AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ

ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ಗೆ ನಿಕಟವಾಗಿರುವ ಜನರಲ್ ಲೀ ಮತ್ತು ಸಿಂಗ್  ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಪ್ರಗತಿಯನ್ನು ಚರ್ಚಿಸುವ ಸಾಧ್ಯತೆಯಿದೆ.

ಏಪ್ರಿಲ್ 27ರಂದು ಚೀನಾ- ಭಾರತ ರಕ್ಷಣಾ ಸಚಿವರ ಭೇಟಿ; ಗಾಲ್ವಾನ್ ಸಂಘರ್ಷ ನಂತರ ಇದು ಮೊದಲನೇ ಸಭೆ
ಜನರಲ್ ಲೀ ಶಾಂಗ್‌ಫು- ರಾಜನಾಥ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Apr 25, 2023 | 8:41 PM

ದೆಹಲಿ: ಮೇ 2020 ರಲ್ಲಿ ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ(Galwan Clash) ಉಭಯ ರಾಷ್ಟ್ರಗಳ ಯೋಧರ ನಡುವೆ ಸಂಘರ್ಷವೇರ್ಪಟ್ಟನಂತರ ಚೀನಾದ ರಕ್ಷಣಾ ಸಚಿವ ಜನರಲ್ ಲೀ ಶಾಂಗ್‌ಫು (General Li Shangfu) ಅವರು ಗುರುವಾರ (ಏಪ್ರಿಲ್ 27) ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ಭೇಟಿಯಾಗಲಿದ್ದಾರೆ. ಇಬ್ಬರು ರಕ್ಷಣಾ ಸಚಿವರ ಸಭೆಯು ಪೂರ್ವ ಲಡಾಖ್ ಪ್ರದೇಶದಲ್ಲಿ ಸೇನಾ ಸಂಘರ್ಷ,  ಭಾರತ ಮತ್ತು ಚೀನಾದ ಮಿಲಿಟರಿ ಕಮಾಂಡರ್‌ಗಳ ನಡುವೆ ಕನಿಷ್ಠ 19 ಸುತ್ತಿನ ಮಾತುಕತೆಗಳ ನಂತರ ನಡೆಯುತ್ತಿದೆ. ರಕ್ಷಣಾ ಸಚಿವರು ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ಎಸ್‌ಸಿಒ ಒಳಗೆ ಭಯೋತ್ಪಾದನೆ ನಿಗ್ರಹ ಪ್ರಯತ್ನಗಳು ಮತ್ತು ಪರಿಣಾಮಕಾರಿ ಬಹುಪಕ್ಷೀಯತೆಗೆ ಸಂಬಂಧಿಸಿದ ಇತರ ವಿಷಯಗಳ ನಡುವೆ ಚರ್ಚಿಸುತ್ತಾರೆ ಎಂದು ಸರ್ಕಾರ ಇಂದು ಹೇಳಿಕೆಯಲ್ಲಿ ತಿಳಿಸಿದೆ.

ಜನರಲ್ ಲೀ ಅವರ ಭೇಟಿಯು ಪ್ರಾದೇಶಿಕ ಗುಂಪಿನ ಶಾಂಘೈ ಸಹಕಾರ ಸಂಘಟನೆ (SCO) ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರ ಸಭೆಯ ಭಾಗವಾಗಿದೆ.ಎಸ್​​ಸಿಒ, ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ತತ್ವಗಳ ಆಧಾರದ ಮೇಲೆ ನೀತಿಗಳನ್ನು ಅನುಸರಿಸುತ್ತದೆ. ಅದು ಪ್ರತಿ ರಾಷ್ಟ್ರದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಆದೇಶಿಸುತ್ತದೆ.

ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ಗೆ ನಿಕಟವಾಗಿರುವ ಜನರಲ್ ಲೀ ಮತ್ತು ಸಿಂಗ್  ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಪ್ರಗತಿಯನ್ನು ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

ಜನರಲ್ ಲೀ  ಅವರ ಭೇಟಿಗೆ ಮುಂಚಿತವಾಗಿ, ಚೀನಾದ ರಕ್ಷಣಾ ಸಚಿವಾಲಯ, ಭಾನುವಾರ ನಡೆದ ಕಾರ್ಪ್ಸ್ ಕಮಾಂಡರ್ ಮಟ್ಟದ 18 ನೇ ಸುತ್ತಿನ ಸಭೆಯಲ್ಲಿ, ಪೂರ್ವ ಲಡಾಖ್‌ನಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತ್ಯರ್ಥವನ್ನು ವೇಗಗೊಳಿಸಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ