ಗಾಲ್ವಾನ್ ಕಣಿವೆ ಸೇರಿದಂತೆ 4 ಸ್ಥಳಗಳಿಂದ ಚೀನಾ ಪಡೆ ಹಿಂದಕ್ಕೆ, ಜೈಶಂಕರ್​​​​, ಅಜಿತ್ ದೋವಲ್ ಮಾತುಕತೆ ಯಶಸ್ವಿ

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಬಿಕ್ಕಟ್ಟು ಅಂತ್ಯದ ಹಂತ ತಲುಪಿದೆ. ಈಗಾಗಲೇ ಭಾರತ ಮತ್ತು ಚೀನಾ ನಡುವಿನ ಸಂಬಂಧವನ್ನು ಉತ್ತಮಗೊಳಿಸಲು ಉಭಯ ದೇಶಗಳು ಮಾತುಕತೆ ನಡೆಸಿದೆ. ಈ ಮಾತುಕತೆಗೆ ರಷ್ಯಾದಲ್ಲಿ ನಡೆದ ಸಭೆ ಸೇತುವೆಯಾಗಿದೆ. ಇನ್ನು ಯಾವೆಲ್ಲ ಭೂವಿವಾದಗಳು ಇತ್ಯರ್ಥವಾಗಿದೆ. ಸಚಿವ ಜೈಶಂಕರ್​​ ಹೇಳಿರುವ 75 ಪ್ರತಿಶತದಷ್ಟು ಇತ್ಯರ್ಥ ಆಗಿರುವ ಭೂ ಪ್ರದೇಶಗಳು ಯಾವುವು? ಇನ್ನು ಯಾವೆಲ್ಲ ಸ್ಥಳಗಳ ವಿವಾದದಲ್ಲಿ, ಅವುಗಳ ವಿವಾದ ಅಂತ್ಯ ಯಾವಾಗ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಗಾಲ್ವಾನ್ ಕಣಿವೆ ಸೇರಿದಂತೆ 4 ಸ್ಥಳಗಳಿಂದ ಚೀನಾ ಪಡೆ ಹಿಂದಕ್ಕೆ, ಜೈಶಂಕರ್​​​​, ಅಜಿತ್ ದೋವಲ್ ಮಾತುಕತೆ ಯಶಸ್ವಿ
ಅಜಿತ್ ದೋವಲ್ ಮತ್ತು ವಾಂಗ್ ಯಿ ಭೇಟಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Sep 14, 2024 | 10:44 AM

ಚೀನಾ ಮತ್ತು ಭಾರತ ನಡುವೆ ಇರುವ ಬಿಕ್ಕಟ್ಟು ಮುಗಿಯುವ ಲಕ್ಷಣಗಳು ಕಾಣುತ್ತಿದೆ. ಚೀನಾ ಮತ್ತು ಭಾರತದ ನಡುವೆ ಇರುವ ಕಂದಕಕ್ಕೆ ವಿದೇಶಾಂಗ ಸಚಿವಾಲಯ ಸೇತುವೆಯಾಗಲಿದೆ. ದಶಕಗಳ ಕಾಲ ನಾವು ಭಾರತದ ಶುತ್ರು ಅಲ್ಲ, ಅದರೂ ಶುತ್ರ ಬುದ್ಧಿ ತೋರಿಸುತ್ತಿದ್ದ ಚೀನಾ. ಈಗ ಭಾರತ ಮತ್ತು ಚೀನಾದ ನಡುವಿನ ಬಿಕ್ಕಟ್ಟನ್ನು ಪರಿಹಾರ ಮಾಡಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ತಜ್ಞರು ಹೇಳುವ ಪ್ರಕಾರ ಭಾರತದ ಬೆಳವಣಿಗೆ, ಹಾಗೂ ಚೀನಾ ಬಹುದೊಡ್ಡ ಮಾರುಕಟ್ಟೆಯಾಗಿರುವ ಭಾರತವನ್ನು ಎದುರು ಹಾಕಿಕೊಳ್ಳವುದು ಸರಿಯಲ್ಲ ಎಂಬ ಬುದ್ಧಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚೀನಾ ಇದೀಗ ಗಾಲ್ವಾನ್ ಕಣಿವೆ ಸೇರಿದಂತೆ ಪೂರ್ವ ಲಡಾಖ್‌ನ ನಾಲ್ಕು ಸ್ಥಳಗಳಲ್ಲಿ ಸೈನಿಕರು ನಿರ್ಗಮಿಸಿದ್ದಾರೆ ಮತ್ತು ಗಡಿ ಪರಿಸ್ಥಿತಿ ಸ್ಥಿರವಾಗಿದೆ. ಹಾಗೂ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮಗೊಂಡಿದೆ ಎಂದು ಚೀನಾ ಶುಕ್ರವಾರ (ಸೆ.13) ಹೇಳಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್, ದ್ವಿಪಕ್ಷೀಯ ಬಾಂಧವ್ಯವನ್ನು ಸುಧಾರಿಸುತ್ತಿದೆ. ಒಂದು ಉತ್ತಮ ಸಂಬಂಧವನ್ನು ಸೃಷ್ಟಿಸಲು ಎರಡು ರಾಷ್ಟ್ರಗಳು ಕೆಲಸ ಮಾಡಬೇಕಿದೆ ಎಂದು ರಷ್ಯಾದಲ್ಲಿ ನಡೆದ ಸಭೆಯಲ್ಲಿ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ಹೇಳಿದರು.

ಸೆಪ್ಟೆಂಬರ್ 12ರಂದು, ಚೀನಾ ವಿದೇಶಾಂಗ ಸಚಿವಾಲಯದ ನಿರ್ದೇಶಕ ವಾಂಗ್ ಯಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಸೇಂಟ್ ಪೀಟರ್ಸ್ಬರ್ಗ್​​ನಲ್ಲಿ ಭೇಟಿಯಾದರು. ಈ ಸಭೆಯಲ್ಲಿ ಎರಡು ರಾಷ್ಟ್ರಗಳ ನಡುವೆ ಇರುವ ಗಡಿ ಭದ್ರತಾ ವಿಚಾರವಾಗಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಎರಡು ರಾಷ್ಟ್ರಗಳ ಉತ್ತಮ ಪ್ರಗತಿಯನ್ನು ಸಾಧಿಸಿದೆ. ಉಭಯ ದೇಶಗಳ ನಾಯಕರ ನಡುವೆ ಪರಸ್ಪರ ತಿಳುವಳಿಕೆ ಮತ್ತು ವಿಶ್ವಾಸವನ್ನು ಹೆಚ್ಚಿಸಲು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಲು ಈ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಇನ್ನು ಮಾಧ್ಯಮಗಳು ಪೂರ್ವ ಲಡಾಖ್‌ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ದ್ವಿಪಕ್ಷೀಯ ಸಂಬಂಧಗಳನ್ನು ಪುನರುಜ್ಜೀವನಗೊಳಿಸಲು ಭಾರತ ಮತ್ತು ಚೀನಾ ಮಾತುಕತೆ ನಡೆಸುತ್ತಿದ್ದೀಯಾ? ಎಂಬ ಪ್ರಶ್ನೆಗೆ ಚೀನಾ ವಿದೇಶಾಂಗ ಸಚಿವಾಲಯದ ನಿರ್ದೇಶಕ ವಾಂಗ್ ಯಿ ಅವರು ಉತ್ತರಿಸಿದ್ದಾರೆ. ಭಾರತೀಯ ಮಿಲಿಟರಿಗಳು ನಾಲ್ಕು ಕ್ಷೇತ್ರಗಳಲ್ಲಿ ವಿವಾದವನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ, ಗಾಲ್ವಾನ್ ಕಣಿವೆ ಸೇರಿದಂತೆ ಚೀನಾ-ಭಾರತದ ಗಡಿಯ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳಲ್ಲಿ ಉಭಯ ದೇಶಗಳು ತಮ್ಮ ಸೇನೆಯನ್ನು ಹಿಂದಕ್ಕೆ ತೆಗೆದುಕೊಂಡಿದೆ. ಚೀನಾ-ಭಾರತ ಗಡಿ ಪರಿಸ್ಥಿತಿ ಸ್ಥಿರವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಇನ್ನು ಇದಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಚೀನಾದೊಂದಿಗಿನ ಸರಿಸುಮಾರು 75 ಪ್ರತಿಶತದಷ್ಟು ಭೂವಿವಾದ ಸಮಸ್ಯೆಗಳು ಬಗೆಹರಿದಿವೆ. ಆದರೆ ಗಡಿಯಲ್ಲಿ ಹೆಚ್ಚುತ್ತಿರುವ ಮಿಲಿಟರೀಕರಣವು ದೊಡ್ಡ ಸಮಸ್ಯೆಯಾಗಿದೆ ಎಂಬ ಹೇಳಿಕೆಯನ್ನು ನೀಡಿದರು. ಈ ಹೇಳಿಕೆ ನೀಡಿದ ಒಂದು ದಿನದ ನಂತರ ಚೀನಾದಿಂದ ಈ ಹೇಳಿಕೆ ಬಂದಿದೆ.

ಜಿನೀವಾದಲ್ಲಿ ಥಿಂಕ್ ಟ್ಯಾಂಕ್‌ನಲ್ಲಿ ನಡೆದ ಸಂವಾದಾತ್ಮಕ ಅಧಿವೇಶನದಲ್ಲಿ ಭಾಗವಹಿಸಿದ ಸಚಿವ ಎಸ್ ಜೈಶಂಕರ್ ಜೂನ್ 2020ರ ಗಾಲ್ವಾನ್ ಕಣಿವೆಯ ಘರ್ಷಣೆದಿಂದ ಭಾರತ-ಚೀನಾ ಬಾಂಧವ್ಯದ ಮೇಲೆ ಪರಿಣಾಮ ಉಂಟು ಮಾಡಿದೆ. ಗಡಿಯಲ್ಲಿ ಒಂದು ದೇಶದಿಂದ ಹಿಂಸಚಾರ ನಡೆಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈಗಾಲೇ ಇದನ್ನು ಬಿಟ್ಟು ಬಾಕಿ ಉಳಿದಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭಾರತ ಮತ್ತು ಚೀನಾ 2020ರಿಂದ ಮಾತುಕತೆಯಲ್ಲಿ ತೊಡಗಿವೆ ಎಂದು ಹೇಳಿದ್ದಾರೆ. ಚೀನಾ ಮತ್ತು ಭಾರತ ಈಗಾಗಲೇ ಮಾತುಕತೆಯ ಮೂಲಕ ಸಂಬಂಧವನ್ನು ಪ್ರಗತಿಗೆ ತರುತ್ತಿದ್ದೇವೆ. ಸುಮಾರು 75 ಪ್ರತಿಶತದಷ್ಟು ವಿವಾದಗಳು ಇತ್ಯರ್ಥಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಗಾಜಾದಲ್ಲಿನ ಪರಿಸ್ಥಿತಿ ಅತ್ಯಂತ ಕಳವಳಕಾರಿ, ಕದನ ವಿರಾಮಕ್ಕೆ ಭಾರತ ಬೆಂಬಲ: ಜೈಶಂಕರ್

ಅಜಿತ್ ದೋವಲ್ ಮತ್ತು ವಾಂಗ್ ಯಿ ಭೇಟಿ

ಗುರುವಾರ ನಡೆದ ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ​​ಸಮಾವೇಶದಲ್ಲಿ NSA ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಭೇಟಿಯಲ್ಲಿ ಭಾರತ-ಚೀನಾ ಗಡಿ ಮಾತುಕತೆ ಕಾರ್ಯವಿಧಾನದ ವಿಶೇಷ ಪ್ರತಿನಿಧಿಯಾಗಿದ್ದಾರೆ.

ಈ ಭೇಟಿಯಲ್ಲಿ ಈಗಾಗಲೇ ಭಾರತ ಮತ್ತು ಚೀನಾದ ನಡುವಿನ 75 ಪ್ರತಿಶತದಷ್ಟು ವಿವಾದಗಳು ಅಂತ್ಯ ಕಂಡಿದೆ. ಉಳಿದ ವಿವಾದಗಳನ್ನು ಬಗೆಹರಿಸುವುದು ಬಾಕಿ ಇದೆ. ಅದನ್ನು ಕೂಡ ನಾವು ನಿಭಾಯಿಸುತ್ತೇವೆ ಎಂದು ಇಬ್ಬರು ನಾಯಕರು ಹೇಳಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಉಳಿದಿರುವ ಸಮಸ್ಯೆ ಇತ್ಯರ್ಥ ಮಾಡುವುದು ಮುಖ್ಯವಾಗಿದೆ. ಈ ಮೂಲಕ ಎರಡು ದೇಶಗಳ ನಡುವಿನ ಸಮಸ್ಯೆಗಳನ್ನು ಕೊನೆಗೊಳಿಸುವ ಮೂಲಕ ಸಂಬಂಧಗಳನ್ನು ಗಟ್ಟಿ ಮಾಡಬೇಕಿದೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ಪರಿಣಾಮವಾಗಿ ಉಭಯ ರಾಷ್ಟ್ರಗಳು ಘರ್ಷಣೆ ಸ್ಥಳಗಳಾದ ಪಾಂಗಾಂಗ್ ಸರೋವರ, ಗೋಗ್ರಾ ಮತ್ತು ಹಾಟ್ ಸ್ಪ್ರಿಂಗ್‌ನ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೈನ್ಯವನ್ನು ಹಿಂತೆಗೆದುಕೊಂಡಿವೆ. ಗಡಿಯಲ್ಲಿ ಶಾಂತಿ ನೆಲೆಸದಿದ್ದರೆ ಚೀನಾ ಜತೆಗಿನ ಬಾಂಧವ್ಯ ಸಾಮಾನ್ಯವಾಗಿರಲು ಸಾಧ್ಯವಿಲ್ಲ ಎಂದು ಭಾರತ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ