AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ದೂತಾವಾಸದ ಕಾನ್ಸಲ್ ಜನರಲ್ ಆಗಿ ಅಧಿಕಾರ ವಹಿಸಿಕೊಂಡ ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್

ಚೆನ್ನೈನಲ್ಲಿರುವ ಅಮೇರಿಕ ದೂತಾವಾಸದ ಮುಖ್ಯಸ್ಥರಾಗಿ (ಕಾನ್ಸಲ್ ಜನರಲ್) ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್ ಅವರು ಸೋಮವಾರ ಜುಲೈ 31 ರಂದು ಅಧಿಕಾರ ವಹಿಸಿಕೊಂಡರು.

ಚೆನ್ನೈ ದೂತಾವಾಸದ ಕಾನ್ಸಲ್ ಜನರಲ್ ಆಗಿ ಅಧಿಕಾರ ವಹಿಸಿಕೊಂಡ ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್
ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್
TV9 Web
| Edited By: |

Updated on: Aug 01, 2023 | 3:03 PM

Share

ಚೆನ್ನೈ, ಆಗಸ್ಟ್ 1,: ಚೆನ್ನೈನಲ್ಲಿರುವ ಅಮೇರಿಕ ದೂತಾವಾಸದ ಮುಖ್ಯಸ್ಥರಾಗಿ (ಕಾನ್ಸಲ್ ಜನರಲ್) ಕ್ರಿಸ್ಟೋಫರ್ ಡಬ್ಲ್ಯೂ. ಹಾಡ್ಜಸ್ (Christopher W. Hodges)ಅವರು ಸೋಮವಾರ ಜುಲೈ 31 ರಂದು ಅಧಿಕಾರ ವಹಿಸಿಕೊಂಡರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೇರಿಕ-ಭಾರತದ ಸಹಭಾಗಿತ್ವದ ಮಹತ್ವದ ಹೊತ್ತಿನಲ್ಲಿ ದಕ್ಷಿಣ ಭಾರತದಲ್ಲಿ ಅಮೇರಿಕವನ್ನು ಪ್ರತಿನಿಧಿಸುತ್ತಿರುವ ಗೌರವ ನನ್ನದು. ನಾವು ಸ್ಥಳೀಯ ಮತ್ತು ಪ್ರಾದೇಶಿಕವಾಗಿ ಮಾಡುವ ಕೆಲಸಗಳು ಉಭಯ ದೇಶಗಳ ನಡುವಣ ಶ್ರೀಮಂತ ವಾಣಿಜ್ಯ ಮತ್ತು ಶೈಕ್ಷಣಿಕ ಸಂಬಂಧಗಳು ಮತ್ತು ಬಾಹ್ಯಾಕಾಶ ವಲಯವೂ ಸೇರಿದಂತೆ ದ್ವಿಪಕ್ಷೀಯ ಸಹಭಾಗಿತ್ವವನ್ನು ವಿಸ್ತಾರಗೊಳಿಸುವಲ್ಲಿ ಕೊಡುಗೆ ನೀಡುತ್ತವೆ. ನಮ್ಮ ಜನರ ನಡುವಿನ ಬಾಂಧವ್ಯವನ್ನು ಇನ್ನಷ್ಟು ಹತ್ತಿರ ತರುವ ವಿಷಯಗಳಾದ ಅಮೇರಿಕದ ಪೌರರಿಗೆ ಬೆಂಬಲ ನೀಡುವುದು ಹಾಗೂ ಕಾನ್ಸಲರ್‌ ಸೇವೆಗಳನ್ನು ಒದಗಿಸುವುದಕ್ಕೆ ಹೆಮ್ಮೆಯಿದೆ.”

ಅಮೇರಿಕ- ಭಾರತದ ಸಂಬಂಧವು ಎರಡು ಸರ್ಕಾರಗಳ ನಡುವೆ ಮಾತ್ರವಲ್ಲ, ಉಭಯ ದೇಶಗಳ ಜನರ ನಡುವಿನ ಸಂಬಂಧ ಎಂಬುದನ್ನು ನಮ್ಮ ಪ್ರಯತ್ನಗಳು ಎತ್ತಿ ತೋರುತ್ತವೆ. ನಮ್ಮ ಪ್ರಾಂತ್ಯದಲ್ಲಿ ಬರುವ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್‌ ನಿಕೊಬಾರ್‌ ದ್ವೀಪ ಸಮೂಹ, ಲಕ್ಷದ್ವೀಪ ಮತ್ತು ಪುದುಚೆರಿಗಳಲ್ಲಿ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಎದುರು ನೋಡುತ್ತಿದ್ದೇನೆ ಎಂದು ಕಾನ್ಸಲ್‌ ಜನರಲ್‌ ಹೇಳಿದರು.

ಇದನ್ನೂ ಓದಿ:ಅಮೆರಿಕ-ಭಾರತ ನಡುವಿನ 75 ವರ್ಷದ ಬಾಂಧವ್ಯ, ವಿಶ್ವಾಸಾರ್ಹ ಪಾಲುದಾರಿಕೆ: ಭಾರತ ಜೊತೆ ಬಾಂಧವ್ಯ ವೃದ್ಧಿಗೆ 650ಕ್ಕೂ ಹೆಚ್ಚು ಅಮೆರಿಕ ಕಂಪನಿಗಳ ಕೊಡುಗೆ

ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಕಾನ್ಸಲ್‌ ಜನರಲ್‌ ಆಗಿ ಅಧಿಕಾರವಹಿಸಿಕೊಳ್ಳುವ ಮುನ್ನ, ಹಾಡ್ಜಸ್‌ ಅವರು ಕೋಆರ್ಡಿನೇಟರ್ ಫಾರ್ ಆಫ್ಘನ್ ರಿಲೊಕೇಷನ್ ಎಫರ್ಟ್ಸ್(ಕೇರ್) ಕಚೇರಿಯ ಹಿರಿಯ ಸಲಹೆಗಾರರಾಗಿದ್ದರು. ಅದಕ್ಕೂ ಮುನ್ನ ಬ್ಯೂರೋ ಫಾರ್ ನಿಯರ್ ಈಸ್ಟ್ರನ್ ಅಫೇರ್ಸ್ ನಲ್ಲಿ ಅಸಿಸ್ಟೆನ್ಸ್ ಕೋಆರ್ಡಿನೇಷನ್ ಅಂಡ್ ಪ್ರೆಸ್ ಅಂಡ್ ಪಬ್ಲಿಕ್ ಡಿಪ್ಲೊಮಸಿ ವಿಭಾಗದ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿಯಾಗಿ ಹಾಗೂ ಇಸ್ರೇಲಿ-ಪ್ಯಾಲೆಸ್ಟಿನಿಯನ್ ವ್ಯವಹಾರಗಳ ಉಪ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಕಡೆಯದಾಗಿ ವಿದೇಶದಲ್ಲಿ ಕಾರ್ಯನಿರ್ವಹಿಸಿದ್ದು ಜೆರೂಸಲೇಂನ ರಾಯಭಾರ ಕಚೇರಿಯಲ್ಲಿ ಅಸಿಸ್ಟೆಂಟ್ ಡೆಪ್ಯುಟಿ ಛೀಫ್ ಆಫ್ ಮಿಷನ್ ಮತ್ತು ಛೀಫ್ ಆಫ್ ದಿ ಪ್ಯಾಲೆಸ್ತೇನಿಯನ್ ಅಫೇರ್ಸ್ ಯೂನಿಟ್​​​ನಲ್ಲಿ.

ಹಾಡ್ಜಸ್‌ಅವರು 2000ರಲ್ಲಿ ವಿದೇಶಾಂಗ ಸೇವೆಗೆ ಸೇರಿಕೊಂಡರು. ಅವರುಜೆರೂಸಲೇಂ, ಹನೊಯ್, ವಿಯೆಟ್ನಾಂ; ಮತ್ತು ಅಕ್ಕ್ರಾ, ಘಾನಾದಲ್ಲಿ ಪಬ್ಲಿಕ್ ಅಫೇರ್ಸ್ ಆಫೀಸರ್ ಆಗಿ ಸೇವೆ ಸಲ್ಲಿಸಿದರು. ಅಲ್ಲದೆ ಆಸ್ಟ್ರಿಯಾ, ಜರ್ಮನಿ, ಸ್ವಿಟ್ಜರ್ ಲೆಂಡ್ ಮತ್ತು ಲಿಷೆನ್ ಸ್ಟೀನ್ ಗಳಲ್ಲಿ ಆಫೀಸ್ ಆಫ್ ದಿ ಸೆಂಟ್ರಲ್ ಯೂರೋಪಿಯನ್ ಅಫೇರ್ಸ್ ನಲ್ಲಿ ಡೆಪ್ಯುಟಿ ಡೈರೆಕ್ಟರ್ ಆಗಿ ದುಡಿದಿದ್ದಾರೆ. ಸುವಾ, ಫಿಜಿ ಮತ್ತು ಫ್ರಾಂಕ್ ಫರ್ಟ್, ಜರ್ಮನಿಗಳಲ್ಲೂ ಕೆಲಸ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ