AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ

ಇತ್ತೀಚಿನದ ದಿನಗಳಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಮಾಡುವುದು ದೊಡ್ಡ ವಿಷಯವೇ ಅಲ್ಲವೆಂಬಂತಾಗಿದೆ. ಗೂಗಲ್, ಸಿನಿಮಾ ಮುಂತಾದವುಗಳಿಂದ ಕೊಲೆಯನ್ನು ಮಾಡುವುದು ಮತ್ತು ಅದನ್ನು ಮುಚ್ಚಿಹಾಕುವುದನ್ನು ಕಲಿತು ಅದನ್ನು ಪ್ರಯೋಗ ಕೂಡ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ತೆಲಂಗಾಣದಲ್ಲಿ ಬಾವಿಯೊಂದರಲ್ಲಿ ವ್ಯಕ್ತಿಯ ಶವದ ತುಂಡಾದ ಅಂಗಾಂಗಳು ಸಿಕ್ಕಿವೆ. ಈ ಭಯಾನಕ ಕೊಲೆಯ ಬಗ್ಗೆ ಮಾಹಿತಿ ಇಲ್ಲಿದೆ.

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ
Crime News Image Credit source: iStock
ಸುಷ್ಮಾ ಚಕ್ರೆ
|

Updated on: Feb 02, 2026 | 5:24 PM

Share

ತೆಲಂಗಾಣ, ಫೆಬ್ರವರಿ 2: ತೆಲಂಗಾಣದಲ್ಲಿ ಪೊಲೀಸರು ಬಾವಿಯೊಳಗೆ ವ್ಯಕ್ತಿಯೊಬ್ಬರ ಕತ್ತರಿಸಿದ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಇಲ್ಲಿನ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಾವಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಕತ್ತರಿಸಿದ ದೇಹದ (Deadbody) ಭಾಗಗಳನ್ನು ಕಾಮರೆಡ್ಡಿ ಪೊಲೀಸರು ಪತ್ತೆ ಮಾಡಿದ್ದಾರೆ.

ನೀರಿಲ್ಲದ ಬಾವಿಯೊಳಗೆ ಸುರಿಯಲಾಗಿದ್ದ ಕಸದಿಂದ ತ್ಯಾಜ್ಯ ಕಾಗದಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಲು ಬಂದ ವ್ಯಕ್ತಿಯೊಬ್ಬರು ಅದರ ನಡುವೆ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದರು. ಆ ಚೀಲವನ್ನು ತೆರೆದು ನೋಡಿದಾ ಈ ಘಟನೆ ಬೆಳಕಿಗೆ ಬಂದಿದೆ. ಅದನ್ನು ತೆರೆದ ನಂತರ, ಅದರೊಳಗೆ ದೇಹದ ಕೆಳಗಿನ ಭಾಗಗಳು ಪತ್ತೆಯಾಗಿವೆ. ತಲೆ ಮತ್ತು ಕೈಗಳು ಕಾಣೆಯಾಗಿವೆ. ನಂತರ ಅವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಹೆಂಡತಿಗೆ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಜ್ಯುವೆಲರಿ ಶಾಪ್​ನಿಂದ 7 ಕೋಟಿ ರೂ. ಚಿನ್ನ ಕದ್ದ ಗಂಡ!

ಮೃತ ವ್ಯಕ್ತಿಗೆ ತಿಳಿದಿರುವ ವ್ಯಕ್ತಿಗಳು ಆ ವ್ಯಕ್ತಿಯನ್ನು ಕೊಂದು, ದೇಹವನ್ನು ಬೇರೆಡೆ ಕೊಡಲಿಯಿಂದ ಕತ್ತರಿಸಿ ನಂತರ ಗುರುತನ್ನು ಮರೆಮಾಚಲು ದೇಹದ ಭಾಗಗಳನ್ನು ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

“ಈ ಸ್ಥಳದಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಳವಡಿಸಲಾದ ಕಣ್ಗಾವಲು ಕ್ಯಾಮೆರಾಗಳಿಂದ ಸಂಗ್ರಹಿಸಲಾದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಇದರಿಂದಾಗಿ ಪ್ಲಾಸ್ಟಿಕ್ ಚೀಲವನ್ನು ಬಾವಿಗೆ ಎಸೆದ ವ್ಯಕ್ತಿಗಳನ್ನು ಪತ್ತೆಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ