ಉತ್ತರ ಪ್ರದೇಶದ ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ.
ಇದ್ದಕ್ಕಿದ್ದಂತೆ ವಿಚಿತ್ರವಾದ ವಾಸನೆ ಬರಲು ಶುರುವಾಗಿತ್ತು, ವಿದ್ಯಾರ್ಥಿನಿಯರ ಆರೋಗ್ಯವು ಹದಗೆಡಲು ಪ್ರಾರಂಭವಾಗಿತ್ತು. ಗ್ಯಾಸ್ ಸೋರಿಕೆಯಿಂದಾಗಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದೆ.
ಅನಿಲ ಸೋರಿಕೆಯಿಂದಾಗಿ 18 ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ಓದಿ: ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ
ಘಟನೆ ಬಳಿಕ ಐಒಸಿ ತಂಡ ಆಗಮಿಸಿದ್ದು, ಅಗ್ನಿಶಾಮಕ ದಳವೂ ಆಗಮಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ನಿನ್ನೆಯಿಂದ ಸಿಲಿಂಡರ್‌ನಲ್ಲಿ ಸಮಸ್ಯೆ ಇದೆ, ಆದರೆ ಯಾವುದೇ ಮಹತ್ವದ ಕ್ರಮ ಕೈಗೊಂಡಿಲ್ಲ. ಇಂದು ಇದ್ದಕ್ಕಿದ್ದಂತೆ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಎಲ್ಲರಿಗೂ ಪರಿಸ್ಥಿತಿಯ ಬಗ್ಗೆ ತಿಳಿದಿತ್ತು, ಆದರೆ ಈ ಅಪಾಯಕಾರಿ ಘಟನೆಯನ್ನು ತಡೆಯಲು ಯಾವುದೇ ತಕ್ಷಣದ ಕ್ರಮವನ್ನು ತೆಗೆದುಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:12 pm, Fri, 3 November 23