶ್ಮಿ ಕಲ್ಲಕಟ್ಟ

Updated on: Dec 25, 2022 | 5:18 PM

ಚೀನಾ-ಭಾರತ ಸಂಬಂಧಗಳ ಸ್ಥಿರ ಮತ್ತು ಉತ್ತಮ ಬೆಳವಣಿಗೆಯ ದಿಕ್ಕಿನಲ್ಲಿ ಭಾರತದೊಂದಿಗೆ ಕೆಲಸ ಮಾಡಲು ನಾವು ಸಿದ್ಧರಾಗಿದ್ದೇವೆ ಎಂದು ಭಾರತ-ಚೀನಾ ಸಂಬಂಧ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ವಾಂಗ್ ಹೇಳಿದ್ದಾರೆ.

ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ
ವಾಂಗ್ ಯಿ
Follow us on

ಚೀನಾ ಸ್ಥಿರ ಮತ್ತು ಉತ್ತಮ ಸಂಬಂಧಗಳ ಮೂಲಕ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಚೀನಾದ (China) ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಹೇಳಿರುವುದಾಗಿ ಚೀನಾದ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್ ಅನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಚೀನಾ ಮತ್ತು ಭಾರತ ರಾಜತಾಂತ್ರಿಕ ಮತ್ತು  ಮಿಲಿಟರಿ ಮಾರ್ಗಗಳ ಮೂಲಕ ಸಂವಹನವನ್ನು ನಿರ್ವಹಿಸಿವ. ಗಡಿ ಪ್ರದೇಶಗಳಲ್ಲಿ ಸ್ಥಿರತೆಯನ್ನು ಎತ್ತಿಹಿಡಿಯಲು ಎರಡೂ ದೇಶಗಳು ಬದ್ಧವಾಗಿವೆ. ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ನಂತರ ಈ ಹೇಳಿಕೆ ಬಂದಿದೆ. ಘರ್ಷಣೆಯ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಹೇಳಿಕೆಯಲ್ಲಿ ಭಾರತ ಮತ್ತು ಚೀನಾವು ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯ 17 ನೇ ಅಧಿವೇಶನವನ್ನು ಡಿಸೆಂಬರ್ 20 ರಂದು ಚೀನಾದ ಬದಿಯಲ್ಲಿರುವ ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ಕರೆದಿದೆ ಎಂದಿದೆ.

ಮಧ್ಯಂತರದಲ್ಲಿ ಪಶ್ಚಿಮ ವಲಯದ ನೆಲದ ಮೇಲೆ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಉಭಯ ಕಡೆಯವರು ಒಪ್ಪಿಕೊಂಡರು ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

ಉಭಯ ಕಡೆಯವರು ನಿಕಟ ಸಂಪರ್ಕದಲ್ಲಿರಲು, ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಂವಾದವನ್ನು ಕಾಪಾಡಿಕೊಳ್ಳಲು ಮತ್ತು ಉಳಿದ ಸಮಸ್ಯೆಗಳ ಪರಸ್ಪರ ಸ್ವೀಕಾರಾರ್ಹ ಪರಿಹಾರವನ್ನು ಶೀಘ್ರವಾಗಿ ರೂಪಿಸಲು ಒಪ್ಪಿಕೊಂಡಿದ್ದಾರೆ ಎಂದು ಎಂಇಎ ಹೇಳಿಕೆ ತಿಳಿಸಿದೆ.

Published On - 5:17 pm, Sun, 25 December 22