AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Oath Taking Ceremony: ಪ್ರಮಾಣವಚನಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಚಿರಾಗ್ ಪಾಸ್ವಾನ್, ಕುಮಾರಸ್ವಾಮಿ

ಇಂದು (ಭಾನುವಾರ) ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ 3ನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೂ ಮುನ್ನ ನರೇಂದ್ರ ಮೋದಿಯವರನ್ನು ದೆಹಲಿಯ ನಿವಾಸದಲ್ಲಿ ಚಿರಾಗ್ ಪಾಸ್ವಾನ್, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನೇತೃತ್ವದ ಎನ್ ಡಿಎ ನಾಯಕರು ಭೇಟಿಯಾಗಿದ್ದಾರೆ.

Narendra Modi Oath Taking Ceremony: ಪ್ರಮಾಣವಚನಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಚಿರಾಗ್ ಪಾಸ್ವಾನ್, ಕುಮಾರಸ್ವಾಮಿ
ಮೋದಿಯನ್ನು ಭೇಟಿಯಾದ ಚಿರಾಗ್ ಪಾಸ್ವಾನ್, ಕುಮಾರಸ್ವಾಮಿ
ಸುಷ್ಮಾ ಚಕ್ರೆ
|

Updated on:Jun 09, 2024 | 4:10 PM

Share

ನವದೆಹಲಿ: ಇಂದು ಸಂಜೆ ನಡೆಯುವ ಪ್ರಧಾನಮಂತ್ರಿ ಪ್ರಮಾಣವಚನಕ್ಕೂ (Narendra Modi swearing-in ceremony) ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎಯ ಹಲವು ನಾಯಕರು ನರೇಂದ್ರ ಮೋದಿಯವರನ್ನು (Narendra Modi) ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಎಲ್‌ಜೆಪಿಯ ಚಿರಾಗ್ ಪಾಸ್ವಾನ್, ಬಿಜೆಪಿಯ ಪಿಯೂಷ್ ಗೋಯಲ್, ಎಸ್. ಜೈಶಂಕರ್, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜೆಡಿಎಸ್ ನಾಯಕ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ದೆಹಲಿಯ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸೇರಿದ್ದಾರೆ.

ಮೂಲಗಳ ಪ್ರಕಾರ, 100 ದಿನಗಳ ಕಾರ್ಯಸೂಚಿಯ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಬೇಕಾಗಿದೆ ಎಂದು ಮೋದಿ ತಮ್ಮ ಎನ್‌ಡಿಎ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. ಆಯಾ ಇಲಾಖೆಗಳ ಬಾಕಿ ಇರುವ ಯೋಜನೆಗಳನ್ನು ಆದಷ್ಟು ಬೇಗ ಪರಿಶೀಲಿಸುವಂತೆ ತಿಳಿಸಿದ್ದಾರೆ. ಈಗಾಗಲೇ 5 ವರ್ಷಗಳ ಮಾರ್ಗಸೂಚಿ ಸಿದ್ಧವಾಗಿದೆ ಮತ್ತು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಎಲ್ಲರೂ ಅದರತ್ತ ಕೆಲಸ ಮಾಡಲು ಪ್ರಾರಂಭಿಸಬೇಕು ಎಂದು ಮೋದಿ ಅವರಿಗೆ ಹೇಳಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಹಾಕೂಟದಲ್ಲಿ ಸಂಭವನೀಯ ಸಚಿವರಿಗೆ ಕೆಲ ಮಹತ್ವದ ಸಲಹೆ ನೀಡಿದ ಮೋದಿ, ವಿಡಿಯೋ ನೋಡಿ

ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ದಾಖಲೆಯ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೂ ಮುನ್ನ ಮೋದಿ ಅವರು ಇಂದು ಬೆಳಗ್ಗೆ ದೆಹಲಿಯ ಸದೈವ್ ಅಟಲ್‌ನಲ್ಲಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುದ್ಧ ಸ್ಮಾರಕದಲ್ಲಿ ಮೋದಿಯವರ ಪ್ರತಿನಿಧಿಯಾಗಿ ಕಾಣಿಸಿಕೊಂಡರು.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ರಾಷ್ಟ್ರಗಳ ಮುಖ್ಯಸ್ಥರು ಇಂದು ಸಂಜೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಮೋದಿ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ರಜನೀಕಾಂತ್, ಅನಿಲ್ ಕಪೂರ್

ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇಂದು ನಡೆಯಲಿರುವ ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪಡೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

ಇಂದು ಸಂಜೆ 5 ಗಂಟೆಯಿಂದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅತಿಥಿಗಳು ಆಗಮಿಸಲಿದ್ದು, ಸಂಜೆ 7.15ಕ್ಕೆ ಪ್ರಮಾಣ ವಚನ ಸ್ವೀಕಾರ ಆರಂಭವಾಗಲಿದೆ. ವಿದೇಶಿ ಅತಿಥಿಗಳು ತಂಗುವ ರಾಷ್ಟ್ರ ರಾಜಧಾನಿಯ ಎಲ್ಲಾ ಹೋಟೆಲ್‌ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Sun, 9 June 24