ರಾಹುಲ್ ಗಾಂಧಿಯ ಮೆದುಳಿನ ಚಿಪ್ ಕಳುವಾಗಿದೆ; ಚುನಾವಣಾ ವಂಚನೆಯ ಆರೋಪಕ್ಕೆ ಬಿಜೆಪಿ ಲೇವಡಿ
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ನಡೆದಿದೆ ಎನ್ನಲಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ವಂಚನೆಯ ಆರೋಪಗಳನ್ನು ಬಿಜೆಪಿ ಖಂಡಿಸಿದೆ. ಬಿಜೆಪಿ ನಾಯಕರು ರಾಹುಲ್ ಗಾಂಧಿಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ. ಕರ್ನಾಟಕದ ಬೆಂಗಳೂರಿನ 1 ವಿಧಾನಸಭಾ ಕ್ಷೇತ್ರದಲ್ಲೇ 1 ಲಕ್ಷ ನಕಲಿ ಮತದಾನ ನಡೆದಿದೆ ಎಂದು ರಾಹುಲ್ ಗಾಂಧಿ ಇಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.

ನವದೆಹಲಿ, ಆಗಸ್ಟ್ 7: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರದ ಚುನಾವಣೆಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಆರೋಪಿಸಿದ್ದರು. ಅದಕ್ಕೆ ದಾಖಲೆಗಳನ್ನೂ ತೋರಿಸಿದ್ದರು. ಆದರೆ, ರಾಹುಲ್ ಗಾಂಧಿಯ ಆರೋಪವನ್ನು ಬಿಜೆಪಿ ಲೇವಡಿ ಮಾಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ವಂಚನೆ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಅವರ ಸ್ಫೋಟಕ ಆರೋಪಗಳ ನಂತರ, ಬಿಜೆಪಿಯ ಹಿರಿಯ ನಾಯಕರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಸಂಘಟಿತ ಮತ್ತು ಬಿರುಸಿನ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಗ್ಗಿಸಿದ್ದಾರೆ, ಇದು ಭಾರತದ ಸಂವಿಧಾನದ ವಿರುದ್ಧದ ಪಿತೂರಿಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂಬ ಆರೋಪಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಹೇಳಿಕೆಯನ್ನು ತಳ್ಳಿಹಾಕಿದ ಫಡ್ನವೀಸ್, “ರಾಹುಲ್ ಗಾಂಧಿಯವರ ಮೆದುಳಿನಿಂದ ಚಿಪ್ ಕದಿಯಲಾಗಿದೆ ಎಂದು ನಾನು ಭಾವಿಸುತ್ತೇನೆ. ರಾಹುಲ್ ಗಾಂಧಿಯ ಮೆದುಳಿನಲ್ಲಿ ಚಿಪ್ ಇದೆಯೇ ಎಂದು ಒಮ್ಮೆ ಪರಿಶೀಲಿಸಿಕೊಳ್ಳುವುದು ಉತ್ತಮ” ಎಂದು ವ್ಯಂಗ್ಯವಾಡಿದ್ದಾರೆ. ಪಣಜಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಬಿಜೆಪಿ ನಾಯಕ ಫಡ್ನವೀಸ್, 2024ರ ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆದ ಮಹಾರಾಷ್ಟ್ರದಲ್ಲಿ ಮತದಾರರಿಗೆ ವಂಚನೆ ಮಾಡಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
#VoteChori हमारे लोकतंत्र पर Atom Bomb है। pic.twitter.com/jcLvhLPqM6
— Rahul Gandhi (@RahulGandhi) August 7, 2025
ಇದನ್ನೂ ಓದಿ: ಮತಗಳ್ಳತನದ ಅಂಕಿ-ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಿರುಗೇಟು
ಒಂದುವೇಳೆ ರಾಹುಲ್ ಗಾಂಧಿ ಹೇಳಿದಂತೆ ಚುನಾವಣೆಯಲ್ಲಿ ಅಕ್ರಮ ಅಥವಾ ನಕಲಿ ಮತದಾನ ನಡೆದಿದ್ದರೆ ಇದುವರೆಗೂ ಯಾರೂ ಯಾಕೆ ದೂರು ನೀಡಿಲ್ಲ? ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ರಾಹುಲ್ ಗಾಂಧಿ ರಾಜಕೀಯ ಅಸ್ಥಿರತೆಯನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಸಾಂವಿಧಾನಿಕ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಯಾವುದೇ ರಾಜ್ಯದಲ್ಲಿ ಚುನಾವಣೆಯಲ್ಲಿ ಗೆದ್ದಾಗ ಕಾಂಗ್ರೆಸ್ ಪಕ್ಷ ತಟಸ್ಥವಾಗಿರುತ್ತದೆ. ಆಗ ಚುನಾವಣಾ ಆಯೋಗವನ್ನು ದೂರುವುದಿಲ್ಲ, ಯಾವುದೇ ವಂಚನೆಯನ್ನು ಅದು ಹೇಳಿಕೊಳ್ಳುವುದಿಲ್ಲ. ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಗೆದ್ದಾಗ ಚುನಾವಣಾ ಆಯೋಗವು ಉತ್ತಮ ಕೆಲಸ ಮಾಡಿದೆ ಎಂದು ಅವರು ಹೇಳುವುದಿಲ್ಲ. ಆ ಸಮಯದಲ್ಲಿ, ಯಾವುದೇ ವಂಚನೆ ನಡೆದಿದೆ ಎಂದು ಕೂಡ ಹೇಳುವುದಿಲ್ಲ. ಆಗ ಕಾಂಗ್ರೆಸ್ ತಟಸ್ಥವಾಗಿರುತ್ತದೆ. ಕಾಂಗ್ರೆಸ್ ತೆಲಂಗಾಣದಲ್ಲಿ ಗೆದ್ದಾಗ ಮತ್ತು ಬಿಜೆಪಿ ಸೋತಾಗ ಆ ಪಕ್ಷವು ಸರ್ಕಾರ ರಚಿಸಿದಾಗ, ತೆಲಂಗಾಣದಲ್ಲಿ ಚುನಾವಣಾ ಆಯೋಗದಿಂದ ವಂಚನೆ ನಡೆದಿದೆ ಎಂದು ರಾಹುಲ್ ಗಾಂಧಿ ಹೇಳಿದ ಒಂದು ಪತ್ರಿಕಾಗೋಷ್ಠಿಯನ್ನು ನನಗೆ ತೋರಿಸಿ” ಎಂದು ಪಾತ್ರಾ ಟೀಕಿಸಿದ್ದಾರೆ.
राहुल गांधी के दिमाग में गड़बड़ी, वोटो की गिनती में नहीं।
सच बात यह है कि राहुल गांधी की पार्टी का वजूद खो गया है इसलिए वो भारत की लोकतांत्रिक संस्थाओं को बदनाम करने का काम कर रहे हैं, मैं इसका धिक्कार करता हूँ, जनता उन्हें सबक सिखायेगी!
( मुंबई | 7-8-2025)@RahulGandhi @ANI… pic.twitter.com/cxVAHkkX0V
— Devendra Fadnavis (@Dev_Fadnavis) August 7, 2025
ಇದನ್ನೂ ಓದಿ: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ‘ಅಟಂ ಬಾಂಬ್’ ಸಿಡಿಸಿದ ರಾಹುಲ್ ಗಾಂಧಿ
ಮಹಾರಾಷ್ಟ್ರದಲ್ಲಿ ಐದು ತಿಂಗಳಲ್ಲಿ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗಿದೆ. ನಾವು ಚುನಾವಣಾ ಆಯೋಗ ಸಂಪರ್ಕಿಸಿದರೆ ಯಾವುದೇ ಪ್ರತಿಕ್ರಿಯೆ ಇಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿತು. ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ನೀಡಲಿಲ್ಲ. ಸಂಜೆ ಐದೂವರೆ ಬಳಿಕ ಹೆಚ್ಚು ಮತದಾನವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಡಿಲಿಟ್ ಮಾಡಲಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ಜಯ ಸಾಧಿಸಿತು. ಬಿಜೆಪಿ ಒಂದೇ 132 ಸ್ಥಾನಗಳನ್ನು ಗೆದ್ದುಕೊಂಡಿತು. ಅದರ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ಕೂಡ ಕ್ರಮವಾಗಿ 57 ಮತ್ತು 41 ಸ್ಥಾನಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿತು. ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಹಿನ್ನಡೆ ಅನುಭವಿಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




