AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ

ಶಾಸಕರ ನಕಲಿ ಸಹಿ ವಿವಾದಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಸಿಐಡಿ (CID) ತಂಡವೊಂದು ಕೊಲ್ಕತ್ತಾದ ಕಾಳೀಘಾಟ್‌ನಲ್ಲಿರುವ ಟಿಎಂಸಿಯ ಕೇಂದ್ರ ಕಚೇರಿ ಹಾಗೂ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಧಾವಿಸಿದೆ. ಈ ನಕಲಿ ಸಹಿ ವಿವಾದವೇ ಪಕ್ಷದಲ್ಲಿ ಹಿಂದೆಂದೂ ಕಾಣದ ಬಿರುಕನ್ನು ಉಂಟುಮಾಡಿದೆ ಎನ್ನಲಾಗಿದೆ. ಸಿಐಡಿ ಅಧಿಕಾರಿಗಳು ಕಾಳೀಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಮಹಿಳಾ ಪೊಲೀಸರ ಪಡೆಯೊಂದಿಗೆ ಟಿಎಂಸಿ ಕೇಂದ್ರ ಕಚೇರಿ ಹಾಗೂ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಸರ್ಚ್ ವಾರೆಂಟ್ ಜೊತೆ ಬಂದಿರುವ ಅವರು ದೀದಿ ಮನೆಯಲ್ಲಿ ಹುಡುಕಾಟ ನಡೆಸಿದ್ದಾರೆ.

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ
Mamata Benerjee
ಸುಷ್ಮಾ ಚಕ್ರೆ
|

Updated on: Jun 09, 2026 | 7:15 PM

Share

ಕೊಲ್ಕತ್ತಾ, ಜೂನ್ 9: ತೃಣಮೂಲ ಕಾಂಗ್ರೆಸ್ (TMC) ಶಾಸಕರ ‘ನಕಲಿ ಸಹಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಅಪರಾಧ ತನಿಖಾ ಇಲಾಖೆಯ (CID) ತಂಡವೊಂದು ಇಂದು ಟಿಎಂಸಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಈ ಕಚೇರಿಯು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸವೂ ಆಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ 30ಬಿ ಹರೀಶ್ ಚಟರ್ಜಿ ರಸ್ತೆಯ ನಿವಾಸಕ್ಕೆ ಆಗಮಿಸಿದ್ದಾರೆ. ಸಿಐಡಿ ತಂಡದೊಂದಿಗೆ ಕಾಳೀಘಾಟ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಮಹಿಳಾ ಪೊಲೀಸರ ದೊಡ್ಡ ಪಡೆಯೇ ಸ್ಥಳಕ್ಕೆ ಆಗಮಿಸಿತ್ತು. ಪಶ್ಚಿಮ ಬಂಗಾಳ ವಿಧಾನಸಭೆಯ ಸ್ಪೀಕರ್ ಅವರಿಗೆ ವಿರೋಧ ಪಕ್ಷದ ನಾಯಕರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಹಲವು ಟಿಎಂಸಿ ಶಾಸಕರ ಸಹಿಗಳನ್ನು ನಕಲು ಮಾಡಲಾದ ಆರೋಪದ ತನಿಖೆಯ ಭಾಗವಾಗಿ ಸಿಐಡಿ ಈ ಕ್ರಮ ಕೈಗೊಂಡಿದೆ.

ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳ ಪ್ರಕಾರ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಈ ಹಿಂದೆ ನೀಡಿದ ನೋಟಿಸ್‌ಗೆ ಸಲ್ಲಿಸಿದ ಉತ್ತರದ ಆಧಾರದ ಮೇಲೆ ಈ ಶೋಧ ಕಾರ್ಯವನ್ನು ಕೈಗೊಳ್ಳಲಾಗಿದೆ. “ಶಾಸಕರ ಸಹಿಗಳನ್ನು 30 ಬಿ ಹರೀಶ್ ಚಟರ್ಜಿ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಂಗ್ರಹಿಸಲಾಗಿದೆ ಎಂದು ಅಭಿಷೇಕ್ ಬ್ಯಾನರ್ಜಿ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದರು. ಆ ಹೇಳಿಕೆಯ ಆಧಾರದ ಮೇಲೆ ನಾವು ತನಿಖೆಗೆ ಇಲ್ಲಿಗೆ ಬಂದಿದ್ದೇವೆ” ಎಂದು ಸಿಐಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಆದರೆ, ತನಿಖಾ ತಂಡಕ್ಕೆ ಕಚೇರಿಯ ಆವರಣದೊಳಗೆ ಪ್ರವೇಶಿಸಲು ಅನುಮತಿ ನೀಡದ ಕಾರಣ ಕಚೇರಿ ನಿರ್ವಹಣಾ ಸಿಬ್ಬಂದಿ ಮತ್ತು ಅಧಿಕಾರಿಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಅಭಿಷೇಕ್ ಬ್ಯಾನರ್ಜಿ ಅವರ ಅನುಪಸ್ಥಿತಿಯಲ್ಲಿ ಶೋಧ ನಡೆಸುವುದಕ್ಕೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸಿತ್ತು.

ಹಿರಿಯ ಟಿಎಂಸಿ ಶಾಸಕ ಸೋವಂದೇಬ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಗುರುತಿಸುವಂತೆ ಕೋರಿ ಸ್ಪೀಕರ್‌ಗೆ ಕಳುಹಿಸಲಾದ ಪ್ರಸ್ತಾವನೆಯಲ್ಲಿ ಹಲವು ಶಾಸಕರ ಸಹಿಗಳನ್ನು ನಕಲು ಮಾಡಲಾಗಿದೆ ಎಂಬ ಆರೋಪದ ನಂತರ ಈ ವಿವಾದ ಭುಗಿಲೆದ್ದಿತ್ತು. ಈ ಆರೋಪಗಳು ಎಫ್‌ಐಆರ್ ದಾಖಲಾತಿ ಮತ್ತು ಸಿಐಡಿ ತನಿಖೆಗೆ ಕಾರಣವಾಗಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ